ಚಾರ್ ಧಾಮ್ಗೆ ತೆರಳುತ್ತಿದ್ದ 28 ಯಾತ್ರಾರ್ಥಿಗಳಿದ್ದ ಬಸ್ ಕಂದಕಕ್ಕೆ ಬಿದ್ದು 22 ಜನರು ಸಾವನ್ನಪ್ಪಿದ್ದಾರೆ.
ಯಮುನೋತ್ರಿಗೆ ತೆರಳುತ್ತಿದ್ದ . ಮಧ್ಯಪ್ರದೇಶದ ಪನ್ನಾ ಜಿಲ್ಲೆಯಿಂದ 28 ಯಾತ್ರಾರ್ಥಿಗಳನ್ನು ಕರೆದುಕೊಂಡು ಬಸ್ ಉತ್ತರಕಾಶಿ ಜಿಲ್ಲೆಯ ದಮ್ತಾ ಬಳಿ ಕಂದಕಕ್ಕೆ ಬಿದ್ದಿದೆ ಎಂದು ರಾಜ್ಯ ಡಿಜಿಪಿ ಅಶೋಕ್ ಕುಮಾರ್ ತಿಳಿಸಿದ್ದಾರೆ. ಇದನ್ನು ಓದಿ – ಅಮೆರಿಕ ಅಧ್ಯಕ್ಷ ಜೋ ಬೈಡನ್ ನಿವಾಸದ ಮೇಲೆ ವಿಮಾನವೊಂದು ಹಾರಾಟ ನಡೆಸಿದ್ದು, ದಾಳಿಯ ಭೀತಿ ಕಾಡಿತು
15 ಜನರ ಮೃತದೇಹಗಳನ್ನು ಹೊರತೆಗೆಯಲಾಗಿದೆ 6 ಮಂದಿ ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಅವರು ಹೇಳಿದರು. ಪೊಲೀಸರು ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್) ಪ್ರಸ್ತುತ ಸ್ಥಳದಲ್ಲಿದ್ದಾರೆ.
ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಘಟನೆ ಸಂಬಂಧ ಟ್ವೀಟ್ ಮಾಡಿ, ಉತ್ತರಾಖಂಡದ ಚಾರ್ ಧಾಮ್ಗೆ ತೀರ್ಥಯಾತ್ರೆಗಾಗಿ ಯಮುನೋತ್ರಿ ಧಾಮಕ್ಕೆ ಹೋಗುತ್ತಿದ್ದ ಬಸ್ಸು ಕಂದಕಕ್ಕೆ ಬಿದ್ದು ಮಧ್ಯಪ್ರದೇಶದ ಪನ್ನಾ ಜಿಲ್ಲೆಯ ಯಾತ್ರಿಕರು ಸಾವನ್ನಪ್ಪಿದ್ದಾರೆ. ಮೃತರ ಆತ್ಮಕ್ಕೆ ದೇವರು ಚಿರಶಾಂತಿ ನೀಡಲಿ ಮತ್ತು ಮೃತರ ಕುಟುಂಬ ಸದಸ್ಯರಿಗೆ ಅವರ ಅಗಲಿಕೆಯನ್ನು ಭರಿಸುವ ಶಕ್ತಿ ನೀಡಲಿ ಎಂದು ಟ್ವೀಟ್ ಮೂಲಕ ಸಂತಾಪ ವ್ಯಕ್ತಪಡಿಸಿದ್ದಾರೆ.
ಕೇಂದ್ರ ಸಚಿವ ಅಮಿತ್ ಶಾ ಅವರು ಅಪಘಾತದ ಬಗ್ಗೆ ಸಂತಾಪ ವ್ಯಕ್ತಪಡಿಸಿದ್ದು, ಅಪಘಾತದ ಬಗ್ಗೆ ಮುಖ್ಯಮಂತ್ರಿ ಪುಷ್ಕರ್ ಧಾಮಿ ಅವರೊಂದಿಗೆ ಮಾತನಾಡಿದ್ದೇನೆ ಎಂದು ತಿಳಿಸಿದ್ದಾರೆ. “ಉತ್ತರಾಖಂಡದಲ್ಲಿ ಭಕ್ತರ ಬಸ್ ಕಂದಕಕ್ಕೆ ಬಿದ್ದಿರುವ ಬಗ್ಗೆ ಕೇಳಲು ತುಂಬಾ ದುಃಖವಾಗಿದೆ. ಈ ಕುರಿತು ಮುಖ್ಯಮಂತ್ರಿ ಪುಷ್ಕರ್ ಧಾಮಿ ಅವರೊಂದಿಗೆ ಮಾತನಾಡಿದ್ದೇನೆ. ಸ್ಥಳೀಯ ಆಡಳಿತ ಮತ್ತು ಎಸ್‌ಡಿಆರ್‌ಎಫ್ ತಂಡಗಳು ರಕ್ಷಣಾ ಕಾರ್ಯದಲ್ಲಿ ತೊಡಗಿದ್ದು, ಗಾಯಾಳುಗಳನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿದೆ. ಎನ್‌ಡಿಆರ್‌ಎಫ್ ಕೂಡ ಶೀಘ್ರದಲ್ಲೇ ಅಲ್ಲಿಗೆ ತಲುಪಲಿದೆ ಎಂದು ಅವರು ಟ್ವೀಟ್ ಮಾಡಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

ಅಮೆರಿಕ ಅಧ್ಯಕ್ಷ ಜೋ ಬೈಡನ್ ನಿವಾಸದ ಮೇಲೆ ವಿಮಾನವೊಂದು ಹಾರಾಟ ನಡೆಸಿದ್ದು, ದಾಳಿಯ ಭೀತಿ ಕಾಡಿತು
ಬೈಡನ್ ಅವರನ್ನು ಹಾಗೂ ಅವರ ಕುಟುಂಬವನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ ಎಂದು ಶ್ವೇತಭವನ ತಿಳಿಸಿದೆ.
ಬೈಡನ್ ಅವರ ರೆಹೋಬೋತ್ ಬೀಚ್ ಬಳಿಯ ನಿವಾಸದ ಮೇಲೆ ನಿರ್ಬಂಧಿತ ವಾಯು ಪ್ರದೇಶದಲ್ಲಿ ಸಣ್ಣ ಖಾಸಗಿ ವಿಮಾನವೊಂದು ಹಾರಾಟ ನಡೆಸಿರುವುದು ಕಂಡುಬಂದಿದೆ.
ಈ ಹಿನ್ನೆಲೆ ದಾಳಿ ಭೀತಿಯಿಂದ ಅವರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ.


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು