ಶಿವಮೊಗ್ಗದಲ್ಲಿ ಹತ್ಯೆಯಾದ ಭಜರಂಗದಳದ ಕಾರ್ಯಕರ್ತ ಹರ್ಷ ಮನೆಗೆ ಭೇಟಿ ನೀಡಿದ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಹರ್ಷ ಕುಟುಂಬಕ್ಕೆ ಸಾಂತ್ವನ ಹೇಳಿ, ಸರ್ಕಾರದ ವತಿಯಿಂದ 25 ಲಕ್ಷ ರೂಪಾಯಿ ಚೆಕ್ ಹಸ್ತಾಂತರ ಮಾಡಿದರು.
ನಂತರ ಸುದ್ದಿಗಾರರ ಜೊತೆ ಮಾತನಾಡಿದ ಬಿಎಸ್ವೈ ಹಿಂದು ಸಂಘಟನೆ ಕಾರ್ಯಕರ್ತ ಹರ್ಷನ ಕೊಲೆ ಖಂಡನೀಯ. ಹಿಂದೂ ಸಮಾಜದ ಮುಖಂಡನಾಗಿ ಬೆಳೆಯುತ್ತಿದ್ದ ಹರ್ಷನ ಬೆಳವಣಿಗೆಯನ್ನು ಸಹಿಸಲಾಗದೆ ಕೊಲೆ ಮಾಡಲಾಗಿದೆ ಎಂದರು.
ಯಾರ ತಂಟೆಗೂ ಹೋಗದೇ ತನ್ನ ಪಾಡಿಗೆ ತಾನಿದ್ದ ಹರ್ಷನನ್ನು ಕೊಲೆ ಮಾಡಿರುವುದು ದುಃಖದ ವಿಷಯ ಎಂದು ಬೇಸರ ವ್ಯಕ್ತಪಡಿಸಿದರು.
ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳುವುದನ್ನು ಬಿಟ್ಟು ಬೇರೇನೂ ಮಾಡಲಾಗದು. ಎಷ್ಟೇ ಹಣ ನೀಡಿದರೂ ಅದು ನೆಪಮಾತ್ರಕ್ಕೆ ಅಷ್ಟೇ. ಇಂತಹ ಘಟನೆಗಳು ರಾಜ್ಯದಲ್ಲಿ ಮರುಕಳಿಸಬಾರದು ಎಂದರು
ಪ್ರಧಾನಿ ಮೋದಿ ಸಹ ಈ ಘಟನೆ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ. ದೇಶದಲ್ಲಿ ಹಿಂದೂ, ಮುಸ್ಲಿಂ, ಕ್ರೈಸ್ತರು ಒಟ್ಟಾಗಿ ಬಾಳಬೇಕು ಎಂಬುದು ನಮ್ಮೆಲ್ಲರ ಆಶಯ ಎಂದು ಹೇಳಿದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು