ನವದೆಹಲಿ: ಕರ್ನಾಟಕಕ್ಕೆ ಮತ್ತೆ ಬಿಗ್ ಶಾಕ್ ಅ.15 ರವರೆಗೆ ತಮಿಳುನಾಡಿಗೆ ನಿತ್ಯವೂ 3 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ CWMA ಆದೇಶ ನೀಡಿದೆ.
ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ರಾಜ್ಯದಲ್ಲಿ ಪ್ರತಿಭಟನೆಗಳು ಭುಗಿಲೆದ್ದಿವೆ ಈ ನಡುವೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ತುರ್ತು ಸಭೆಯನ್ನು ಕರೆದಿತ್ತು.
ಈ ಸಭೆಯಲ್ಲಿ CWRC ಆದೇಶ ಪಾಲಿಸುವಂತೆ CWMA ಕರ್ನಾಟಕ್ಕೆ ಸೂಚನೆ ನೀಡಿದೆ.
ಅ.15 ರವರೆಗೆ ತಮಿಳುನಾಡಿಗೆ 3 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ CWMA ಕರ್ನಾಟಕಕ್ಕೆ ಆದೇಶ ಹೊರಡಿಸಿದೆ.
ಕರ್ನಾಟಕದಲ್ಲಿ ಕುಡಿಯಲು ನೀರಿಲ್ಲ ತಮಿಳುನಾಡಿಗೆ ನೀರು ಬಿಡಲು ಸಾಧ್ಯವಿಲ್ಲ ಎಂದು ಪ್ರತಿಭಟನೆಗಳು ನಡೆಯುತ್ತಿದೆ. ಈ ಹಿನ್ನೆಲೆ ಇಂದು ಕರ್ನಾಟಕ ಬಂದ್ ಗೆ ಕೂಡ ಕರೆ ನೀಡಲಾಗಿತ್ತು.
ತಮಿಳುನಾಡಿಗೆ ಕಾವೇರಿ ನೀರು ಹರಿಸಿರುವ ರಾಜ್ಯ ಸರ್ಕಾರದ ಕ್ರಮ ಖಂಡಿಸಿ ಕನ್ನಡ ಪರ ಸಂಘಟನೆಗಳು ಇಂದು ಪ್ರತಿಭಟನೆ ತೀವ್ರಗೊಳಿಸಿದೆ ಬಿಎಂಟಿಸಿ ಬಸ್ ಗಾಜು ಒಡೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನೋ ಬಂದ್ – ಓನ್ಲಿ ಪ್ರೊಟೆಸ್ಟ್ : ಡಿಕೆಶಿ ಉವಾಚ
ಹೋರಾಟಗಾರರು ರಾಜ್ಯ ಸರ್ಕಾರ ಹಾಗೂ ತಮಿಳುನಾಡು ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
More Stories
ದೇವತೆಗಳ ಆರಾಧನೆಗೆ ಮೀಸಲಾದ ದೇವಮಾಸ ಮಾರ್ಗಶಿರಮಾಸ
ಬೊಲೆರೋ ಡಿಕ್ಕಿಯಿಂದ ಐವರು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ
ಗೃಹಲಕ್ಷ್ಮಿ ಯೋಜನೆ ಸ್ಥಗಿತ ಮಾಡುವ ಪ್ರಶ್ನೆಯೇ ಇಲ್ಲ: ಸಿಎಂ ಸಿದ್ದರಾಮಯ್ಯ