ಬೆಂಗಳೂರು : ರಾಜ್ಯದಲ್ಲಿ ಏಪ್ರಿಲ್ ನಿಂದ ಇಲ್ಲಿಯವರೆಗೆ 251 ರೈತರು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ವರದಿಯೊಂದು ಹೇಳಿದೆ ರೈತರ ಆತ್ಮಹತ್ಯೆಗಳಿಗೆ ಲೇವಾದೇವಿಗಾರರು ಮತ್ತು ಬ್ಯಾಂಕ್‌ಗಳ ಕಿರುಕುಳವೇ ಮುಖ್ಯ ಕಾರಣ ಎನ್ನಲಾಗಿದೆ.
ಮುಂಗಾರು ಮಳೆ ಕೊರತೆಯಿಂದಾಗಿ ಬೆಳೆ ನಷ್ಟವಾಗಿದ್ದು, ಸಾಲವನ್ನು ಮರುಪಾವತಿಸಲು ಸಾಧ್ಯವಾಗದೆ ಹೆಚ್ಚಿನ ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ವಿಚಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಗಂಭೀರವಾಗಿ ಪರಿಗಣಿಸಿದ್ದು, ರೈತರಿಗೆ ತೊಂದರೆ ನೀಡುವ ಲೇವಾದೇವಿಗಾರರ ವಿರುದ್ಧ ಕ್ರಮಕೈಗೊಳ್ಳುವಂತೆ ಜಿಲ್ಲಾ ಪಂಚಾಯಿತಿ ಅಧಿಕಾರಿಗಳು ಮತ್ತು ಸಿಇಒಗಳಿಗೆ ಸೂಚಿಸಿದ್ದಾರೆ.
ಬರಪೀಡಿತ ತಾಲೂಕುಗಳ ಪಟ್ಟಿ ಬಿಡುಗಡೆ ಮಾಡಿದ ಬಳಿಕ ಮೃತ ರೈತರ ಕುಟುಂಬಗಳಿಗೆ ಪರಿಹಾರ ನೀಡುವಂತೆ ಸೂಚಿಸಿದ್ದಾರೆ. ಸದ್ಯದಲ್ಲೇ ಪಟ್ಟಿ ಬಿಡುಗಡೆಯಾಗುವ ನಿರೀಕ್ಷೆ ಇದೆ. ಈವರೆಗೆ ಕೇವಲ 174 ಪ್ರಕರಣಗಳು ಮಾತ್ರ ಇತ್ಯರ್ಥಗೊಂಡಿವೆ ಎಂದ ಸಿದ್ದರಾಮಯ್ಯ, ಆತ್ಮಹತ್ಯೆ ಮಾಡಿಕೊಂಡ ರೈತರ ಉಳಿದ ಕುಟುಂಬಗಳಿಗೆ ಶೀಘ್ರವೇ ಪರಿಹಾರ ವಿತರಿಸಲು ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.ರಾಜ್ಯದಲ್ಲಿ 16 KAS ಅಧಿಕಾರಿಗಳ ವರ್ಗಾವಣೆ
ಏಪ್ರಿಲ್‌ನಿಂದ 251 ಆತ್ಮಹತ್ಯೆ ಪ್ರಕರಣಗಳು ವರದಿಯಾಗಿರುವುದಾಗಿ ಮುಖ್ಯಮಂತ್ರಿ ಕಚೇರಿ ಖಚಿತಪಡಿಸಿದೆ. ಮೇ ತಿಂಗಳಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ರೈತರ ಆತ್ಮಹತ್ಯೆ ಕುರಿತು ಅಧಿಕೃತ ಅಂಕಿಅಂಶ ಹೊರಬರುತ್ತಿರುವುದು ಇದೇ ಮೊದಲಾಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ
- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು