ಉಗಾಂಡಾದಿಂದ ಪ್ರಯಾಣಿಸುತ್ತಿದ್ದ ಇಬ್ಬರು ಮಹಿಳೆಯರ ಹೊಟ್ಟೆಯಲ್ಲಿ 181 ಕ್ಯಾಪ್ಸುಲ್ಗಳಲ್ಲಿ ಅಡಗಿಸಿಟ್ಟು ಸಾಗಿಸುತ್ತಿದ್ದ 28 ಕೋಟಿ ಮೌಲ್ಯದ ಕೊಕೇನ್ ಪತ್ತೆಯಾಗಿದ್ದು, ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ.ಇಬ್ಬರು ಮಹಿಳೆಯರು ಸುಮಾರು 2 ಕೆಜಿ ಕೊಕೇನ್ ಅನ್ನು ನುಂಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಒಬ್ಬ ಮಹಿಳೆ ತನ್ನ ಹೊಟ್ಟೆಯೊಳಗೆ 81 ಮಾತ್ರೆಗಳನ್ನು ತುಂಬಿಕೊಂಡಿದ್ದರು. ಆಕೆಯನ್ನು ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಗೆ ಕರೆದೊಯ್ದು ವೈದ್ಯಕೀಯ ತಪಾಸಣೆಗೆ ಒಳಪಡಿಸಿದಾಗ ಸುಮಾರು 891 ಗ್ರಾಂ ತೂಕದ ತೂಕದ ಕೊಕೇನ್ ಪತ್ತೆಯಾಗಿದ್ದು, ಪೊಲೀಸರು ವಶಪಡಿಸಿಕೊಂಡಿದ್ದಾರೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಇದರ ಮೌಲ್ಯ 13.6 ಕೋಟಿಗಳಷ್ಟಿದೆ ಎಂದು ಹೇಳಿದ್ದಾರೆ.
ಬಂಧಿತ ಮಹಿಳೆಯ ಹೊಟ್ಟೆಯಲ್ಲಿ ಸುಮಾರು 80 ಕ್ಯಾಪ್ಸುಲ್ಗಳು ಬಚ್ಚಿಟ್ಟಿರುವುದು ಪತ್ತೆಯಾಗಿತ್ತು. ಆಕೆಯನ್ನು ಇದೇ ಆಸ್ಪತ್ರೆಗೆ ದಾಖಲಿಸಿ 0.957 ಕೆಜಿ ತೂಕದ ಕೊಕೇನ್ ಇರುವುದನ್ನು ಪತ್ತೆ ಹಚ್ಚಿ ಅದನ್ನು ವಶಪಡಿಸಿಕೊಳ್ಳಲಾಗಿತ್ತು. ಇದರ ಮೌಲ್ಯ 14 ಕೋಟಿಗಳಷ್ಟಿತ್ತು ಎಂದು ಹೇಳಿದ್ದಾರೆ.
- ಡಾ. ವೀರೇಂದ್ರ ಹೆಗ್ಗಡೆ, ಇಳಯರಾಜ ಸೇರಿ ನಾಲ್ವರು ರಾಜ್ಯಸಭೆಗೆ ನಾಮ ನಿರ್ದೇಶನ
- KRSಗೆ 30 ಸಾವಿರ ಕ್ಯೂಸೆಕ್ ಒಳಹರಿವು – ಪ್ರವಾಹದ ಮುನ್ನೆಚ್ಚರಿಕೆ : ಆಣೆಕಟ್ಟೆ ಭರ್ತಿಗೆ 9 ಅಡಿ ಬಾಕಿ
- 18 ದಿನಗಳಲ್ಲಿ 8 ಬಾರಿ ತಾಂತ್ರಿಕ ದೋಷ: ಸ್ಪೈಸ್ ಜೆಟ್ ಗೆ ಡಿಜಿಸಿಎ ನೊಟೀಸ್
- ವೆಸ್ಟ್ ಇಂಡೀಸ್ ತಂಡಕ್ಕೆ ಟೀಂ ಇಂಡಿಯಾ ಪ್ರಕಟ : ಶಿಖರ್ ಧವನ್ ನಾಯಕ – ಕೊಹ್ಲಿ, ರೋಹಿತ್ ಗೆ ವಿಶ್ರಾಂತಿ
- ಕೇಂದ್ರ ಸಚಿವ ಸ್ಥಾನಕ್ಕೆ ಮುಖ್ತಾರ್ ಅಬ್ಬಾಸ್ ನಖ್ವಿ, ಆರ್ಸಿಪಿ ಸಿಂಗ್ ರಾಜೀನಾಮೆ
More Stories
ಬೆಂಗಳೂರು ನಗರ ಮಾಜಿ DC ಮಂಜುನಾಥ್ ಫ್ಲ್ಯಾಟ್ ಮೇಲೆ ACB ದಾಳಿ: 30 ಎಕರೆ ಜಮೀನು ದಾಖಲೆ ಪತ್ತೆ
ಗುರುವನ್ನೇ ಹತ್ಯೆ ಮಾಡಿದ ಇಬ್ಬರು ಪಾಪಿಗಳನ್ನು ಪೋಲಿಸರು ಬಂಧಿಸಿದ್ದೇ ರೋಚಕ ಕಥೆ
40 ಸೆಕೆಂಡಿನಲ್ಲಿ 60ಕ್ಕೂ ಹೆಚ್ಚು ಬಾರಿ ಚುಚ್ಚಿ ಆಸ್ತಿಗಾಗಿ ಗುರೂಜಿ ಕೊಲೆ: ವನಜಾಕ್ಷಿ ಬಂಧನ