ಕೊರೋನಾ ಕಾರಣಕ್ಕಾಗಿ ದ್ವಿತೀಯ ಪಿಯು ಪರೀಕ್ಷೆಯನ್ನು ರದ್ದುಗೊಳಿಸಿ, ವಿದ್ಯಾರ್ಥಿಗಳನ್ನು ಪಾಸು ಮಾಡಿ ಆದೇಶ ಹೊರಡಿಸುವ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ತಡೆ ನೀಡಿದೆ.
ಹೊಸ ಅಭ್ಯರ್ಥಿಗಳನ್ನು ಮಾತ್ರ ಪಾಸ್ ಮಾಡಿ ರಿಪೀಟರ್ಸ್ಗೆ ಮಾಮೂಲಿ ಪರೀಕ್ಷೆ ಇರುತ್ತದೆ ಎಂದು ಹೇಳಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಆಕ್ರೋಶ ವ್ಯಕ್ತಪಡಿಸಿದೆ.
ಪಿಯು ವಿದ್ಯಾರ್ಥಿಗಳನ್ನು ಪಾಸ್ ಮಾಡಿದ ಬಳಿಕ ರಿಪೀಟರ್ಸ್ ತಮಗೆ ಸರ್ಕಾರ ಅನ್ಯಾಯ ಮಾಡಿದೆ ಎಂದು ಸಿಂಗ್ರೀಗೌಡ ಕೋರ್ಟ್ ಮೊರೆ ಹೋಗಿದ್ದರು.
ಹೈಕೋರ್ಟ್ ಸರ್ಕಾರದ ನಿರ್ಧಾರಕ್ಕೆ ಅಸಮಾಧಾನ ವ್ಯಕ್ತಪಡಿಸಿದೆ ಅಲ್ಲದೆ ದ್ವಿತೀಯ ಪಿಯು ಫಲಿತಾಂಶ ಪ್ರಕಟಕ್ಕೆ ತಡೆ ನೀಡಿದೆ.
ರೆಗ್ಯೂಲರ್ ವಿದ್ಯಾರ್ಥಿಗಳನ್ನು ಮಾತ್ರ ಪಾಸ್ ಮಾಡಿರೋದು ಸರಿಯಲ್ಲ. ಪಾಸ್ ಮಾಡಿದ್ರೆ ಎಲ್ಲರನ್ನೂ ಮಾಡಬೇಕಿತ್ತು. ರೆಗ್ಯುಲರ್ ವಿದ್ಯಾರ್ಥಿಗಳನ್ನು ಪಾಸ್ ಮಾಡಿ, ರಿಪೀಟರ್ಸ್ ಅಭ್ಯರ್ಥಿಗಳಿಗೆ ಪರೀಕ್ಷೆ ನಡೆಸುವುದು ಸರಿಯಲ್ಲ ಎಂದು ಹೈಕೋರ್ಟ್ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದೆ.
ಗುರುವಾರದ ತನಕ ಪಿಯುಸಿ ಫಲಿತಾಂಶ ಪ್ರಕಟ ಮಾಡದಿರುವಂತೆ ಹೈಕೋರ್ಟ್ ಸೂಚಿಸಿದೆ. ಈ ವಿಚಾರ ಕುರಿತು ಸರ್ಕಾರದ ಅಡ್ವೋಕೇಟ್ ಜನರಲ್ಗೆ ಗುರುವಾರದೊಳಗೆ ಮಾಹಿತಿ ನೀಡುವಂತೆ ಹೈಕೋರ್ಟ್ ಸೂಚನೆ ನೀಡಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ