2019 ರ ಫೆಬ್ರವರಿ 26 ರಂದು ಭಾರತ ಬಾಲಾಕೋಟ್ ನಲ್ಲಿ ನಡೆಸಿದ ಏರ್ ಸ್ಟ್ರೈಕ್ ನಲ್ಲಿ 300 ಮಂದಿ ಭಯೋತ್ಪಾದಕರು ಹತರಾಗಿದ್ದು ನಿಜ ಎಂದು ಪಾಕಿಸ್ತಾನದ ಮಾಜಿ ರಾಜತಾಂತ್ರಿಕ ಅಧಿಕಾರಿ ಆಘಾ ಹಿಲಾಲಿ ಹೇಳಿದ್ದಾರೆ.
ಖಾಸಗಿ ವಾಹಿನಿಯೊಂದರ ಚರ್ಚೆಯಲ್ಲಿ ಮಾತನಾಡುತ್ತಿರುವ ವೇಳೆಯಲ್ಲಿ 300 ಭಯೋತ್ಪಾದಕರು ಹತರಾಗಿದ್ದಾರೆಂದು ತಿಳಿಸಿದ್ದಾರೆ.
ಭಾರತದ ದಾಳಿಯ ನಂತರ ಯಾವುದೇ ಸಾವು ನೋವು ಸಂಭವಿಸಿರಲಿಲ್ಲವೆಂದು ಸುಳ್ಳು ಹೇಳಿದ್ದ ಪಾಕಿಸ್ತಾನ ಬಣ್ಣ ಮತ್ತೊಮ್ಮೆ ಬಯಲಾಗಿದೆ.
ಖೈಬರ್ ಪಖ್ತುಂಖ್ವಾ ಪ್ರಾಂತ್ಯದ ಬಾಲಕೋಟ್ ನಲ್ಲಿ ಜೈಶ್ ಎ ಮೊಹಮ್ಮದ್ ಸಂಘಟನೆಯ ಭಯೋತ್ಪಾದಕ ತರಬೇತಿ ಶಿಬಿರದ ಮೇಲೆ ಭಾರತೀಯ ವಾಯುಪಡೆ ಏರ್ ಸ್ಟ್ರೈಕ್ ನಡೆಸಿದಾಗ ಸಾವು-ನೋವಿನ ಬಗ್ಗೆ ಪಾಕಿಸ್ತಾನ ಅಲ್ಲಗಳೆದಿತ್ತು.
ಪುಲ್ವಾಮಾ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ಏರ್ ಸ್ಟ್ರೈಕ್ ನಡೆಸಿದ್ದು, ದಾಳಿಯಲ್ಲಿ 300 ಭಯೋತ್ಪಾದಕರು ಸಾವನ್ನಪ್ಪಿದ್ದರು ಎನ್ನುವುದು ಈಗ ಬಯಲಾಗಿದೆ.
- ಟಿಪ್ಪು ಸುಲ್ತಾನ್ನ ಖಡ್ಗ 3.4 ಕೋಟಿಗೆ ಹರಾಜು
- ಮುಖ್ಯಮಂತ್ರಿ ವಿರುದ್ಧ ಅಪಪ್ರಚಾರ ಆರೋಪ: ಸ್ನೇಹಮಯಿ ಕೃಷ್ಣ ವಿರುದ್ಧ ಎಫ್ಐಆರ್
- ₹5.50 ಲಕ್ಷ ಮೌಲ್ಯದ ಡ್ರಗ್ಸ್ ಜಪ್ತಿ, ಇಬ್ಬರು ಬಂಧನ
- ಮುಡಾ ಹಗರಣ: ಸ್ನೇಹಮಯಿ ಕೃಷ್ಣ ಮತ್ತು ಕೈ ಮುಖಂಡ ಲಕ್ಷ್ಮಣ್ ನಡುವೆ ವಾಗ್ವಾದ
- ಯೋಗ ಗುರು ಶರತ್ ಜೋಯಿಸ್ ಹೃದಯಾಘಾತದಿಂದ ನಿಧನ
More Stories
ಆಯೋಧ್ಯೆ ರಾಮಮಂದಿರಕ್ಕೆ ಸ್ಫೋಟದ ಬೆದರಿಕೆ: ಆರ್ಡಿಎಕ್ಸ್ ಬಳಸಿ ಧ್ವಂಸಗೊಳಿಸುವ ಎಚ್ಚರಿಕೆ
ವಿಧಾನಸಭೆ ಉಪಚುನಾವಣೆ: ನ. 13 ರಂದು ರಾಜ್ಯ ಸರ್ಕಾರದಿಂದ ವೇತನ ಸಹಿತ ರಜೆ ಘೋಷಣೆ
ಮೈಸೂರಿನ ಸರ್ಕಾರಿ ಶಾಲೆಯ ಜಾಗ ವಕ್ಫ್ ಆಸ್ತಿಯಾಯ್ತು – ಸಿಎಂಗೆ ಪ್ರತಾಪ್ ಸಿಂಹ ಟಾಂಗ್