ಬೆಂಗಳೂರು: ಹೊಸ ವರ್ಷಾಚರಣೆಯ ಸಂಭ್ರಮದ ಹಿನ್ನೆಲೆಯಲ್ಲಿ ಅಬಕಾರಿ ಇಲಾಖೆಗೆ ನೂರಾರು ಕೋಟಿ ರೂಪಾಯಿಗಳ ಆದಾಯ ಲಭಿಸಿದೆ. ಡಿಸೆಂಬರ್ 31 ರಂದು KSBCL (ಕರ್ನಾಟಕ ಸ್ಟೇಟ್ ಬಿವರೆಜಸ್ ಕಾರ್ಪೊರೇಷನ್ ಲಿಮಿಟೆಡ್) ನಿಂದ ಬರೋಬ್ಬರಿ 308 ಕೋಟಿ ರೂಪಾಯಿ ಮೌಲ್ಯದ ಮದ್ಯ ಮಾರಾಟವಾಗಿದೆ.
ಮಾರಾಟದ ವಿವರಗಳು:
2024ರ ಡಿಸೆಂಬರ್ 31ರಂದು ಬೆಳಿಗ್ಗೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಈ ಮಾರಾಟ ನಡೆದಿದೆ. ಅಬಕಾರಿ ಇಲಾಖೆ ಈ ಬಾರಿ 250 ಕೋಟಿ ರೂ. ಮಾರಾಟದ ಗುರಿ ಇಟ್ಟುಕೊಂಡಿತ್ತು. 2023ರ ಡಿಸೆಂಬರ್ 31ರಂದು 193 ಕೋಟಿ ರೂಪಾಯಿ ಮದ್ಯ ಮಾರಾಟವಾಗಿತ್ತು. ಈ ವರ್ಷ 7,305 ಮದ್ಯ ಮಾರಾಟಗಾರರು ಕೆಎಸ್‌ಬಿಸಿಎಲ್‌ನಿಂದ ಮದ್ಯ ಖರೀದಿಸಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು