ರಾಜ್ಯದಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಭಾರೀ ಏರಿಕೆ ಕಂಡಿದೆ. ಮಂಗಳವಾರ ಒಟ್ಟು 2,479 ಹೊಸ ಕೇಸ್ ದಾಖಲಾಗಿವೆ. ನಾಲ್ವರು ಮರಣ ಹೊಂದಿದ್ದಾರೆ.
ಬೆಂಗಳೂರಿನಲ್ಲಿ ಕೊರೊನಾ ಸ್ಫೋಟ ಮುಂದುವರಿದಿದೆ, ನಿನ್ನೆ 1,041 ಇದ್ದ ಕೇಸ್ ಇಂದು ಬರೋಬ್ಬರಿ 2,053ಕ್ಕೆ ಏರಿಕೆ ಕಂಡು ಮೂರನೇ ಅಲೆಯ ಆತಂಕ ಹೆಚ್ಚಿಸಿದೆ.
ರಾಜ್ಯದಲ್ಲಿ ಸತತ ಮೂರು ದಿನಗಳಿಂದ 1 ಸಾವಿರಕ್ಕೂ ಹೆಚ್ಚು ಕೇಸ್ ದಾಖಲಾಗಿತ್ತು. ಇಂದು ಆ ಪ್ರಮಾಣದಲ್ಲಿ ಭಾರೀ ಏರಿಕೆ ಕಂಡಿದ್ದು, 2 ಸಾವಿರಕ್ಕೂ ಅಧಿಕ ಕೇಸ್ ಪತ್ತೆಯಾಗಿರುವುದು ಸಾಕಷ್ಟು ಆತಂಕ ಮೂಡಿಸಿದೆ.
ಅಲ್ಲದೆ ರಾಜ್ಯ ಸರ್ಕಾರ ಇದೀಗ ಕಠಿಣ ನಿಯಮಗಳ ಮೂಲಕ ಈ ಏರಿಕೆಯತ್ತ ಮುಖಮಾಡಿರುವ ಕೊರೊನಾ ಪ್ರಕರಣಗಳನ್ನು ನಿಯಂತ್ರಣ ಮಾಡಲು ಮುಂದಾಗುತ್ತಿದೆ. ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದು ಅನಿವಾರ್ಯವಾಗಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು