ಬೆಂಗಳೂರು: ರಾಜ್ಯದಲ್ಲಿ ವಾಹನಗಳಿಗೆ ಹೈ ಸೆಕ್ಯುರಿಟಿ ರಿಜಿಸ್ಟ್ರೇಷನ್ ನಂಬರ್ ಪ್ಲೇಟ್ (High Security Number Plates) ಅಳವಡಿಕೆಗೆ ಇನ್ನು ಮೂರು ತಿಂಗಳು ವಿಸ್ತರಣೆ ಮಾಡುತ್ತೇವೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ವಿಧಾನ ಪರಿಷತ್ ಪ್ರಶ್ನೋತ್ತರ ಅವಧಿಯಲ್ಲಿ ಕಾಂಗ್ರೆಸ್ ನ ಸದಸ್ಯ ಮಧು ಜಿ ಮಾದೇಗೌಡ ಪ್ರಶ್ನೆಗೆ ಉತ್ತರ ನೀಡಿದರು .
ಫೆಬ್ರವರಿ 17, 2024ಕಕ್ಕೆ HSRP ನಂಬರ್ ಪ್ಲೇಟ್ ಅಳವಡಿಕೆ ಗಡುವು ಮುಕ್ತಾಯವಾಗಲಿದ್ದು ,ಹೈ ಸೆಕ್ಯುರಿಟಿ ರಿಜಿಸ್ಟ್ರೇಷನ್ ನಂಬರ್ ಪ್ಲೇಟ್ ಅಳವಡಿಕೆಗೆ 3 ತಿಂಗಳ ಅವಧಿ ವಿಸ್ತರಣೆ ಮಾಡುತ್ತೇವೆ ಎಂದು ತಿಳಿಸಿದ್ದಾರೆ.
ಈಗಾಗಲೇ ರಾಜ್ಯದಲ್ಲಿ 18,32,787 ವಾಹನಗಳಿಗೆ HSRP ನಂಬರ್ ಪ್ಲೇಟ್ ಅಳವಡಿಕೆ ಮಾಡಲಾಗಿದ್ದು , 9.16%. ಮಾತ್ರ ನಂಬರ್ ಪ್ಲೇಟ್ ಅಳವಡಿಕೆ ಮಾಡಲಾಗಿದೆ.
ಇಲಾಖೆಯ ಅಧಿಕೃತ ವೆಬ್‍ಸೈಟ್ ಬಳಸಿಕೊಂಡು ಆನ್‍ಲೈನ್ ಮೂಲಕವೇ ವಾಹನ ಸವಾರರು ನೋಂದಣಿ ಮಾಡಿಕೊಳ್ಳಬಹುದೆಂದು ಸಚಿವ ರಾಮಲಿಂಗಾರೆಡ್ಡಿ ಹೇಳಿ ,ಇದು ನಗದು ರಹಿತ ಮತ್ತು ಆನ್‍ಲೈನ್ ಮೂಲಕ ನಡೆಯುವ ಪ್ರಕ್ರಿಯೆ ಆಗಿದೆ ಎಂದು ವಿವರಿಸಿದರು.ಫೆ.26, 27 ರಂದು ರಾಜ್ಯ ಮಟ್ಟದ ಉದ್ಯೋಗ ಮೇಳ
ನಮ್ಮ ರಾಜ್ಯದಲ್ಲಿ ನಂಬರ್ ಪ್ಲೇಟ್ ಅಳವಡಿಕೆ ತಡವಾಗಿದ್ದು , 3 ತಿಂಗಳು ಅವಧಿ ವಿಸ್ತರಣೆ ಮಾಡಿ ಆದಷ್ಟು ಬೇಗ ನಂಬರ್ ಪ್ಲೇಟ್ ಅಳವಡಿಕೆ ಮಾಡಲು ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು.
More Stories
ತಿರುಪತಿಯಲ್ಲಿ ಕಾಲ್ತುಳಿತ: 6 ಮಂದಿ ಸಾವು, ಸಾವಿನ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ
ಮೈಸೂರು ಜೈಲಿನಲ್ಲಿ ಮೂವರು ಕೈದಿಗಳ ದುರ್ಮರಣ
ರಾಜ್ಯ ಸರ್ಕಾರದಿಂದ ಕಾರ್ಮಿಕರಿಗೆ ಮದುವೆ ಸಹಾಯಧನ: ₹60,000 ಪಡೆಯಲು ಅರ್ಜಿ ಆಹ್ವಾನ!