January 10, 2025

Newsnap Kannada

The World at your finger tips!

WhatsApp Image 2022 05 27 at 9.25.20 PM

ಮಹಿಳೆಯರ ಹೊಟ್ಟೆಯಲ್ಲಿತ್ತು 28 ಕೋಟಿ ಮೌಲ್ಯದ ಕೊಕೇನ್

Spread the love

ಉಗಾಂಡಾದಿಂದ ಪ್ರಯಾಣಿಸುತ್ತಿದ್ದ ಇಬ್ಬರು ಮಹಿಳೆಯರ ಹೊಟ್ಟೆಯಲ್ಲಿ 181 ಕ್ಯಾಪ್ಸುಲ್‌ಗಳಲ್ಲಿ ಅಡಗಿಸಿಟ್ಟು ಸಾಗಿಸುತ್ತಿದ್ದ 28 ಕೋಟಿ ಮೌಲ್ಯದ ಕೊಕೇನ್ ಪತ್ತೆಯಾಗಿದ್ದು, ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ.ಇಬ್ಬರು ಮಹಿಳೆಯರು ಸುಮಾರು 2 ಕೆಜಿ ಕೊಕೇನ್ ಅನ್ನು ನುಂಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಒಬ್ಬ ಮಹಿಳೆ ತನ್ನ ಹೊಟ್ಟೆಯೊಳಗೆ 81 ಮಾತ್ರೆಗಳನ್ನು ತುಂಬಿಕೊಂಡಿದ್ದರು. ಆಕೆಯನ್ನು ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಗೆ ಕರೆದೊಯ್ದು ವೈದ್ಯಕೀಯ ತಪಾಸಣೆಗೆ ಒಳಪಡಿಸಿದಾಗ ಸುಮಾರು 891 ಗ್ರಾಂ ತೂಕದ ತೂಕದ ಕೊಕೇನ್ ಪತ್ತೆಯಾಗಿದ್ದು, ಪೊಲೀಸರು ವಶಪಡಿಸಿಕೊಂಡಿದ್ದಾರೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಇದರ ಮೌಲ್ಯ 13.6 ಕೋಟಿಗಳಷ್ಟಿದೆ ಎಂದು ಹೇಳಿದ್ದಾರೆ.

ಬಂಧಿತ ಮಹಿಳೆಯ ಹೊಟ್ಟೆಯಲ್ಲಿ ಸುಮಾರು 80 ಕ್ಯಾಪ್ಸುಲ್‌ಗಳು ಬಚ್ಚಿಟ್ಟಿರುವುದು ಪತ್ತೆಯಾಗಿತ್ತು. ಆಕೆಯನ್ನು ಇದೇ ಆಸ್ಪತ್ರೆಗೆ ದಾಖಲಿಸಿ 0.957 ಕೆಜಿ ತೂಕದ ಕೊಕೇನ್ ಇರುವುದನ್ನು ಪತ್ತೆ ಹಚ್ಚಿ ಅದನ್ನು ವಶಪಡಿಸಿಕೊಳ್ಳಲಾಗಿತ್ತು. ಇದರ ಮೌಲ್ಯ 14 ಕೋಟಿಗಳಷ್ಟಿತ್ತು ಎಂದು ಹೇಳಿದ್ದಾರೆ.

Copyright © All rights reserved Newsnap | Newsever by AF themes.
error: Content is protected !!