ಮಂಗಳೂರಿನ ಖಾಸಗಿ ಕಾಲೇಜಿನ ಹಾಸ್ಟೆಲ್‌ನಿಂದ ಪರಾರಿಯಾಗಿದ್ದ ಮೂವರು ವಿದ್ಯಾರ್ಥಿನಿಯರು ಚೆನೈ ನಲ್ಲಿ ಪತ್ತೆಯಾಗಿದ್ದಾರೆ.
ಚೆನ್ನೈನಲ್ಲಿ ಪತ್ತೆಯಾದ ಮೂವರು ವಿದ್ಯಾರ್ಥಿನಿಯರನ್ನು ಕುಡ್ಲ ಪೊಲೀಸರು ಮಂಗಳೂರಿಗೆ ಕರೆತಂದಿದ್ದಾರೆ.ಸುಂದರ ಯುವತಿಯ ಬರ್ಬರ ಕೊಲೆ : ಬಿಜೆಪಿಯ ಮಾಜಿ ಸಚಿವರ ಪುತ್ರನ ಬಂಧನ
ವಿದ್ಯಾರ್ಥಿನಿಯರ ತಂಡ ಮಂಗಳೂರಿನಿಂದ ರೈಲಿನ ಮೂಲಕ ಕೊಯಂಬತ್ತೂರು ತೆರಳಿದ್ದರು.
ಕೊಯಂಬತ್ತೂರಿನಿಂದ ಬಸ್ ಮೂಲಕ ಪಾಂಡಿಚೇರಿಗೆ ಪ್ರಯಾಣ ಬೆಳಸಿ, ಮತ್ತೆ ಪಾಂಡಿಚೇರಿಯಿಂದ ವಾಪಸ್ ಚೆನೈಗೆ ಬಂದಿದ್ದರು. ದೂರದ ಊರು ಸುತ್ತಾಡಿ ಮರಳಿ ಮನೆ ಸೇರಲು ವಿದ್ಯಾರ್ಥಿನಿಯರು ನಿರ್ಧರಿಸಿದ್ದರು ಎಂಬ ವಿಷಯ ಇದೀಗ ಬಯಲಾಗಿದೆ.
ಸೆ. 21ರಂದು ನಗರದ ಖಾಸಗಿ ಕಾಲೇಜೊಂದರ ಹಾಸ್ಟೆಲ್‍ನಲ್ಲಿದ್ದ ಮೂವರು ವಿದ್ಯಾರ್ಥಿನಿಯರು ಹಾಸ್ಟೆಲ್ ಕಿಟಕಿಯ ರಾಡ್ ಮುರಿದು ಪರಾರಿಯಾಗಿದ್ದರು.
ನಗರದ ಪ್ರತಿಷ್ಠಿತ ಖಾಸಗಿ ಕಾಲೇಜಿನ ಮೂವರು ವಿದ್ಯಾರ್ಥಿನಿಯರಾದ ಯಶಸ್ವಿನಿ, ದಕ್ಷತಾ, ಸಿಂಚನಾ ಪಿಯುಸಿ ವಿದ್ಯಾರ್ಥಿಗಳಾಗಿದ್ದು, ಹಾಸ್ಟೆಲ್‍ನಲ್ಲಿ ಇದ್ದು ವ್ಯಾಸಂಗ ಮಾಡುತ್ತಿದ್ದರು.
ನಾವು ಹೋಗುತ್ತಿದ್ದೇವೆ, ಕ್ಷಮಿಸಿ ಎಂದು ಪತ್ರ ಬರೆದಿಟ್ಟು ಹಾಸ್ಟೆಲ್‍ನ ಕಿಟಕಿಯ ರಾಡ್ ಮುರಿದು ಪರಾರಿಯಾಗಿದ್ದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು