December 25, 2024

Newsnap Kannada

The World at your finger tips!

congress , list , candidates , election

Congress leaders book 2 hotels to keep new MLAs safe ಕಾಂಗ್ರೆಸ್ ನಾಯಕರಿಂದ ನೂತನ ಶಾಸಕರನ್ನು ಸೇಫ್ ಮಾಡಲು 2 ಹೋಟೆಲ್ ಬುಕ್

ಶೀಘ್ರವೇ ಕಾಂಗ್ರೆಸ್ ನ 30 ಅಭ್ಯರ್ಥಿಗಳ 3ನೇ ಪಟ್ಟಿ ಇಂದು – ನಾಳೆ ರಿಲೀಸ್

Spread the love

ಕರ್ನಾಟಕ ವಿಧಾನಸಭೆ ಚುನಾವಣೆ ಅಭ್ಯರ್ಥಿಗಳ ಪೈಕಿ ಬಾಕಿ ಉಳಿದಿರುವ 58 ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಸಂಬಂಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಮಹತ್ವದ ಸಭೆ ನಡೆದಿದೆ.

ಕರ್ನಾಟಕ ವಿಧಾನಸಭೆ ಚುನಾವಣೆಗೆ 58 ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಸಂಬಂಧ ಮಲ್ಲಿಕಾರ್ಜುನ್ ಖರ್ಗೆ ಜೊತೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಚರ್ಚೆ ನಡೆಸಿದರು

ಕಾಂಗ್ರೆಸ್‌ ನಲ್ಲಿ ಬಾಕಿ ಉಳಿಸಿಕೊಂಡಿರುವ 58 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿ ಅಭ್ಯರ್ಥಿಗಳ ಪಟ್ಟಿಯ ಹಿನ್ನೆಲೆಯಲ್ಲಿ ಆಗಿರುವ ಬೆಳವಣಿಗೆ ಗಮನಿಸಿ ಬಿಡುಗಡೆ ಮಾಡಲು ನಿರ್ಧರಿಸಿದೆ.

ಬಾಕಿ 58 ಕ್ಷೇತ್ರಗಳ ಪೈಕಿ ಬಹುತೇಕ 30 ಕ್ಷೇತ್ರಗಳಿಗೆ ಕಣಕ್ಕಿಳಿಸುವ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಲಾಗಿದೆ.

ತೀವ್ರ ಸಮಸ್ಯೆಯಾಗಿರುವ 28 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಕೊನೆಘಳಿಗೆಯಲ್ಲಿ ಬಿಡುಗಡೆ ಮಾಡುವ ಸಾಧ್ಯತೆಗಳಿವೆ. ಸಿದ್ದು ವಿರುದ್ಧ ಸೋಮಣ್ಣ, ಬಂಡೆ ವಿರುದ್ಧ ಸಾಮ್ರಾಟ್

ಕಾಂಗ್ರೆಸ್ ಈಗಾಗಲೇ ಎರಡು ಹಂತಗಳಲ್ಲಿ 166 ಕ್ಷೇತ್ರಗಳ ಅಭ್ಯರ್ಥಿಗಳನ್ನು ಘೋಷಿಸಿದೆ, ಉಳಿದ 58 ಕ್ಷೇತ್ರಗಳ ಅಭ್ಯರ್ಥಿಗಳನ್ನು ಅಂತಿಮಗೊಳಿಸುವ ಸಂಬಂಧ ಸಭೆ ನಡೆದಿದ್ದಾರೆ, ಈ ಪೈಕಿ 30 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ ಇಂದು ಅಥವಾ ನಾಳೆ 3 ನೇ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆ ಇದೆ.

Copyright © All rights reserved Newsnap | Newsever by AF themes.
error: Content is protected !!