ಮಾಹಿತಿ ಒದಗಿಸಿದ ಕೊಳ್ಳೇಗಾಲ ತಹಶೀಲ್ದಾರ್‌ಗೆ 25 ಸಾವಿರ ದಂಡ : ಮಾಹಿತಿ ಹಕ್ಕು ಆಯೋಗದ ಆದೇಶ

Team Newsnap
1 Min Read

ನಿಗದಿತ ಸಮಯದಲ್ಲಿ ಮಾಹಿತಿ ನೀಡದ ಕೊಳ್ಳೇಗಾಲ ತಹಶೀಲ್ದಾರ್ ಎಂ.ಮಂಜುಳಾ ಅವರಿಗೆ ರಾಜ್ಯ ಮಾಹಿತಿ ಹಕ್ಕು ಆಯೋಗ 25 ಸಾವಿರ ದಂಡವನ್ನು ವಿಧಿಸಿದೆ.

ಕೊಳ್ಳೇಗಾಲ ತಾಲೂಕಿನ ಕುಣಗಳ್ಳಿ ಗ್ರಾಮದ ಕೆ.ಎಲ್. ಲಿಂಗರಾಜು ದೂರಿನ ಹಿನ್ನೆಲೆ ರಾಜ್ಯ ಮಾಹಿತಿ ಆಯುಕ್ತ ಎಚ್.ಸಿ ಸತ್ಯನ್ ತೆರೆದ ನ್ಯಾಯಾಲಯದಲ್ಲಿ ದಂಡ ವಿಧಿಸಿದ್ದಾರೆ.

ಪ್ರಕರಣದ ಹಿನ್ನೆಲೆ :

ಕೊಳ್ಳೇಗಾಲ ತಾಲೂಕಿನ ಕುಣಗಳ್ಳಿ ಗ್ರಾಮದ ನಿವಾಸಿ ಕೆ.ಎಲ್. ಲಿಂಗರಾಜು ಎಂಬುವರು 2022ರ ಜ.1 ರಂದು ಮಾಹಿತಿ ಹಕ್ಕು ಕಾಯ್ದೆಯಡಿ ತಹಶೀಲ್ದಾರ್‌ಗೆ ಅರ್ಜಿ ಸಲ್ಲಿಸಿದ್ದರು.

ಕುಣಗಳ್ಳಿ ಗ್ರಾಮದ ಸರ್ವೇ ನಂ.785ರಲ್ಲಿ ವಿಸ್ತೀರ್ಣ 4 ಎಕರೆ 76 ಸೆಂಟ್ಸ್‌ ಇದರ ಖಾತೆ ಆದೇಶ ಸಂಖ್ಯೆ ಕ.ಅ.16/16-17 ಕೋರ್ಟು ಆದೇಶ 2016ರ ಜೂನ್‌ 27ರಂದು ಸಾಲು ವಹಿವಾಟು ಸಂಖ್ಯೆ 194ಎಂ.ಆರ್. ನಂಬರ್ ಎಚ್.90 ಇದರ ತಹಸೀಲ್ದಾರ್ ಆದೇಶ ಜೆರಾಕ್ಸ್ ಪ್ರತಿಗಳು ಮತ್ತು ಕಮಲಮ್ಮ, ಚೆನ್ನಶೆಟ್ಟಿ, ಫ್ರಂಕು ಲೂಯಿಸ್, ಇವರುಗಳು ತಹಶೀಲ್ದಾರ್ ಕೋರ್ಟಿಗೆ ಸಲ್ಲಿಸಿದ್ದ ಪ್ರತಿ ಒಂದು ದಾಖಲೆಗಳ ಜೆರಾಕ್ಸ್ ಪ್ರತಿಗಳನ್ನು ದೃಢೀಕರಿಸಿಕೊಡಲು ಕೋರಿದ್ದರು.

ತಹಶೀಲ್ದಾರ್ ಸಕಾಲಕ್ಕೆ ಮಾಹಿತಿ ನೀಡದ ಹಿನ್ನೆಲೆ ಅರ್ಜಿದಾರರು ಆಯೋಗಕ್ಕೆ ಮೇಲ್ಮನವಿ ಸಲ್ಲಿಸಿದ್ದರು. ಪರಿಣಾಮ ರಾಜ್ಯ ಮಾಹಿತಿ ಹಕ್ಕಿನ ಆಯೋಗವು ತಹಶೀಲ್ದಾರ್ ಮಂಜುಳಾ ಅವರಿಗೆ ದಂಡವಿಧಿಸಿದ್ದಾರೆ.

Share This Article
Leave a comment