Karnataka

ರಾಜ್ಯ ಸರ್ಕಾರದಿಂದ 318 ಪಿಡಿಒ ಅಮಾನತು

ಬೆಂಗಳೂರು : ರಾಜ್ಯ ಸರ್ಕಾರ ಸ್ವಚ್ಛ ಭಾರತ ಮಿಷನ್ ಯೋಜನೆಯಡಿ ಕಾಲಮಿತಿಯೊಳಗೆ ಶೌಚಾಲಯ ನಿರ್ಮಾಣಕ್ಕೆ ಅನುದಾನ ಬಳಕೆ ಮಾಡದ 318 ಪಿಡಿಒಗಳನ್ನು ಅಮಾನತು ಮಾಡಿ ಆದೇಶ ಹೊರಡಿಸಿದೆ.

ಸಿಟಿಜನ್ ಪೋರ್ಟಲ್ ಮೂಲಕ ವೈಯಕ್ತಿಕ ಶೌಚಾಲಯ ನಿರ್ಮಾಣಕ್ಕೆ ಸಲ್ಲಿಕೆಯಾದ ಬೇಡಿಕೆಗಳ ಆಧಾರದಲ್ಲಿ ಪ್ರತಿ ಪಂಚಾಯಿತಿವಾರು ಪಟ್ಟಿಗಳನ್ನು ಸಿದ್ಧಪಡಿಸಲಾಗಿದೆ.

4.85 ಲಕ್ಷ ಶೌಚಾಲಯ ನಿರ್ಮಾಣಕ್ಕೆ ಬೇಡಿಕೆ ಬಂದಿದ್ದು, 3.60 ಲಕ್ಷ ಶೌಚಾಲಯಗಳಿಗೆ ಅನುದಾನ ಬಿಡುಗಡೆ ಮಾಡಲಾಗಿತ್ತು.

ಗ್ರಾಮೀಣ ಪ್ರದೇಶದ ಮನೆಗಳಲ್ಲಿ ಶೌಚಾಲಯ ನಿರ್ಮಿಸಿಕೊಳ್ಳಲು ಅರ್ಜಿ ಸಲ್ಲಿಸುವ ಸಾಮಾನ್ಯ ವರ್ಗ, ಹಿಂದುಳಿದ ವರ್ಗಗಳು ಹಾಗೂ ಅಲ್ಪ ಸಂಖ್ಯಾತ ಸಮುದಾಯದ ಪ್ರತಿ ಕುಟುಂಬಕ್ಕೂ ಸ್ವಚ್ಛ ಭಾರತ್ ಯೋಜನೆಯಡಿ ಕೇಂದ್ರ ಸರ್ಕಾರ 7,200 ರೂ. ಹಾಗೂ ರಾಜ್ಯ ಸರ್ಕಾರ 4,800 ರೂ. ಸೇರಿ 12 ಸಾವಿರ ರೂ. ಸಹಾಯಧನ ನೀಡುತ್ತಿವೆ.

ಪರಿಶಿಷ್ಟ ಜಾತಿ ಮತ್ತು ಪಂಗಡದ ಕುಟುಂಬಗಳಿಗೆ 15 ಸಾವಿರ ನಿಗದಿ ಮಾಡಲಾಗಿದ್ದು ,ಈ ಅನುದಾನವನ್ನು ನಿಗದಿತ ಅವಧಿ ಒಳಗೆ ಖರ್ಚು ಮಾಡದ ಪಿಡಿಒಗಳನ್ನು ಅಮಾನತು ಮಾಡಲು ತಕ್ಷಣ ಕ್ರಮ ಕೈಗೊಳ್ಳುವಂತೆ 30 ಜಿಲ್ಲೆಗಳ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಪತ್ರ ಬರೆದಿದೆ.ಬಿಜೆಪಿ ಕಾರ್ಯಕರ್ತರಿಂದ ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಮುತ್ತಿಗೆ ಯತ್ನ

ಆಗಸ್ಟ್ ಅಂತ್ಯದವರೆಗೆ 318 ಪಂಚಾಯಿತಿಗಳಲ್ಲಿ ಒಂದು ಶೌಚಾಲಯವನ್ನು ನಿರ್ಮಿಸದೆ ಅನುದಾನವನ್ನು ಹಾಗೆಯೇ ಉಳಿಸಿಕೊಂಡಿದ್ದ ಹಿನ್ನೆಲೆ ,318 ಪಿಡಿಒಗಳನ್ನು ಅಮಾನತು ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

Team Newsnap
Leave a Comment

Recent Posts

ಮೈಸೂರು ದಸರಾ ಮಹೋತ್ಸವ ಉದ್ಘಾಟನೆಗೆ ಸಾಹಿತಿ ಪ್ರೊ.ಹಂಪನಾಗೆ ಆಹ್ವಾನಬೆಂಗಳೂರು

ಮೈಸೂರು ಜಿಲ್ಲಾಡಳಿತ ವತಿಯಿಂದ ಹೆಸರಾಂತ ಸಂಶೋಧಕರು, ಸಾಹಿತಿಗಳಾದ ಪ್ರೊ. ಹಂ.ಪ. ನಾಗರಾಜಯ್ಯ (ಹಂಪನಾ) ಅವರನ್ನು ಮೈಸೂರು ದಸರಾ ಮಹೋತ್ಸವ ಉದ್ಘಾಟನೆಗೆ… Read More

September 26, 2024

ರಾಜ್ಯಾದ್ಯಂತ ಮುಂದಿನ 5 ದಿನ ಭಾರೀ ಮಳೆಯ ಮುನ್ಸೂಚನೆ

ಬೆಂಗಳೂರು : ಮುಂದಿನ 5 ದಿನ ರಾಜ್ಯದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.… Read More

September 26, 2024

ಕ್ಯಾಂಟರ್ ಗೆ ಕಾರು ಡಿಕ್ಕಿಯಾಗಿ ನಾಲ್ವರು ದುರ್ಮರಣ

ಬಾಗಲಕೋಟೆ: ಜಿಲ್ಲೆಯ ಹುನಗುಂದ ತಾಲ್ಲೂಕಿನ ಧನ್ನೂರು ಎಂಬಲ್ಲಿ ಕ್ಯಾಂಟರ್ ಹಾಗೂ ಕಾರು ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.… Read More

September 26, 2024

ಬಿಜೆಪಿ ಕಾರ್ಯಕರ್ತರಿಂದ ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಮುತ್ತಿಗೆ ಯತ್ನ

ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸಲ್ಲಿಸಿದ್ದ… Read More

September 25, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಸೆಪ್ಟೆಂಬರ್ 25 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 70,600 ರೂಪಾಯಿ ದಾಖಲಾಗಿದೆ. 24… Read More

September 25, 2024

ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಮಾಜಿ ಸಂಸದ ಪ್ರತಾಪ್ ಸಿಂಹ ಗಣೇಶ ವಿಸರ್ಜನೆ ಶೋಭಾಯಾತ್ರೆ ಮೆರವಣಿಗೆ ವೇಳೆ ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದಡಿ ಎಫ್‌ಐಆರ್ ದಾಖಲಾಗಿದೆ.… Read More

September 25, 2024