November 23, 2024

Newsnap Kannada

The World at your finger tips!

election , politics , kolar

Siddu will not win in Kolar : Minister Sudhakarಸಿದ್ದು ಕೋಲಾರದಲ್ಲಿ ಗೆಲ್ಲುವುದಿಲ್ಲ - ಖೆಡ್ಡಾಗೆ ಬಿದ್ದಿದ್ದಾರೆ: ಸಚಿವ ಸುಧಾಕರ್‌

ರಾಜ್ಯದಲ್ಲಿ 29 ಲಕ್ಷ ಲಸಿಕೆ: ಆರೋಗ್ಯ ಸಚಿವ ಡಾ.ಕೆ.ಸುಧಾಕರ್

Spread the love

ರಾಜ್ಯದಲ್ಲಿ ಸೆ17 ರಂದು ಒಂದೇ ದಿನ 29 ಲಕ್ಷ ಲಸಿಕೆ ನೀಡಿಲಾಗಿದೆ. ಇನ್ನೂ 1.68 ಲಕ್ಷ ದಾಖಲು ಮಾಡಬೇಕಿದೆ. ದೇಶದಲ್ಲಿ ನೀಡಿದ ಒಟ್ಟು ಲಸಿಕೆಯಲ್ಲಿ ಶೇ.11 ರಷ್ಟು ರಾಜ್ಯದಲ್ಲಿ ನೀಡಲಾಗಿದೆ. ಈ ಮೂಲಕ ಕರ್ನಾಟಕ ಹೊಸ ಸಾಧನೆ ಮಾಡಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ರಾಜ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನವನ್ನು ಲಸಿಕೆ ನೀಡುವ ಮೂಲಕ ಅರ್ಥಪೂರ್ಣವಾಗಿ ಆಚರಿಸಲು ತೀರ್ಮಾನಿಸಲಾಗಿತ್ತು ಎಂದರು‌.

ಒಂದು ದಿನದಲ್ಲಿ 30 ಲಕ್ಷ ಲಸಿಕೆ ನೀಡುವ ಗುರಿ ಹಾಕಿಕೊಳ್ಳಲಾಗಿದೆ. ಶನಿವಾರ ಬೆಳಗ್ಗೆ 8.30 ವೇಳೆಗೆ 29,50,093 ಲಸಿಕೆ ನೀಡಿರುವುದು ಕೋವಿಡ್ ನಲ್ಲಿ ದಾಖಲಾಗಿದೆ. ಇನ್ನೂ 1.68 ಲಕ್ಷ ಡೋಸ್ ಲಸಿಕೆ ನೀಡಿರುವುದನ್ನು ದಾಖಲು ಮಾಡಬೇಕಿದೆ. ಇದರಿಂದಾಗಿ 31 ಲಕ್ಷ ಲಸಿಕೆ ನೀಡಿದಂತಾಗುತ್ತದೆ. ದೇಶದಲ್ಲಿ ನೀಡಿದ ಒಟ್ಟು ಲಸಿಕೆಯಲ್ಲಿ ಶೇ.11 ರಷ್ಟು ರಾಜ್ಯದಲ್ಲಿ ನೀಡಲಾಗಿದೆ ಎಂದು ವಿವರಿಸಿದರು.

ಪ್ರತಿ ಅರ್ಹ ಹತ್ತು ಲಕ್ಷ ಜನಸಂಖ್ಯೆಗೆ ಹೆಚ್ಚು ಲಸಿಕೆ ನೀಡಿದ ರಾಜ್ಯಗಳ ಪೈಕಿ ಕರ್ನಾಟಕವು 62,003 ಲಸಿಕೆ ನೀಡುವ ಮೂಲಕ ಮೊದಲ ಸ್ಥಾನದಲ್ಲಿದೆ. 14,401 ಲಸಿಕೆ ಕೇಂದ್ರಗಳನ್ನು ಸಿದ್ಧಪಡಿಸಲಾಗಿದ್ದು, ಒಂದು ಕಡೆ ಸರಾಸರಿ 205 ಲಸಿಕೆ ನೀಡಲಾಗಿದೆ. 14 ಜಿಲ್ಲೆಗಳು ಗುರಿಗಿಂತ ಅಧಿಕ ಸಾಧನೆ ಮಾಡಿವೆ. 4 ಜಿಲ್ಲೆಗಳು ಮಾತ್ರ ಗುರಿಗಿಂತ 75% ನಷ್ಟು ಸಾಧನೆ ಮಾಡಿವೆ ಎಂದರು.

ಇಡೀ ದೇಶದಲ್ಲಿ ಅತಿ ಹೆಚ್ಚು ಲಸಿಕೆಯನ್ನು ಬಿಬಿಎಂಪಿ ವ್ಯಾಪ್ತಿಯಲ್ಲಿ (4.09 ಲಕ್ಷ) ನೀಡಲಾಗಿದೆ. ಬೆಳಗಾವಿಯಲ್ಲಿ 2.57 ಲಕ್ಷ ಲಸಿಕೆ ನೀಡಲಾಗಿದೆ. ಜಿಲ್ಲಾಮಟ್ಟದ ಸಾಧನೆಯಲ್ಲಿ ಎರಡು ಸ್ಥಾನಗಳು ರಾಜ್ಯಕ್ಕೆ ಬಂದಿವೆ. ರಾಜ್ಯದಲ್ಲಿ ಒಟ್ಟು 14.96 ಲಕ್ಷ ಲಸಿಕೆಗಳನ್ನು ಮಹಿಳೆಯರು ಪಡೆದಿದ್ದು, ಪುರುಷರಿಗಿಂತ (14.53 ಲಕ್ಷ) ಮುಂದೆ ಇದ್ದಾರೆ. ಇವೆಲ್ಲ ಸೇರಿ ಈವರೆಗೆ ಒಟ್ಟು 5 ಕೋಟಿ ಲಸಿಕೆ ನೀಡಿದ್ದು, ಕಳೆದ 20 ದಿನಗಳಲ್ಲಿ 1 ಕೋಟಿ ಲಸಿಕೆ ನೀಡಲಾಗಿದೆ. 1 ಕೋಟಿ ಜನರಿಗೆ ಎರಡೂ ಡೋಸ್ ನೀಡಲಾಗಿದೆ ಎಂಬ ಹೆಗ್ಗಳಿಕೆ ಬಂದಿದೆ. ಕಲಬುರ್ಗಿಯಲ್ಲಿ ಗುರಿಗಿಂತ ಕೇವಲ 41%, ಕೊಪ್ಪಳದಲ್ಲಿ 62%, ಉಡುಪಿಯಲ್ಲಿ 63% ಆಗಿದೆ. ಬೆಂಗಳೂರು ನಗರದಲ್ಲಿ 143%, ಶಿವಮೊಗ್ಗದಲ್ಲಿ 134%, ಧಾರವಾಡ, ಹಾಸನ, ಚಿಕ್ಕಬಳ್ಳಾಪುರ, ರಾಮನಗರ, ದಾವಣಗೆರೆ ಜಿಲ್ಲೆಗಳಲ್ಲಿ 120% ಸಾಧನೆ ಮಾಡಿವೆ ಎಂದರು.

Copyright © All rights reserved Newsnap | Newsever by AF themes.
error: Content is protected !!