ಬಿಸಿಊಟದಲ್ಲಿ ಹಲ್ಲಿ ಬಿದ್ದ ಪರಿಣಾಮ 29 ವಿದ್ಯಾರ್ಥಿಗಳು ಅಸ್ವಸ್ಥಗೊಂಡು ಮಂಡ್ಯ ಜಿಲ್ಲಾ ಆಸ್ಪತ್ರೆಗೆ ದಾಖಲಾದ ಘಟನೆ ಮದ್ದೂರು ತಾಲೂಕು ಅಂಬರಹಳ್ಳಿ ಸರ್ಕಾರಿ ಶಾಲೆಯಲ್ಲಿ ಜರುಗಿದೆ.
19 ವಿದ್ಯಾರ್ಥಿನಿಯರು ಹಾಗೂ 10 ಮಂದಿ ವಿದ್ಯಾರ್ಥಿಗಳು ಹಲ್ಲಿ ಬಿದ್ದ ಬಿಸಿಊಟವನ್ನು ಸೇವಿಸಿದ ನಂತರ ಮಕ್ಕಳು ಅಸ್ವಸ್ಥರಾದರು. ತಕ್ಷಣ ಅವರೆಲ್ಲರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ, ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಶಾಲೆಯಲ್ಲಿ ಬಿಸಿ ಊಟ ಸಿದ್ದ ಮಾಡಿ ಇಟ್ಟಾಗ ಮೇಲಿನಿಂದ ಹಲ್ಲಿ ಬಿದ್ದು ಅವಾಂತರ ಸೃಷ್ಠಿಯಾಗಿದೆ. ಅದೇ ಊಟವನ್ನು ಮಕ್ಕಳು ಊಟ ಮಾಡಿ ಅಸ್ವಸ್ಥರಾಗಿದ್ದಾರೆ. ರಾಜ್ಯದಲ್ಲಿ ಜಿಪಂ – ತಾಪಂ ಚುನಾವಣೆಗೆ ಮತ್ತೆ ಕಂಟಕ : ಕ್ಷೇತ್ರ ವಿಂಗಡಣೆ – ಮೀಸಲಾತಿ ಮೇಲೆ ಪರಿಣಾಮ ಸಾಧ್ಯತೆ
ವಿದ್ಯಾರ್ಥಿಗಳು ವಾಂತಿ ಭೇದಿಯಿಂದ ಬಳಲುತ್ತಿದ್ದಾರೆ. ಹೀಗಾಗಿ ಕೂಡಲೇ ಜಿಲ್ಲೆಯ ಮಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೆ.ಎಂ ದೊಡ್ಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಸಪ್ತಪದಿ ತುಳಿದ ಮೂರೇ ದಿನದಲ್ಲಿ ಹೃದಯಾಘಾತದಿಂದ ನವವಿವಾಹಿತ ಅಕಾಲಿಕ ಸಾವು
ಏ.7 ಕ್ಕೆ ಮೇಲುಕೋಟೆ ವೈರಮುಡಿ ಉತ್ಸವ
ಮಂಡ್ಯದಲ್ಲಿ ಭೀಕರ ಅಪಘಾತ: ಸಾಫ್ಟ್ವೇರ್ ಇಂಜಿನಿಯರ್ ದಾರುಣ ಸಾವು