ನೂರು ರೂಪಾಯಿ ಲಿಪ್‍ಸ್ಟಿಕ್ ಆಸೆಗೆ ಬಿದ್ದ ಬೆಂಗಳೂರಿನ ಯುವತಿಯೊಬ್ಬಳು ಮೂರೂವರೆ ಲಕ್ಷ ಪಂಗನಾಮ ಹಾಕಿಸಿಕೊಂಡಿದ್ದಾರೆ. ಬೆಂಗಳೂರಿನ ಹೆಬ್ಬಾಳ ಬಳಿಯ ನಾಗೇನಹಳ್ಳಿ ನಿವಾಸಿ ಯುವತಿಗೆ ಆನ್‍ಲೈನ್ ಡೆಲಿವರಿ ಕಂಪನಿಯಿಂದ ಕಾಲ್ ಮಾಡ್ತಿದ್ದೀವಿ ಮೇಡಂ ಅಂತಾ ಅಪರಿಚಿತ ವ್ಯಕ್ತಿಯೊಬ್ಬ ಕಾಲ್ ಮಾಡಿದ್ದ.
ನಮ್ಮಲ್ಲಿ ನೂರು ರೂಪಾಯಿ ಲಿಪ್‍ಸ್ಟಿಕ್ ಬುಕ್ ಮಾಡಿದರೆ, ಲಕ್ಷಾಂತರ ರೂಪಾಯಿ ಬಹುಮಾನ ಗೆಲ್ಲಬಹುದು ಅಂತಾ ಯುವತಿಗೆ ತಲೆ ಮೇಲೆ ಐಸ್ ಇಟ್ಟ.ಆತನ ಮಾತನ್ನು ನಂಬಿದ ಯುವತಿ ನೂರು ರೂಪಾಯಿ ತಾನೇ ಓಕೆ ಅಂತಾ ಹೇಳಿದಳು.
100 ರು ಬೆಲೆಯ ಲಿಪ್‍ಸ್ಟಿಕ್ ಬುಕ್ ಮಾಡಿದ ಯುವತಿಗೆ ಕೆಲ ನಿಮಿಷದಲ್ಲೇ ಆ ಕಡೆಯಿಂದ ಅಪರಿಚಿತ ಕಾಲ್ ಮಾಡಿ, ಮೇಡಂ ನಿಮಗೆ ಒಂದು ಲ್ಯಾಪ್ ಟಾಪ್ ಮತ್ತು ಐಫೋನ್ ಬಂಪರ್ ಬಹುಮಾನ ಬಂದಿದೆ ಎಂದು ಪುಂಗಿ ಊದಿದ. ಈ ಮಾತು ಕೇಳಿದ ಯುವತಿ ಫುಲ್ ಖುಷಿ ಆಗಿ ಥ್ಯಾಂಕ್ ಯೂ ಸರ್ ಅಂದ್ಲು. ಆಗ ಆ ಅಪರಿಚಿತ ವ್ಯಕ್ತಿ ನೀವೇ ಅಂತಾ ಕನ್ಫರ್ಮ್ ಮಾಡೋಕೆ ನಿಮಗೆ ಒಂದು ಲಿಂಕ್ ಕಳಿಸಿದ್ದೀನಿ ಅದನ್ನು ಓಕೆ ಮಾಡಿ ಅಂದಿದ್ದ.
ಇದನ್ನು ಓದಿ :ಮೇ 19ಕ್ಕೆ SSLC ಫಲಿತಾಂಶ ಪ್ರಕಟ
ಅಷ್ಟೇ ತಾನೇ ಅಂತಾ ಯುವತಿ ಆ ಲಿಂಕ್ ಓಕೆ ಮಾಡಿದ್ಲು. ಅಷ್ಟೇ ಕ್ಷಣಮಾತ್ರದಲ್ಲೇ ಆ ಯುವತಿ ಅಕೌಂಟ್ ನಲ್ಲಿದ್ದ 3,38000 ರು ಡೆಬಿಟ್ ಆಗಿದೆ ಅಂತಾ ಬ್ಯಾಂಕ್ ಕಡೆಯಿಂದ ಮಸೇಜ್ ಬಂದಿತ್ತು. ಯುವತಿ ಆ ಮಸೇಜ್ ನೋಡಿ ದಂಗಾಗಿ ಹೋಗಿ ಸುಧಾರಿಸಿಕೊಂಡ ನಂತರ ಬೆಂಗಳೂರು ಉತ್ತರ ವಿಭಾಗದ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
- ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
- ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ
- ದರ್ಶನ್ ಮಧ್ಯಂತರ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಲು ತೀರ್ಮಾನ
- ನ.20ರಂದು ಕರ್ನಾಟಕದಲ್ಲಿ ಬಾರ್ ಬಂದ್
- ಮಂಡ್ಯದ ಕಾರ್ಮೆಲ್ ಕಾಲೇಜಿನ ಪ್ರಥಮ, ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ
More Stories
ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ
ದರ್ಶನ್ ಮಧ್ಯಂತರ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಲು ತೀರ್ಮಾನ