ನಟನೆಯಿಂದ ರಾಜಕಾರಣಕ್ಕೆ ಧುಮುಕಿರುವ ಬಹುಭಾಷಾ ನಟ ಕಮಲ್ ಹಾಸನ್ ಇದೀಗ 2021 ರ ತಮಿಳುನಾಡು ಚುನಾವಣೆಗೆ ತಯಾರಿ ನಡೆಸಿದ್ದಾರೆ.
ಇದಕ್ಕೆ ಸಾಕ್ಷಿ ಎಂಬಂತೆ ಇಂದು ಖುದ್ದು ಕಮಲ್ ಹಾಸನ್ ತಾವಾಗಿಯೇ ತಮ್ಮ ಮಕ್ಕಳ್ ನೀದಿ ಮಯ್ಯಂ ಪಕ್ಷದ ಜಿಲ್ಲಾ ಕಾರ್ಯದರ್ಶಿಗಳ ಜೊತೆ ಸಭೆ ನಡೆಸಿದ್ದಾರೆ.
ರಾಜ್ಯಾದ್ಯಂತ ಪ್ರವಾಸ ನಡೆಸಿ ಪಕ್ಷದ ಪರ ಜನರನ್ನು ಸೆಳೆಯುವ ಉದ್ದೇಶವಿಟ್ಟುಕೊಂಡು ಇಂದು ಜಿಲ್ಲಾ ಕಾರ್ಯದರ್ಶಿಗಳ ಜೊತೆಗೆ ಕಮಲ್ ಹಾಸನ್ ಸಭೆ ನಡೆಸಿದ್ದಾರೆ ಎನ್ನಲಾಗಿದೆ.
ರಾಜ್ಯದಲ್ಲಿ ಆಗಾಗ್ಗೆ ಬಿಜೆಪಿ ಮತ್ತು ಎಐಎಡಿಎಂಕೆ ಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸುವ ಮೂಲಕ ಕಮಲ್ ಹಾಸನ್ ಗುರುತಿಸಿಕೊಂಡಿದ್ದಾರೆ.
ಇನ್ನು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಒಡಿಸ್ಸಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹಾಗೂ ಪಶ್ಚಿಮ ಬಂಗಾಳ ಮುಳ್ಯಮಂತ್ರಿ ಮಮತಾ ಬ್ಯಾನರ್ಜಿಯವರ ಜೊತೆಗೆ ಮತ್ತೆ ಮತ್ತೆ ಮಾತುಕತೆ ನಡೆಸುವ ಮೂಲಕ ಪಕ್ಷದ ಸಿದ್ಧಾಂತ ರೂಪಿಸಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ.
ಅಲ್ಲದೇ ತನ್ನ ಪಕ್ಷದ ಸಿದ್ಧಾಂತ ಎಡ ಮತ್ತು ದ್ರಾವಿಡಿಯನ್ ಚಳವಳಿಯ ಸಿದ್ಧಾಂತಕ್ಕೆ ಹತ್ತಿರವಾದದ್ದು ಎಂದು ಹೇಳಿಕೊಂಡಿದ್ದಾರೆ ಎನ್ನಲಾಗಿದೆ.
ಕಮಲ್ ಹಾಸನ್ ಮಕ್ಕಳ್ ನೀದಿ ಮಯ್ಯಂ ಪಕ್ಷವನ್ನು ಫೆಬ್ರವರಿ 2018 ರಲ್ಲಿ ಘೋಷಿಸಲಾಯಿತು. ಅಲ್ಲದೇ 2019 ರ ಲೋಕಸಭಾ ಚುನಾವಣೆಯಲ್ಲಿ 39 ಕ್ಷೇತ್ರಗಳಲ್ಲಿ ಸ್ಪರ್ಧಿಸಿ ಒಂದು ಕ್ಷೇತ್ರದಲ್ಲಿ ಮಾತ್ರ ಗೆಲುವು ಸಾಧಿಸಿತ್ತು. ಈ ಚುನಾವಣೆಯಲ್ಲಿ ಬಂದಿದ್ದ ವೋಟ್ ಶೇರಿಂಗ್ ಬಗ್ಗೆ ನಂಬಿಕೆ ಇಟ್ಟುಕೊಂಡಿರುವ ಕಮಲ್ ಹಾಸನ್ ಮುಂದಿನ ದಿನಗಳಲ್ಲಿ ಪಕ್ಷವನ್ನು ಗಟ್ಟಿಗೊಳಿಸಬಹುದು ಎಂದು ಸಭೆಯಲ್ಲಿ ಚರ್ಚೆ ನಡೆಸಿದ್ದಾರೆ ಎನ್ನುವ ಮಾಹಿತಿ ಇದೆ.
More Stories
ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
ಓದಿನ ಮಹತ್ವ