2023ರ ವಿಧಾನಸಭಾ ಚುನಾವಣೆಯನ್ನು ತಮ್ಮದೇ ನೇತೃತ್ವದಲ್ಲಿ ಎದುರಿಸಲಾಗುತ್ತದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.
ಬಿಜೆಪಿ ರಾಜ್ಯದಲ್ಲಿ ಯಾರ ನೇತೃತ್ವದಲ್ಲಿ ರಾಜ್ಯ ಬಿಜೆಪಿ ಮುಂದಿನ ಚುನಾವಣೆ ಎದುರಿಸಲಿದೆ ಎಂಬ ಗೊಂದಲಕ್ಕೆ ಖುದ್ದು ಸಿಎಂ ಬಸವರಾಜ ಬೊಮ್ಮಾಯಿ ತೆರೆ ಎಳೆದಿದ್ದಾರೆ.
ಇಂಡಿಯಾ ಟುಡೇ ಕಾನ್‍ಕ್ಲೇವ್‍ನಲ್ಲಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಬೊಮ್ಮಯಿ ಅವರು, ಎಷ್ಟು ಅವಧಿಗೆ ಸಿಎಂ ಆಗಿರುತ್ತೇವೆ ಎನ್ನುವುದು ಮುಖ್ಯವಲ್ಲ. ಇರುವ ಅವಧಿಯಲ್ಲಿ ಏನು ಮಾಡುತ್ತೇವೆ ಎನ್ನುವುದು ಮುಖ್ಯ ಎಂದಿದ್ದಾರೆ.
ನನ್ನ ಸರ್ಕಾರದ ಸ್ಥಿರತೆ ಬಗ್ಗೆ ಯೋಚಿಸುವುದಿಲ್ಲ. ನಾನು ಈ ಅವಧಿಗೆ ಮಾತ್ರ ಸಿಎಂ ಆಗಿರುವುದಿಲ್ಲ. ಮುಂದಿನ ಅವಧಿಗೂ ಬಿಜೆಪಿಯನ್ನು ಅಧಿಕಾರಕ್ಕೆ ತರಲಿದ್ದೇನೆ. ರಾಷ್ಟ್ರೀಯ ನಾಯಕರ ಮಾರ್ಗದರ್ಶನದಲ್ಲಿ ಚುನಾವಣಾ ಎದುರಿಸಲಿದ್ದೇವೆ ಎಂದು ಸ್ಪಷ್ಟವಾಗಿ ಹೇಳಿದ್ದಾರೆ.
ಬಸವರಾಜ ಬೊಮ್ಮಾಯಿ ನೇತೃತ್ವದಲ್ಲೇ ಮುಂದಿನ ಚುನಾವಣೆಗೆ ಹೋಗುತ್ತೇವೆ ಎಂದು ಈ ಹಿಂದೆ ಅಮಿತ್ ಶಾ ಹೇಳಿದ್ದರು. ಆದರೆ ಇದಕ್ಕೆ ಕೆಲವರು ಪರೋಕ್ಷವಾಗಿ ಅಸಮಾಧಾನ ಹೊರಹಾಕಿ ಸಾಮೂಹಿಕ ನಾಯಕತ್ವದ ಮಂತ್ರ ಜಪಿಸಿದ್ದರು. ಈಗ ಬೊಮ್ಮಾಯಿ ಅವರೇ ನನ್ನ ನೇತೃತ್ವದಲ್ಲಿ ಚುನಾವಣೆ ಎದುರಿಸಲಾಗುತ್ತದೆ ಎಂದು ಹೇಳುವ ಮೂಲಕ ಅಧಿಕೃತವಾಗಿ ಸ್ಪಷ್ಟಪಡಿಸಿದ್ದಾರೆ.
- ಮಿಸೆಸ್ ಇಂಡಿಯಾ ಕಿರೀಟ ಗೆದ್ದ ಮದ್ದೂರಿನ ಡಾ. ಪ್ರಿಯಾ ಗೋಸ್ವಾಮಿ
- BCCI ನೂತನ ಕಾರ್ಯದರ್ಶಿಯಾಗಿ ದೇವಜಿತ್ ಸೈಕಿಯಾ ಆಯ್ಕೆ
- ಹುಟ್ಟುಹಬ್ಬದ ದಿನವೇ ಬಾಲಕನ ದುರ್ಮರಣ
- KPSC ಪರೀಕ್ಷೆಗಳಲ್ಲಿ ಕನ್ನಡ ದೋಷಗಳ ವಿವಾದ – ಮರುಪರೀಕ್ಷೆಗೆ ಪ್ರಬಲ ಒತ್ತಾಯ
- ಮಂಡ್ಯ ರೈತರನ್ನು ಕಾಡುತ್ತಿರುವ ವಕ್ಫ್ ಭೂಮಿ ವಿವಾದ
More Stories
ಹುಟ್ಟುಹಬ್ಬದ ದಿನವೇ ಬಾಲಕನ ದುರ್ಮರಣ
KPSC ಪರೀಕ್ಷೆಗಳಲ್ಲಿ ಕನ್ನಡ ದೋಷಗಳ ವಿವಾದ – ಮರುಪರೀಕ್ಷೆಗೆ ಪ್ರಬಲ ಒತ್ತಾಯ
ಮಂಡ್ಯ ರೈತರನ್ನು ಕಾಡುತ್ತಿರುವ ವಕ್ಫ್ ಭೂಮಿ ವಿವಾದ