ಬೆಂಗಳೂರು: ಭಾರತೀಯ ನೌಕಾಪಡೆಯಲ್ಲಿ 2025-26 ಬ್ಯಾಚ್‌ಗಾಗಿ 240 ಟ್ರೇಡ್ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಐಟಿಐ ಪಾಸಾದ ಅಭ್ಯರ್ಥಿಗಳಿಗೆ ನೌಕಾಪಡೆಯಲ್ಲಿ ತರಬೇತಿ ಪಡೆದು ದೇಶದ ಸಮುದ್ರ ರಕ್ಷಣೆಯಲ್ಲಿ ಕೊಡುಗೆ ನೀಡಲು ಇದು ಮಹತ್ವದ ಅವಕಾಶವಾಗಿದೆ.
ಭಾರತೀಯ ನೌಕಾಪಡೆಯ ಅಧಿಕೃತ ವೆಬ್‌ಸೈಟ್ www.joinindiannavy.gov.in ನಲ್ಲಿ ಶೀಘ್ರದಲ್ಲೇ ಆನ್‌ಲೈನ್ ಅರ್ಜಿ ನಮೂನೆ ಲಭ್ಯವಾಗಲಿದೆ. ಅರ್ಹ ಅಭ್ಯರ್ಥಿಗಳು ವೆಬ್‌ಸೈಟ್‌ಗೆ ಭೇಟಿ ನೀಡಿ ಅರ್ಜಿ ಭರ್ತಿ ಮಾಡಬಹುದು.
ಈ ನೇಮಕಾತಿಯು ಕೋಚ್ನ ನೌಕಾ ಹಡಗು ದುರಸ್ತಿ ಯಾರ್ಡ್ ಮತ್ತು ನೇವಲ್ ಏರ್‌ಕ್ರಾಫ್ಟ್ ಯಾರ್ಡ್ ನಲ್ಲಿ ನಡೆಯಲಿದೆ. ಈ ವ್ಯಾಪ್ತಿಯಲ್ಲಿ ವಿವಿಧ ಟ್ರೇಡ್‌ಗಳಲ್ಲಿ 240 ಹುದ್ದೆಗಳನ್ನು ಭರ್ತಿ ಮಾಡಲಾಗುವುದು.ಗ್ಯಾಸ್ ಕಟರ್ ಬಳಸಿ ಎಟಿಎಂನಲ್ಲಿದ್ದ 30 ಲಕ್ಷ ದೋಚಿದ ದುಷ್ಕರ್ಮಿಗಳು
ಇಂಡಿಯನ್ ನೇವಿ ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಆಯ್ಕೆ ಪ್ರಕ್ರಿಯೆ ಈ ಕೆಳಗಿನ ಹಂತಗಳಲ್ಲಿ ನಡೆಯಲಿದೆ:
ಲಿಖಿತ ಪರೀಕ್ಷೆ
ಸಂದರ್ಶನ
ದಾಖಲೆ ಪರಿಶೀಲನೆ (Document Verification – DV)
ವೈದ್ಯಕೀಯ ಪರೀಕ್ಷೆ
ಆಸಕ್ತ ಅಭ್ಯರ್ಥಿಗಳು ನಿಗದಿತ ದಿನಾಂಕದೊಳಗೆ ತಮ್ಮ ಅರ್ಜಿಯನ್ನು ಸಲ್ಲಿಸಿ ಈ ಅವಕಾಶವನ್ನು ಬಳಸಿಕೊಳ್ಳಬಹುದು.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು