ಮುಂಬೈ: 2025ರ ICC ಚಾಂಪಿಯನ್ಸ್ ಟ್ರೋಫಿಗೆ ಮೊದಲು ಟೀಮ್ ಇಂಡಿಯಾ ದೊಡ್ಡ ಹಿನ್ನಡೆಯನ್ನು ಎದುರಿಸಿದೆ. ಪ್ರಮುಖ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಗಾಯದ ಸಮಸ್ಯೆಯಿಂದಾಗಿ ಟೂರ್ನಿಯಿಂದ ಹೊರಗುಳಿದಿದ್ದಾರೆ. ಬಿಸಿಸಿಐ ಈ ಕುರಿತು ಅಧಿಕೃತ ಹೇಳಿಕೆ ನೀಡಿದ್ದು, ಹರ್ಷಿತ್ ರಾಣಾ ಅವರನ್ನು ಬದಲಿಗೆಯಾಗಿ ತಂಡಕ್ಕೆ ಸೇರಿಸಿಕೊಳ್ಳಲಾಗಿದೆ.
ಬುಮ್ರಾಗೆ ಬೆನ್ನು ನೋವು ಸಮಸ್ಯೆ
2024-25ರ ಬಾರ್ಡರ್-ಗವಾಸ್ಕರ್ ಟ್ರೋಫಿಯ ಕೊನೆಯ ಪಂದ್ಯದಲ್ಲಿ ಬುಮ್ರಾ ಬೆನ್ನು ನೋವಿನಿಂದ ಬಳಲುತ್ತಿದ್ದು, ಅವರು ಪಂದ್ಯವನ್ನು ಅರ್ಧದಲ್ಲೇ ತೊರೆದಿದ್ದರು. ಅವರನ್ನು ನೇಶನಲ್ ಕ್ರಿಕೆಟ್ ಅಕಾಡೆಮಿಗೆ (NCA) ಕಳುಹಿಸಿ ಚಿಕಿತ್ಸೆ ನೀಡಲಾಯಿತಾದರೂ, ಅವರು ಸಂಪೂರ್ಣ ಚೇತರಿಸಿಕೊಳ್ಳಲಾಗಿಲ್ಲ. ಇದರಿಂದಾಗಿ ಬಿಸಿಸಿಐ ಅವರಿಗೆ ವಿಶ್ರಾಂತಿ ನೀಡಲು ನಿರ್ಧಾರ ಮಾಡಿಕೊಂಡಿದೆ.
ಯಶಸ್ವಿ ಜೈಸ್ವಾಲ್ ಕೈಬಿಟ್ಟ ತಂಡ, ವರುಣ್ ಚಕ್ರವರ್ತಿ ಸೇರ್ಪಡೆ
ಇಂಗ್ಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಅಪೇಕ್ಷಿತ ಪ್ರದರ್ಶನ ನೀಡಲಾಗದ ಕಾರಣ ಯಶಸ್ವಿ ಜೈಸ್ವಾಲ್ ಅವರನ್ನು ತಂಡದಿಂದ ಕೈಬಿಡಲಾಗಿದ್ದು, ಅವರ ಸ್ಥಾನದಲ್ಲಿ ‘ಮಿಸ್ಟರಿ’ ಸ್ಪಿನ್ನರ್ ವರುಣ್ ಚಕ್ರವರ್ತಿ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ.
ಬಿಸಿಸಿಐ ಅಧಿಕೃತ ಹೇಳಿಕೆ
ಬಿಸಿಸಿಐ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ, “ಬೆನ್ನು ನೋವಿನಿಂದಾಗಿ ಜಸ್ಪ್ರೀತ್ ಬುಮ್ರಾ 2025ರ ಐಸಿಸಿ ಚಾಂಪಿಯನ್ಸ್ ಟ್ರೋಫಿಯಿಂದ ಹೊರಗುಳಿದಿದ್ದಾರೆ. ಅವರ ಬದಲಿಗೆ ಹರ್ಷಿತ್ ರಾಣಾ ಅವರನ್ನು ಆಯ್ಕೆ ಮಾಡಲಾಗಿದೆ. ವರುಣ್ ಚಕ್ರವರ್ತಿ ಕೂಡ ತಂಡದಲ್ಲಿ ಸ್ಥಾನ ಪಡೆದಿದ್ದಾರೆ” ಎಂದು ತಿಳಿಸಲಾಗಿದೆ.
ಇದನ್ನು ಓದಿ –ಮೈಸೂರಿನಲ್ಲಿ ಗಲಭೆ: ನಿಷೇಧಿತ ಸಂಘಟನೆಗಳ ಕೈವಾಡ ಶಂಕೆ
2025ರ ICC ಚಾಂಪಿಯನ್ಸ್ ಟ್ರೋಫಿಗೆ ಟೀಮ್ ಇಂಡಿಯಾ ತಂಡ:
- ರೋಹಿತ್ ಶರ್ಮಾ (ನಾಯಕ)
- ಶುಭಮನ್ ಗಿಲ್ (ಉಪನಾಯಕ)
- ವಿರಾಟ್ ಕೊಹ್ಲಿ
- ಶ್ರೇಯಸ್ ಅಯ್ಯರ್
- ಕೆಎಲ್ ರಾಹುಲ್ (ವಿಕೆಟ್ ಕೀಪರ್)
- ರಿಷಭ್ ಪಂತ್ (ವಿಕೆಟ್ ಕೀಪರ್)
- ಹಾರ್ದಿಕ್ ಪಾಂಡ್ಯ
- ಅಕ್ಷರ್ ಪಟೇಲ್
- ವಾಷಿಂಗ್ಟನ್ ಸುಂದರ್
- ಕುಲದೀಪ್ ಯಾದವ್
- ಹರ್ಷಿತ್ ರಾಣಾ
- ಮೊಹಮ್ಮದ್ ಶಮಿ
- ಅರ್ಷದೀಪ್ ಸಿಂಗ್
- ರವೀಂದ್ರ ಜಡೇಜಾ
- ವರುಣ್ ಚಕ್ರವರ್ತಿ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು