ಸಿಂಧನೂರು ಸಮೀಪದ ಡಾಲರ್ಸ್ ಕಾಲೋನಿಯಲ್ಲಿ ಈ ದುರ್ಘಟನೆ ನಡೆದಿದೆ. ರಸ್ತೆಯ ಬದಿ ನಿಂತಿದ್ದ ಮೂವರು ಅಧಿಕಾರಿಗಳ ಮೇಲೆ ಹೊಟ್ಟು ಸಾಗಿಸುತ್ತಿದ್ದ ಲಾರಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.
ಘಟನೆಯಲ್ಲಿ ಮಲ್ಲಿಕಾರ್ಜುನ, ಶಿವರಾಜು ಮತ್ತು ಮೆಹಬೂಬ ಎಂಬವರು ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟಿದ್ದಾರೆ. ನಿನ್ನೆ ರಾತ್ರಿ ಅವರು ಕೆನಾಲ್ ಡ್ಯೂಟಿ ಮುಗಿಸಿಕೊಂಡು ಮನೆಗೆ ತೆರಳುವ ಮಾರ್ಗದಲ್ಲಿ ದಾರಿಯಲ್ಲಿ ನಿಂತು ಮಾತನಾಡುತ್ತಿದ್ದರು. ಈ ಸಂದರ್ಭ ಹೊಟ್ಟಿನಿಂದ ತುಂಬಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಮೂವರನ್ನು ಬಡಿದಿದೆ.ಇದನ್ನು ಓದಿ –ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ನೀಡಿದ್ದ ಸ್ನೇಹಮಯಿ ಕೃಷ್ಣ ನಾಪತ್ತೆ
ಘಟನೆಯ ಸಂಬಂಧ ಸಿಂಧನೂರು ಪೊಲೀಸರು ಲಾರಿ ಚಾಲಕನನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು