ಬೆಂಗಳೂರು : ರಾಜ್ಯ ಸರ್ಕಾರ ಸ್ವಚ್ಛ ಭಾರತ ಮಿಷನ್ ಯೋಜನೆಯಡಿ ಕಾಲಮಿತಿಯೊಳಗೆ ಶೌಚಾಲಯ ನಿರ್ಮಾಣಕ್ಕೆ ಅನುದಾನ ಬಳಕೆ ಮಾಡದ 318 ಪಿಡಿಒಗಳನ್ನು ಅಮಾನತು ಮಾಡಿ ಆದೇಶ ಹೊರಡಿಸಿದೆ.
ಸಿಟಿಜನ್ ಪೋರ್ಟಲ್ ಮೂಲಕ ವೈಯಕ್ತಿಕ ಶೌಚಾಲಯ ನಿರ್ಮಾಣಕ್ಕೆ ಸಲ್ಲಿಕೆಯಾದ ಬೇಡಿಕೆಗಳ ಆಧಾರದಲ್ಲಿ ಪ್ರತಿ ಪಂಚಾಯಿತಿವಾರು ಪಟ್ಟಿಗಳನ್ನು ಸಿದ್ಧಪಡಿಸಲಾಗಿದೆ.
4.85 ಲಕ್ಷ ಶೌಚಾಲಯ ನಿರ್ಮಾಣಕ್ಕೆ ಬೇಡಿಕೆ ಬಂದಿದ್ದು, 3.60 ಲಕ್ಷ ಶೌಚಾಲಯಗಳಿಗೆ ಅನುದಾನ ಬಿಡುಗಡೆ ಮಾಡಲಾಗಿತ್ತು.
ಗ್ರಾಮೀಣ ಪ್ರದೇಶದ ಮನೆಗಳಲ್ಲಿ ಶೌಚಾಲಯ ನಿರ್ಮಿಸಿಕೊಳ್ಳಲು ಅರ್ಜಿ ಸಲ್ಲಿಸುವ ಸಾಮಾನ್ಯ ವರ್ಗ, ಹಿಂದುಳಿದ ವರ್ಗಗಳು ಹಾಗೂ ಅಲ್ಪ ಸಂಖ್ಯಾತ ಸಮುದಾಯದ ಪ್ರತಿ ಕುಟುಂಬಕ್ಕೂ ಸ್ವಚ್ಛ ಭಾರತ್ ಯೋಜನೆಯಡಿ ಕೇಂದ್ರ ಸರ್ಕಾರ 7,200 ರೂ. ಹಾಗೂ ರಾಜ್ಯ ಸರ್ಕಾರ 4,800 ರೂ. ಸೇರಿ 12 ಸಾವಿರ ರೂ. ಸಹಾಯಧನ ನೀಡುತ್ತಿವೆ.
ಪರಿಶಿಷ್ಟ ಜಾತಿ ಮತ್ತು ಪಂಗಡದ ಕುಟುಂಬಗಳಿಗೆ 15 ಸಾವಿರ ನಿಗದಿ ಮಾಡಲಾಗಿದ್ದು ,ಈ ಅನುದಾನವನ್ನು ನಿಗದಿತ ಅವಧಿ ಒಳಗೆ ಖರ್ಚು ಮಾಡದ ಪಿಡಿಒಗಳನ್ನು ಅಮಾನತು ಮಾಡಲು ತಕ್ಷಣ ಕ್ರಮ ಕೈಗೊಳ್ಳುವಂತೆ 30 ಜಿಲ್ಲೆಗಳ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಪತ್ರ ಬರೆದಿದೆ.ಬಿಜೆಪಿ ಕಾರ್ಯಕರ್ತರಿಂದ ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಮುತ್ತಿಗೆ ಯತ್ನ
ಆಗಸ್ಟ್ ಅಂತ್ಯದವರೆಗೆ 318 ಪಂಚಾಯಿತಿಗಳಲ್ಲಿ ಒಂದು ಶೌಚಾಲಯವನ್ನು ನಿರ್ಮಿಸದೆ ಅನುದಾನವನ್ನು ಹಾಗೆಯೇ ಉಳಿಸಿಕೊಂಡಿದ್ದ ಹಿನ್ನೆಲೆ ,318 ಪಿಡಿಒಗಳನ್ನು ಅಮಾನತು ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
More Stories
ಸಿದ್ದರಾಮಯ್ಯ ಹೆಸರನ್ನು ರಸ್ತೆಗೆ ಇಟ್ಟರೆ ತಪ್ಪೇನು? – ಸಿಎಂ ಪರ ನಿಂತುಕೊಂಡ ಪ್ರತಾಪ್ ಸಿಂಹ
ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನದ ಏರ್ಸ್ಟ್ರೈಕ್: 15 ಮಂದಿ ಮೃತ್ಯು
ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ !