ದೆಹಲಿ : ಹಳೇ ರಾಜೇಂದ್ರ ನಗರದಲ್ಲಿರುವ ಕೋಚಿಂಗ್ ಸೆಂಟರ್ ನ ತಳ ಮಳೆ ನೀರು ನುಗ್ಗಿದ ಪರಿಣಾಮ ಮೂವರು ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ನಡೆದಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಚಿಂಗ್ ಸೆಂಟರ್ ಮಾಲೀಕ ಹಾಗೂ ಸಂಯೋಜಕನನ್ನು ದೆಹಲಿ ಪೊಲೀಸರು ಬಂಧಿಸಿ, ಕ್ರಿಮಿನಲ್ ಪ್ರಕರಣ ದಾಖಲಿಸಿದ್ದಾರೆ.
ಕೋಚಿಂಗ್ ಸೆಂಟರ್ ಮಾಲೀಕ ಅಭಿಷೇಕ್ ಗುಪ್ತಾ ಹಾಗೂ ಸಂಯೋಜಕ ದೇಶ್‌ಪಾಲ್ ಸಿಂಗ್ ಬಂಧಿತರು.
ಕೇರಳ ಮೂಲದ ನವೀನ್, ಉತ್ತರ ಪ್ರದೇಶದ ಶ್ರೇಯಾ, ತೆಲಂಗಾಣದ ತಾನಿಯಾ ಮೃತ ವಿದ್ಯಾರ್ಥಿಗಳಾಗಿದ್ದಾರೆ.
ಕೋಚಿಂಗ್ ಸೆಂಟರ್‌ನಿಂದ ನೆಲಮಾಳಿಗೆಯಲ್ಲಿ ಪಾರ್ಕಿಂಗ್ ಮತ್ತು ಸ್ಟೋರ್ ರೂಮ್‌ಗಳಿಗಾಗಿ ಅನುಮತಿ ಪಡೆಯಲಾಗಿತ್ತು. 2 ನೆಲಮಾಳಿಗೆಗಳನ್ನ ಪಾರ್ಕಿಂಗ್ ಮತ್ತು ಸ್ಟೋರ್ ರೂಮ್‌ಗಾಗಿ ಇದೇ ತಿಂಗಳ ಜುಲೈ 9ರಂದು ಎನ್‌ಒಸಿ ಪಡೆದುಕೊಂಡಿತ್ತು. ಆದರೆ ನಿಯಮಕ್ಕೆ ವಿರುದ್ಧವಾಗಿ ಗ್ರಂಥಾಲಯ ನಿರ್ಮಾಣ ಮಾಡಲಾಗಿದೆ.ಮಕ್ಕಳನ್ನು ಬೆಳೆಸುವ ರೀತಿಯಲ್ಲಿ ನಾವು ಎಡವಿದ್ದೇವೆಯೇ
ಗ್ರಂಥಾಲದಲ್ಲಿ 7 ವಿದ್ಯಾರ್ಥಿಗಳು ಓದುತ್ತಿದ್ದಾಗ ಏಕಾಏಕಿ ನೀರು ನುಗ್ಗಿದ ಪರಿಣಾಮ, ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
More Stories
ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಬಿಡುಗಡೆ
ಮೈಸೂರಿನ ಪ್ರಮುಖ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರು: ಪಾಲಿಕೆ ತೀರ್ಮಾನಕ್ಕೆ ಆಕ್ಷೇಪಣೆಗಳು
ಸಿ.ಟಿ. ರವಿ ಪ್ರಕರಣ CID ಗೆ ಹಸ್ತಾಂತರ: ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ