ಬೆಂಗಳೂರು: ಕರ್ನಾಟಕದಲ್ಲಿ ಮಾರ್ಚ್ 1ರಿಂದ (ಶನಿವಾರ) ದ್ವಿತೀಯ ಪಿಯುಸಿ (2nd PUC) ಪರೀಕ್ಷೆ ಪ್ರಾರಂಭವಾಗಲಿದೆ ಮತ್ತು ಮಾರ್ಚ್ 20ರವರೆಗೆ ನಡೆಯಲಿದೆ. ಈ ವರ್ಷ, ಪರೀಕ್ಷಾ ವ್ಯವಸ್ಥೆಯನ್ನು ಹೆಚ್ಚು ಕಠಿಣಗೊಳಿಸಲು ಹಾಗೂ ಅಕ್ರಮಗಳನ್ನು ತಡೆಗಟ್ಟಲು ಶಿಕ್ಷಣ ಇಲಾಖೆ (Education Department) ಹೊಸ ಕ್ರಮಗಳನ್ನು ಜಾರಿಗೆ ತಂದಿದೆ.
ವೆಬ್‌ಕಾಸ್ಟಿಂಗ್ ಮೂಲಕ ಕಣ್ಗಾವಲು ಈ ಮೊದಲು ಎಸ್‌ಎಸ್‌ಎಲ್‌ಸಿ ಪರೀಕ್ಷೆಗಾಗಿ ಜಾರಿಗೆ ತಂದಿದ್ದ ವೆಬ್‌ಕಾಸ್ಟಿಂಗ್ ವ್ಯವಸ್ಥೆಯನ್ನು ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿಯೂ ಬಳಸಲಾಗುತ್ತಿದೆ. ಇದರ ಮೂಲಕ ಪರೀಕ್ಷಾ ಚಟುವಟಿಕೆಗಳ ಮೇಲೆ ನಿಗಾ ಇಡುವುದರೊಂದಿಗೆ, ಪರೀಕ್ಷಾ ಅಕ್ರಮಗಳನ್ನು ತಡೆಯಲು ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ.
ದ್ವಿತೀಯ ಪಿಯುಸಿ ಪರೀಕ್ಷಾ ವೇಳಾಪಟ್ಟಿ: ಮಾರ್ಚ್ 1: ಕನ್ನಡ, ಅರೇಬಿಕ್ ಮಾರ್ಚ್ 3: ಗಣಿತ, ಶಿಕ್ಷಣಶಾಸ್ತ್ರ, ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ ಮಾರ್ಚ್ 4: ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್ ಮಾರ್ಚ್ 5: ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ ಮಾರ್ಚ್ 7: ಇತಿಹಾಸ, ಭೌತಶಾಸ್ತ್ರ ಮಾರ್ಚ್ 10: ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭಶಾಸ್ತ್ರ, ಗೃಹವಿಜ್ಞಾನ ಮಾರ್ಚ್ 12: ಮನಃಶಾಸ್ತ್ರ, ರಸಾಯನಶಾಸ್ತ್ರ, ಮೂಲ ಗಣಿತ ಮಾರ್ಚ್ 13: ಅರ್ಥಶಾಸ್ತ್ರ ಮಾರ್ಚ್ 15: ಇಂಗ್ಲಿಷ್ ಮಾರ್ಚ್ 17: ಭೂಗೋಳಶಾಸ್ತ್ರ ಮಾರ್ಚ್ 18: ಜೀವಶಾಸ್ತ್ರ, ಸಮಾಜಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗಣಕ ವಿಜ್ಞಾನ ಮಾರ್ಚ್ 19: ಹಿಂದೂಸ್ತಾನಿ ಸಂಗೀತ, ಮಾಹಿತಿ ತಂತ್ರಜ್ಞಾನ, ರಿಟೇಲ್, ಆಟೋಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಅಂಡ್ ವೆಲ್ ನೆಸ್ ಮಾರ್ಚ್ 20: ಹಿಂದಿ
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು