3ನೇ ಟಿ-20: ಸೂರ್ಯಕುಮಾರ್ ಮಿಂಚು, ಭಾರತಕ್ಕೆ 7 ವಿಕೆಟ್ ಜಯ

Team Newsnap
1 Min Read

ಆರಂಭಿಕ ಸೂರ್ಯಕುಮಾರ್ ಯಾದವ್ ಭರ್ಜರಿ ಬ್ಯಾಟಿಂಗ್ ಪ್ರದರ್ಶನದಿಂದ ಭಾರತ ತಂಡ 7 ವಿಕೆಟ್ ಗಳಿಂದ ವೆಸ್ಟ್ ಇಂಡೀಸ್ ತಂಡವನ್ನು ಲೀಲಾಜಾಲಗಿ ಸೋಲಿಸಿ 5 ಪಂದ್ಯಗಳ ಟಿ-20 ಸರಣಿಯಲ್ಲಿ 2-1ರಿಂದ ಮುನ್ನಡೆ ಸಾಧಿಸಿದೆ.

ಬಸೆಟ್ಟೆರಿಯಲ್ಲಿ ಮಂಗಳವಾರ ತಡರಾತ್ರಿ ನಡೆದ ಮೂರನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ವೆಸ್ಟ್ ಇಂಡೀಸ್ ತಂಡ 20 ಓವರ್ ಗಳಲ್ಲಿ 5 ವಿಕೆಟ್ ಗೆ 164 ರನ್ ಗಳಿಸಿತು.

ಸ್ಪರ್ಧಾತ್ಮಕ ಮೊತ್ತ ಬೆಂಬತ್ತಿದ ಭಾರತ 1 ಓವರ್ ಗಳು ಬಾಕಿ ಇರುವಂತೆಯೇ 3 ವಿಕೆಟ್ ಕಳೆದುಕೊಂಡು ಜಯಭೇರಿ ಬಾರಿಸಿತು.

ನಾಯಕ ರೋಹಿತ್ ಶರ್ಮ (11) ಗಾಯಗೊಂಡು ನಿವೃತ್ತಿಗೊಂಡ ನಂತರ ಜೊತೆಯಾದ ಸೂರ್ಯಕುಮಾರ್ ಯಾದವ್ ಮತ್ತು ಶ್ರೇಯಸ್ ಅಯ್ಯರ್ 2ನೇ ವಿಕೆಟ್ ಗೆ 96 ರನ್ ಜೊತೆಯಾಟದ ಮೂಲಕ ತಂಡವನ್ನು ಮುನ್ನಡೆಸಿದರು. ಸೂರ್ಯಕುಮಾರ್ ಯಾದವ್ 44 ಎಸೆತಗಳಲ್ಲಿ 8 ಬೌಂಡರಿ ಮತ್ತು 4 ಸಿಕ್ಸರ್ ಒಳಗೊಂಡ 76 ರನ್ ಗಳಿಸಿ ಔಟಾದರೆ, ಅಯ್ಯರ್ 27 ಎಸೆತಗಳಲ್ಲಿ 2 ಬೌಂಡರಿ ಸೇರಿದ 24 ರನ್ ಬಾರಿಸಿ ನಿರ್ಗಮಿಸಿದರು.

ರಿಷಭ್ ಪಂತ್ 26 ಎಸೆತಗಳಲ್ಲಿ 3 ಬೌಂಡರಿ ಮತ್ತು 1 ಸಿಕ್ಸರ್ ಒಳಗೊಂಡ 33 ರನ್ ಬಾರಿಸಿ ಅಜೇಯರಾಗಿ ಉಳಿಯುವ ಮೂಲಕ ತಂಡವನ್ನು ಗೆಲುವಿನ ದಡ ಸೇರಿಸಿದರು. ದೀಪಕ್ ಹೂಡಾ ಅಜೇಯ 10 ರನ್ ಬಾರಿಸಿದರು.

ಇದಕ್ಕೂ ಮುನ್ನ ಬ್ಯಾಟ್ ಮಾಡಿದ ವೆಸ್ಟ್ ಇಂಡೀಸ್ ತಂಡ ಆರಂಭಿಕ ಕೈಲ್ ಮೇಯರ್ಸ್ ಅರ್ಧಶತಕದಿಂದ ಬೃಹತ್ ಮೊತ್ತ ಕಲೆಹಾಕಿತು. ಕೈಲ್ ಮೇಯರ್ಸ್ 50 ಎಸೆತಗಳಲ್ಲಿ 8 ಬೌಂಡರಿ ಮತ್ತು 4 ಸಿಕ್ಸರ್ ಒಳಗೊಂಡ 73 ರನ್ ಬಾರಿಸಿ ಔಟಾದರೆ, ಬ್ರೆಂಡನ್ ಕಿಂಗ್ (20), ನಾಯಕ ನಿಕೊಲಸ್ ಪೂರನ್ (22), ರೊವನ್ ಪೊವೆಲ್ (23) ಮತ್ತು ಶಿರ್ಮೊನ್ ಹೆಟ್ಮೆಯರ್ (20) ಉಪಯುಕ್ತ ಕಾಣಿಕೆ ನೀಡಿದರು.

Share This Article
Leave a comment