ವಿದ್ಯಾರ್ಥಿಗಳಿಗೆ ಪ್ರತಿ ತಿಂಗಳ 3 ನೇ ಶನಿವಾರ ‘ಬ್ಯಾಗ್‌ ರಹಿತ’ ದಿನವಾಗಿ ಆಚರಣೆ

Team Newsnap
1 Min Read
3rd Saturday of every month is observed as 'Bag Free' day for students ವಿದ್ಯಾರ್ಥಿಗಳಿಗೆ ಪ್ರತಿ ತಿಂಗಳ 3 ನೇ ಶನಿವಾರ 'ಬ್ಯಾಗ್‌ ರಹಿತ' ದಿನವಾಗಿ ಆಚರಣೆ

ಶಾಲಾ ಮಕ್ಕಳಿಗೆ ಬ್ಯಾಗ್ ಹೊರೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಬ್ಯಾಗ್ ತೂಕದ ಮಿತಿಯನ್ನು ನಿಗದಿ ಪಡಿಸಲಾಗಿತ್ತು. ಈ ಬಳಿಕ ಶಾಲಾ ವಿದ್ಯಾರ್ಥಿಗಳಿಗೆ ಪ್ರತಿ ತಿಂಗಳ 3ನೇ ಶನಿವಾರವನ್ನು ಬ್ಯಾಗ್ ರಹಿತ ದಿನ ಅಥವಾ ಸಂಭ್ರಮ ಶನಿವಾರ ಕಾರ್ಯಕ್ರಮವಾಗಿ ಆಚರಿಸಲು ಶಿಕ್ಷಣ ಇಲಾಖೆ ಸೂಚಿಸಿದೆ.

2023-24ನೇ ಸಾಲಿನಲ್ಲಿ ಪ್ರತಿ ತಿಂಗಳು 3ನೇ ಶನಿವಾರವನ್ನು ಶಾಲಾ ಹಂತದಲ್ಲಿ ಚಟುವಟಿಕೆ ಹಮ್ಮಿಕೊಳ್ಳುವಂತೆ ಸೂಚಿಸಿ , ರಾಜ್ಯ ಶಿಕ್ಷಣ ಸಂಶೋಧನಾ ಮತ್ತು ತರಬೇತಿ ಇಲಾಖೆಯಿಂದ ಆದೇಶ ಹೊರಡಿಸಲಾಗಿದೆ.

ಮಕ್ಕಳಿಗೆ ಬಹುಮಖ ಚಟುವಟಿಕೆಗಳಲ್ಲಿ ತೊಡಗಿಸುವ ನಿಟ್ಟಿನಲ್ಲಿ ಹಾಗೂ ನಾಗರೀಕ ಪ್ರಜ್ಞೆಯನ್ನು ಬೆಳೆಸುವ ವಿಷಯಗಳಲ್ಲಿ ವಿದ್ಯಾರ್ಥಿಗಳಿಗೆ 10 ಸ್ವಯಂ ವಿವರಣಾತ್ಮಕ ಮಾಡ್ಯೂಲ್ ಗಳನ್ನು, ಶಿಕ್ಷಕರಿಗೆ ಮಾರ್ಗದರ್ಶಿ ಕೈಪಿಡಿಯಲ್ಲಿ ತಿಳಿಸಲಾಗಿದೆ.

ಪ್ರತಿ ತಿಂಗಳ 3ನೇ ಶನಿವಾರದ ಸಂಭ್ರಮದ ಶನಿವಾರದಂದು ಜಿಲ್ಲಾ, ಬ್ಲಾಕ್ ಹಂತದ ಎಲ್ಲಾ ಅಧಿಕಾರಿಗಳು ಶಾಲೆಗೆ ಕಡ್ಡಾಯವಾಗಿ ಭೇಟಿ ನೀಡಿ, ಅಗತ್ಯ ಮಾರ್ಗದರ್ಶನವನ್ನು ನೀಡಬೇಕು. ಬೆಂಗಳೂರು ಟ್ರಾಫಿಕ್ ಸಮಸ್ಯೆ : ರಾಜ್ಯ ಸರ್ಕಾರದಿಂದ ಸುರಂಗ ಮಾರ್ಗ ರಸ್ತೆ ನಿರ್ಮಿಸಲು ಚಿಂತನೆ

ಸಂಭ್ರಮ ಶನಿವಾರ ಆಚರಣೆಗೆ ಸಂಬಂಧಿಸಿದಂತ ಮಾಹಿತಿ ಕ್ರೂಢೀಕರಿಸಿ, ವರದಿ ಸಲ್ಲಿಸುವಂತೆ ಡಿಎಸ್‌ಇಆರ್ ಟಿ ನಿರ್ದೇಶಕಿ ವಿ.ಸುಮಂಗಲಾ ತಿಳಿಸಿದ್ದಾರೆ.

Share This Article
Leave a comment