ಮುಂಬೈನ ಅತಿ ಶ್ರೀಮಂತ ಗಣಪತಿ ಮಂಡಲ ಎಂಬ ಹಿರಿಮೆ ಹೊಂದಿರುವ ಗೌಡ ಸಾರಸ್ವತ ಬ್ರಾಹ್ಮಣ (ಜಿಎಸ್‍ಬಿ) ಸೇವಾ ಮಂಡಲದ ಗಣೇಶನಿಗೆ ಈ ವರ್ಷ ದಾಖಲೆಯ 316.40 ಕೋಟಿ ರೂ. ವಿಮೆ ಮಾಡಿರುವುದು ವಿಶೇಷವಾಗಿದೆ.
ಜೆಎಸ್‍ಬಿ ಮಂಡಲ್ ಗಣೇಶನಿಗೆ ತೊಡಿಸುವ 66 ಕೆಜಿ ಚಿನ್ನಾಭರಣ, 295 ಕೆಜಿ ಬೆಳ್ಳಿ, ಹಾಗೂ ಇನ್ನಿತರ ಬೆಲೆಬಾಳುವ ಆಭರಣಗಳಿಗೆ ನ್ಯೂ ಇಂಡಿಯಾ ಅಶ್ಯುರೆನ್‍ನಿಂದ 31.97 ಕೋಟಿ ರೂ. ಮೊತ್ತದ ಇನ್ಶೂರೆನ್ಸ್ ಮಾಡಿಸಲಾಗಿದೆ.
ಭದ್ರತಾ ಸಿಬ್ಬಂದಿ, ಅರ್ಚಕರು, ಅಡುಗೆ ಮಾಡುವವರು, ಸ್ವಯಂ ಸೇವಕರಿಗಾಗಿ ಒಟ್ಟು 263 ಕೋಟಿ ರೂ. ವಿಮೆ ಮಾಡಿಸಲಾಗಿದೆ.
ಗಣೇಶೋತ್ಸವ ವೇಳೆ ಅನಾಹುತಗಳಾದಲ್ಲಿ ಪರಿಹಾರವಾಗಿ 1 ಕೋಟಿ ರೂ. ವಿಮೆ ಮಾಡಿಸಲಾಗಿದೆ. ಜೊತೆಗೆ ಸಾರ್ವಜನಿಕ ಹೊಣೆಗಾರಿಕೆ ಅಡಿಯಲ್ಲಿ ಭಕ್ತರು, ಗಣಪತಿ ಕೂರಿಸುವ ಪೆಂಡಾಲ್, ಕ್ರೀಡಾಂಗಣ ಸೇರಿ ಇನ್ನಿತರ ಎಂದು 20 ಕೋಟಿ ರೂ. ವಿಮೆ ಮಾಡಿಸಲಾಗಿದೆ.
ಅದ್ಧೂರಿ ಗಣೇಶೋತ್ಸವಕ್ಕೆ ಜಿಎಸ್‍ಬಿ ಸಮಿತಿ ಮುಂದಾಗಿದ್ದು, ಈ ವರ್ಷ ಪೂಜೆ, ಪ್ರಸಾದ ಸೇರಿದಂತೆ ಇತರ ವ್ಯವಸ್ಥೆಗಳಿಗೆ ಕ್ಯೂ ಆರ್ ಕೋಡ್ ಸ್ಕ್ಯಾನ್ ಮೂಲಕ ಡಿಜಿಟಲ್ ವ್ಯವಸ್ಥೆಗೆ ಒತ್ತು ನೀಡಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು