December 26, 2024

Newsnap Kannada

The World at your finger tips!

CM , DCM , Congress

3.80 ಲಕ್ಷ ಕೋಟಿ ಈ ಬಾರಿಯ ಬಜೆಟ್ ಗಾತ್ರ : ಸಿಎಂ

Spread the love

ತುಮಕೂರು : ಸಿಎಂ ಸಿದ್ದರಾಮಯ್ಯ 2024-25 ನೇ ಸಾಲಿನಲ್ಲಿ 3.80 ಲಕ್ಷ ಕೋಟಿ ರೂ. ಬಜೆಟ್‌ ಮಂಡಿಸಲು ಯೋಜನೆ ರೂಪಿಸಲಾಗುತ್ತಿದೆ ಎಂದು ಹೇಳಿದ್ದಾರೆ.

ತುಮಕೂರಿನಲ್ಲಿ ಮಾತನಾಡಿದ ಸಿಎಂ , ರಾಜ್ಯ ಸರ್ಕಾರವು ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ.ಈ ಬಾರಿ 3.80 ಲಕ್ಷ ಕೋಟಿ ರೂ. ಬಜೆಟ್‌ ಮಂಡಿಸುತ್ತೇನೆ ಎಂದರು.

ಐದಕ್ಕೆ ಐದೂ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದೇವೆ ಮತ್ತು ಸರ್ಕಾರದಲ್ಲಿ ಹಣ ಇಲ್ಲ ಎಂದು ಸುಳ್ಳೋತ್ಪಾದಿಕರಿಗೆ ಈ ಕಾರ್ಯಕ್ರಮವೇ ಒಂದು ಉತ್ತರ ಎಂದರು.

ಗ್ಯಾರಂಟಿ ಯೋಜನೆಗಳಿಂದ ನಾಡಿನ ಜನರ ಕೊಳ್ಳುವ ಶಕ್ತಿ ಹೆಚ್ಚಾಗಿರುವುದರಿಂದ ಕೇಂದ್ರದ ಬೆಲೆ ಏರಿಕೆಯಿಂದಾಗಿ ಸೃಷ್ಟಿಯಾಗಿದ್ದ ಸಂಕಷ್ಟವನ್ನು ನಾವು ಕಡಿಮೆ ಮಾಡಿದ್ದೇವೆ ಮತ್ತು ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಕ್ರಮಗಳು ನಿಂತಿಲ್ಲ. ಹೊಸ ಅಭಿವೃದ್ಧಿ ಕಾರ್ಯಗಳನ್ನೂ ಕೈಗೆತ್ತಿಕೊಂಡಿದ್ದೇವೆ ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿ ಭೀಕರ ಬರಗಾಲ ಬಂದಿದ್ದರೂ ಕೇಂದ್ರ ಸರ್ಕಾರ ಇದುವರೆಗೂ ರಾಜ್ಯದ ಪಾಲಿನ ಒಂದೇ ಒಂದು ರೂಪಾಯಿ ಬರ ಪರಿಹಾರವನ್ನೂ ನೀಡಿಲ್ಲ. ಆದರೆ ರಾಜ್ಯ ಸರ್ಕಾರ 29,28,910 ರೈತರ ಖಾತೆಗೆ ಬರ ಪರಿಹಾರದ ಮೊದಲ ಕಂತನ್ನು ಜಮೆ ಮಾಡಿದೆ.

ಒಂದು ಕೋಟಿ 50 ಲಕ್ಷ ಮಹಿಳೆಯರಿಗೆ ಅನ್ನಭಾಗ್ಯ, ಗೃಹಲಕ್ಷ್ಮಿ ಯೋಜನೆಯ ಅನುಕೂಲಗಳು ತಲುಪುತ್ತಿವೆ , ಒಂದು ಕೋಟಿ 18 ಲಕ್ಷ ಮಂದಿಗೆ ಗೃಹಜ್ಯೋತಿಯ ಅನುಕೂಲಗಳು ಸಿಕ್ಕುತ್ತಿವೆ ಮತ್ತು 142 ಕೋಟಿ ಮಹಿಳೆಯರು ಉಚಿತವಾಗಿ ಬಸ್ ಗಳಲ್ಲಿ ಪ್ರಯಾಣಿಸಿದ್ದಾರೆ ಎಂದು ತಿಳಿಸಿದರು.ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ಐದು ಗ್ಯಾರಂಟಿಗಳನ್ನು 8 ತಿಂಗಳ ಒಳಗೆ ಜಾರಿಗೆ ಮಾಡಿದ್ದೇವೆ , ಉಳಿದ ಭರವಸೆಗಳನ್ನೂ ಈಡೇರಿಸುತ್ತಲೇ ಇದ್ದೇವೆ ಎಂದು ಹೇಳಿದರು .

Copyright © All rights reserved Newsnap | Newsever by AF themes.
error: Content is protected !!