January 14, 2026

Newsnap Kannada

The World at your finger tips!

WhatsApp Image 2022 08 24 at 7.17.11 PM

ಕೇಂದ್ರದಿಂದ ರಾಜ್ಯಕ್ಕೆ 3,454 ಕೋಟಿ ರು ಬರಪರಿಹಾರ ಘೋಷಣೆ

Spread the love
  • ತಮಿಳನಾಡಿಗೆ 275 ಕೋಟಿ ರೂ.’ನೆರೆ ಪರಿಹಾರ’ ಘೋಷಣೆ

ನವದೆಹಲಿ : ಕೇಂದ್ರವು ಕರ್ನಾಟಕಕ್ಕೆ 3,454 ಕೋಟಿ ರೂ. ಬರಪರಿಹಾರ, ತಮಿಳಿನಾಡಿಗೆ 275 ಕೋಟಿ ರೂ. ನೆರೆ ಪರಿಹಾರ ಘೋಷಣೆ ಮಾಡಿದೆ.

ಬರ ಪರಿಹಾರಕ್ಕೆ ಕೇಂದ್ರ ಸರ್ಕಾರದ ಮೇಲೆ ರಾಜ್ಯ ಕಾಂಗ್ರೆಸ್ ಸರ್ಕಾರ ಸುಪ್ರೀಂಕೋರ್ಟಿಗೆ ಹೋಗಿತ್ತು. ಇದೀಗ ರಾಜ್ಯಕ್ಕೆ ಕೇಂದ್ರ ಸರ್ಕಾರವು 3,454 ಕೋಟಿ ರೂ.ಬರ ಪರಿಹಾರ ಘೋಷಣೆ ಮಾಡಿದೆ.

2023ರ ಸೆಪ್ಟೆಂಬರ್‌ನಲ್ಲಿ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ ಮೆಟ್ಟಿಲೇರಿತ್ತು. ಆರ್ಟಿಕಲ್ 32ರ ಅಡಿಯಲ್ಲಿ ಸಿದ್ದರಾಮಯ್ಯ ಸರ್ಕಾರ ರಿಟ್ ಅರ್ಜಿ ಸಲ್ಲಿಸಿತ್ತು.14 ಕ್ಷೇತ್ರಗಳ ಪೈಕಿ ಮಂಡ್ಯ ಕ್ಷೇತ್ರದಲ್ಲಿ ಹೆಚ್ಚು ಮತದಾನ: ಮಂಡ್ಯದಲ್ಲಿ ಶೇ 81.67 ರಷ್ಟು. ಮತದಾನ

ಒಟ್ಟು 18,172 ಕೋಟಿ ಬರ ಪರಿಹಾರ ನೀಡಬೇಕು. ಅದರಲ್ಲಿ ಶೀಘ್ರವಾಗಿ 8,177 ಕೋಟಿ ಪರಿಹಾರ ನೀಡುವಂತೆ ಮನವಿ ಮಾಡಿದ್ದರು. ಅಲ್ಲದೆ 566 ಕೋಟಿ ರೂಪಾಯಿ ಕುಡಿಯುವ ನೀರಿಗೆ ಪರಿಹಾರ ನೀಡಿದರೆ, 363 ಕೋಟಿ ರೂಪಾಯಿ ಜಾನುವಾರುಗಳ ಸಂರಕ್ಷಣೆಗೆ ನೀಡುವಂತೆ ಮನವಿ ಸಲ್ಲಿಸಿದ್ದರು, ಆದರೆ ಇದೀಗ ರಾಜ್ಯಕ್ಕೆ ಕೇಂದ್ರ ಸರ್ಕಾರ 3,454 ಕೋಟಿ ರೂ. ಬರಪರಿಹಾರ ಘೋಷಣೆ ಮಾಡಿದೆ.

error: Content is protected !!