ಜಿಂದಾಲ್ ಕಂಪನಿಗೆ ಸರ್ಕಾರ 3,667 ಎಕರೆ ಭೂಮಿ ಮಾರಾಟಕ್ಕೆ ಬಿಎಸ್‍ವೈ ಸರ್ಕಾರಕ್ಕೆ ಮುಂದಾಗಿರುವ ನಡೆಗೆ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಕಡು ವಿರೋಧ ಮಾಡಿದ್ದಾರೆ.
ಈ ಕುರಿತಂತೆ ಟ್ಟಿಟ್ ಮಾಡಿರುವ ಮಾಜಿ ಸಿಎಂ ಕುಮಾರಸ್ವಾಮಿ ಮೈತ್ರಿ ಸರ್ಕಾರದಲ್ಲಿ ಈ ನಿರ್ಧಾರವನ್ನು ವಿರೋಧಿಸಿದ್ದ ಬಿಜೆಪಿ, ಕಾಂಗ್ರೆಸ್ ಹಿರಿಯ ಮುಖಂಡ ಹೆಚ್.ಕೆ.ಪಾಟೀಲ್ ಗೆ ಹಲವಾರು ಪ್ರಶ್ನೆ ಕೇಳಿದ್ದಾರೆ.
ಸದ್ದಿಲ್ಲದೇ ಭೂಮಿ ಮಾರಾಟ !
ಮೈತ್ರಿ ಸರ್ಕಾರ ತೀರ್ಮಾನ ಮಾಡಲು ಮುಂದಾದಾಗ ಇದೇ ಬಿಎಸ್‍ವೈ ಅಹೋರಾತ್ರಿ ಧರಣಿ, ಬಿಜೆಪಿ ಯುವ ಮೋರ್ಚಾದಿಂದ ವಿಧಾನಸೌಧ ಮುತ್ತಿಗೆ, ಮೈತ್ರಿ ಸರ್ಕಾರದ ಮೇಲೆ ಕಿಕ್ ಬ್ಯಾಕ್ ಆರೋಪ…’ ಜಿಂದಾಲ್‍ಗೆ 3,677 ಎಕರೆ ಭೂಮಿ ಮಾರಾಟ ಮಾಡಲು ನಿರ್ಧರಿಸಿದ್ದ ಮೈತ್ರಿ ಸರ್ಕಾರದ ವಿರುದ್ಧ ಬಿಜೆಪಿ ನಡೆಸಿದ್ದ ಹೋರಾಟಗಳಿವು. ಆದರೆ ಇಂದು ಬಿಜೆಪಿ ಅದೇ ಜಿಂದಾಲ್‍ಗೆ ಅದೇ ಭೂಮಿಯನ್ನು ಸದ್ದಿಲ್ಲದೇ ಮಾರಿದೆ ಎಂದು ಕಿಡಿಕಾರಿದ್ದಾರೆ.
ಕೆಟ್ಟ ಸಂಸ್ಕೃತಿ ಬಿಜೆಪಿಯದ್ದು :
ವಿರೋಧ ಮಾಡುವ ಸಲುವಾಗಿ ವಿರೋಧ ಮಾಡುವುದು, ವಿರೋಧ ಪಕ್ಷದಲ್ಲಿದ್ದಾಗ ವಿರೋಧಿಸಿದ್ದನ್ನೇ ಆಡಳಿತಕ್ಕೆ ಬಂದಾಗ ಕದ್ದು ಮುಚ್ಚಿ ಮಾಡುವುದು ಬಿಜೆಪಿಯ ‘ಸಂಸ್ಕೃತಿ’ ಎಂಬುದು ಸ್ಪಷ್ಟ.
ಜಿಂದಾಲ್‍ಗೆ ಭೂಮಿ ನೀಡುವ ವಿಚಾರದಲ್ಲಿ ಅಂದು ನನ್ನ ಸರ್ಕಾರದ ವಿರುದ್ಧ, ನನ್ನ ವಿರುದ್ಧ ಸಲ್ಲದ ಆರೋಪ ಮಾಡಿದ್ದ ಬಿಎಸ್‍ವೈ ಇಂದು ಅದೇ ಆರೋಪಗಳನ್ನು ತಮ್ಮ ಮೇಲೆ ಹೊತ್ತುಕೊಳ್ಳುವರೇ? ಎಂದು ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ.
- ರಾಜ್ಯ ಸರ್ಕಾರದಿಂದ 11 ಡಿವೈಎಸ್ಪಿ (ಸಿವಿಲ್) ಅಧಿಕಾರಿಗಳ ವರ್ಗಾವಣೆ
- MUDA ಹಗರಣ: ಜೆಡಿಎಸ್ ಶಾಸಕ ಜಿಟಿಡಿ ವಿರುದ್ಧ ಕಿಕ್ಬ್ಯಾಕ್ ಆರೋಪ, ಲೋಕಾಯುಕ್ತದಲ್ಲಿ ದೂರು
- ನಕಲಿ ಸಿಗರೇಟ್ ತಯಾರಿಸಿ ಮಾರಾಟ – ಕೋಟಿ ಮೌಲ್ಯದ ಸಿಗರೇಟ್ ವಶ
- ರಾಜ್ಯ ಸರ್ಕಾರದಿಂದ 41 ಪೊಲೀಸ್ ಇನ್ಸ್ಪೆಕ್ಟರ್ಗಳ ದಿಢೀರ್ ವರ್ಗಾವಣೆ
- ನಿಮ್ಮ ಮನದ ಭಾವನೆಗಳನ್ನು ಅರ್ಥಮಾಡಿಕೊಳ್ಳುವವರೇ ಇಲ್ಲದಾಗ …?
More Stories
ರಾಜ್ಯ ಸರ್ಕಾರದಿಂದ 11 ಡಿವೈಎಸ್ಪಿ (ಸಿವಿಲ್) ಅಧಿಕಾರಿಗಳ ವರ್ಗಾವಣೆ
ರಾಜ್ಯ ಸರ್ಕಾರದಿಂದ 41 ಪೊಲೀಸ್ ಇನ್ಸ್ಪೆಕ್ಟರ್ಗಳ ದಿಢೀರ್ ವರ್ಗಾವಣೆ
ನಾನು ದೇವರಲ್ಲ, ನಾನೂ ಸಹ ತಪ್ಪು ಮಾಡಿದ್ದೇನೆ: ನಮೋ