ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನೊಂದು ವಾರದಲ್ಲಿ ಹಾಸನ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಜೆಡಿಎಸ್ ಅಭ್ಯರ್ಥಿಗಳ 2ನೇ ಪಟ್ಟಿಯನ್ನು ಬಿಡುಗಡೆ ಮಾಡಲಾಗುವುದು
ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಶನಿವಾರ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಜೆಡಿಎಸ್ ನ ಎರಡನೇ ಹಂತದ ಪಟ್ಟಿಯನ್ನು ಇನ್ನೊಂದು ವಾರದಲ್ಲಿ ಬಿಡುಗಡೆ ಮಾಡಲಾಗುವುದು ಪಟ್ಟಿಯಲ್ಲಿ ಯಾವುದೇ ಗೊಂದಲವಿಲ್ಲ ಎಂದರು. HDK ಬ್ರಾಹ್ಮಣ ಸಿಎಂ ಬಾಂಬ್ : ಅಪ್ರಬುದ್ಧ ಹೇಳಿಕೆ , ಉತ್ತರ ಕೊಡಲ್ಲ – ಜೋಶಿ
ದೇವೇಗೌಡರು, ಇಬ್ರಾಹಿಂ ಜೊತೆಗೆ ಚರ್ಚಿಸಲಾಗುತ್ತದೆ. ಕಾಂಗ್ರೆಸ್, ಬಿಜೆಪಿ ಪಕ್ಷಗಳ ಮೊದಲ ಪಟ್ಟಿ ಬಿಡುಗಡೆಗೆ ಮುನ್ನವೇ ಎರಡನೇ ಪಟ್ಟಿ ಬಿಡುಗಡೆ ಮಾಡಲಾಗುತ್ತದೆ ಎಂದರು.
ಜೆಡಿಎಸ್ ನ ಎರಡನೇ ಪಟ್ಟಿಯಲ್ಲಿ ಹಾಸನ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಯಾರು ಎಂಬುದಾಗಿಯೂ ಘೋಷಣೆ ಮಾಡಲಾಗುತ್ತದೆ. ಕಾಶ್ಯಂಪುರ್ ಅವರ ನೇತೃತ್ವದಲ್ಲಿ ರಚಿಸಿರುವ ಸಮಿತಿಯ ವರದಿಯ ನಂತರವೇ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಲಾಗುವುದು ಎಂದರು.
ನಿನ್ನೆಯ ಬಜೆಟ್ ಜಾತ್ರೆ ಮುಗಿದ ಮೇಲೆ, ಉಳಿದಿರುವ ವಸ್ತುಗಳನ್ನು ಮಾರಾಟ ಮಾಡಲು ರಿಯಾಯಿತಿ ದರವನ್ನು ಘೋಷಣೆ ಮಾಡಿದಂತೆ ಅಷ್ಟೇ. ಅದರ ಹೊರತಾಗಿ ಈ ಬಜೆಟ್ ನಲ್ಲಿ ಯಾವುದೇ ಹೊಸದು ಇಲ್ಲ ಎಂಬುದಾಗಿ ಹೇಳಿದರು.
- ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
- ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
- ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
- ಓದಿನ ಮಹತ್ವ
- ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
HDK ಬ್ರಾಹ್ಮಣ ಸಿಎಂ ಬಾಂಬ್ : ಅಪ್ರಬುದ್ಧ ಹೇಳಿಕೆ , ಉತ್ತರ ಕೊಡಲ್ಲ – ಜೋಶಿ
ಬ್ರಾಹ್ಮಣ ಸಿಎಂ ಕುರಿತು ಹೆಚ್.ಡಿ ಕುಮಾರಸ್ವಾಮಿ ಹೇಳಿಕೆಗೆ ಸಚಿವ ಪ್ರಹ್ಲಾದ್ ಜೋಶಿ ಮೌನ ಮುರಿದು ಇಂಹಹ ಬಾಲಿಶ ಹೇಳಿಕೆಗೆ ಪ್ರತಿಕ್ರಿಯೆ ನೀಡುವುದಿಲ್ಲ ಎಂದಿದ್ದಾರೆ
ಹುಬ್ಬಳ್ಳಿಯಲ್ಲಿ ಸುದ್ದಿಗಾರರ ಮಾತನಾಡಿದ ಜೋಶಿ ಅವರು, ಶತಮಾನಕ್ಕೊಮ್ಮೆ ಪ್ರಧಾನಿ ನರೇಂದ್ರ ಮೋದಿ ಅವರಂತಹ ನಾಯಕರು ಸಿಗುತ್ತಾರೆ.ಅವರ ಕೈಕೆಳಗೆ ಕೆಲಸ ಮಾಡುವುದು ನನ್ನ ಸೌಭಾಗ್ಯ ಎಂದು ಜೋಶಿ ಹೇಳಿದ್ದಾರೆ.
ಹುಬ್ಬಳ್ಳಿಯ ದೇಶಪಾಂಡೆ ನಗರದಲ್ಲಿರುವ ಜಿಮಖಾನಾ ಮೈದಾನದಲ್ಲಿ ನಿರ್ಮಿಸಲಾಗಿರುವ ಕೇದಾರನಾಥ ಮಾದರಿಯ ಶಿವಲಿಂಗ ದರ್ಶನ ಪಡೆದರು.
ಎಚ್ ಡಿ ಕೆ ನೀಡಿರುವ ಇಂತಹ ಅಪ್ರಬುದ್ಧ ಹೇಳಿಕೆಗೆ ನಾನು ಉತ್ತರ ಕೊಡಲ್ಲ ಎಂದು ವಾಗ್ದಾಳಿ ನಡೆಸಿದರು
More Stories
ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
ಓದಿನ ಮಹತ್ವ