ಬೆಳಗಾವಿ : ಡಿಸೆಂಬರ್ 23ಕ್ಕೆ ನಿಗದಿಯಾಗಿದ್ದ 545 ಪಿಎಸ್ಐ ಹುದ್ದೆಗಳ ಮರು ಪರೀಕ್ಷೆಯನ್ನು ರಾಜ್ಯ ಸರ್ಕಾರ ಒಂದು ತಿಂಗಳ ಕಾಲ ಮುಂದೂಡಿದೆ. 2024 ರ ಜನವರಿ 23ಕ್ಕೆ ಪರೀಕ್ಷೆ ನಡೆಯಲಿದೆ.
ಬೆಳಗಾವಿಯ ಸುವರ್ಣಸೌಧದಲ್ಲಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಪರೀಕ್ಷೆ ಮುಂದೂಡಿರುವುದಾಗಿ ಘೋಷಿಸಿದರು.
ಮರು ಪರೀಕ್ಷೆಯನ್ನು ಮುಂದೂಡುವಂತೆ ಆಡಳಿತ ಮತ್ತು ವಿಪಕ್ಷಗಳ ಸದಸ್ಯರು ಆಗ್ರಹಿಸಿದ ಹಿನ್ನೆಲೆಯಲ್ಲಿ ಪಿಎಸ್ ಐ ನೇಮಕಾತಿ ಮರು ಪರೀಕ್ಷೆಯನ್ನು ಡಿ.23ರ ಬದಲು ಜ. 23ಕ್ಕೆ ನಡೆಸುವುದಾಗಿ ಪರಮೇಶ್ವರ್ ತಿಳಿಸಿದರು .
ಪೊಲೀಸ್ ಇಲಾಖೆ ಈ ಹಿಂದೆ ನಡೆಸಿದ್ದ ಪರೀಕ್ಷೆಗೆ ಅರ್ಹತೆ ಪಡೆದ ಎಲ್ಲರಿಗೂ ಮರು ಪರೀಕ್ಷೆ ಬರೆಯಲು ಅವಕಾಶ ನೀಡಿದ್ದು, ಪರೀಕ್ಷೆ ಬೆಂಗಳೂರಿನಲ್ಲಿ ಮಾತ್ರ ನಡೆಯಲಿದೆ.
2021ರ ಜನವರಿ 21ರಂದು ಪೊಲೀಸ್ ಇಲಾಖೆಯು 545 PSI ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಿತ್ತು. 2021ರ ಅಕ್ಟೋಬರ್ 31ರಂದು ಲಿಖಿತ ಪರೀಕ್ಷೆ ನಡೆದಿತ್ತು. ಸಾಮಾಜಿಕ ಜಾಲತಾಣಗಳಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಬಳಿಕ ಪರೀಕ್ಷೆ ವಿವಾದದ ಸುಳಿಯಲ್ಲಿ ಸಿಲುಕಿತ್ತು. ಸಿ.ಪಿ ಯೋಗೇಶ್ವರ್ ಬಾವ ಮಹದೇವಯ್ಯ ಹತ್ಯೆ?; ಸುಪಾರಿ ಕೊಲೆ ಶಂಕೆ
545 ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆದ ಹಿನ್ನೆಲೆಯಲ್ಲಿ ಮರು ಪರೀಕ್ಷೆ ನಡೆಸಲು ಹೈಕೋರ್ಟ್ ಆದೇಶ ನೀಡಿತ್ತು. ನಂತರ ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ಇದೇ ಡಿಸೆಂಬರ್ 23ಕ್ಕೆ ಮರುಿ ಪರೀಕ್ಷೆ ನಡೆಸುವುದಾಗಿ ಪ್ರಕಟಿಸಿತ್ತು. ಆದರೆ ಹಲವು ಅಭ್ಯರ್ಥಿಗಳು ಮತ್ತು ಪ್ರತಿಪಕ್ಷ ಬಿಜೆಪಿ ಪರೀಕ್ಷೆ ಮುಂದೂಡುವಂತೆ ಒತ್ತಾಯಿಸಿದ್ದವು.
More Stories
ನಂಬುಗೆಯೇ ಇಂಬು
KSRTC : ಪ್ರಯಾಣಿಕರು UPI ಮೂಲಕ ಟಿಕೆಟ್ ಖರೀದಿಸಲು ಅವಕಾಶ
Weekly Horoscope: ವಾರದ ಜಾತಕ ನ. 24 ರಿಂದ ನ. 30, 2024.