ಬೆಂಗಳೂರು: ಲೋಕಾ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿಗಳು ಬೆಂಗಳೂರಿನ ಜಯನಗರದ ನಾಲ್ಕನೇ ಬ್ಲಾಕ್ ನಲ್ಲಿ ಕಾರೊಂದಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 4 ಕೋಟಿ ರೂ ಹಣವನ್ನು ಶನಿವಾರ ವಶಕ್ಕೆ ಪಡೆದುಕೊಂಡಿದ್ದಾರೆ.
ಜಯನಗರದಲ್ಲಿ ಬೆಂಜ್ ಕಾರಿನಲ್ಲಿ ಕೋಟಿ ಕೋಟಿ ಹಣವನ್ನು ಸಾಗಿಸಲಾಗುತ್ತಿದೆ ಎಂದು ಅಪರಿಚಿತರು ಕರೆ ಮಾಡಿದ ಹಿನ್ನೆಲೆಯಲ್ಲಿ ಅಖಾಡಕ್ಕಿಳಿದ ಅಧಿಕಾರಿಗಳು, ಸ್ಕೂಟಿಯಲ್ಲಿದ್ದ ಕೋಟಿ ಕೋಟಿ ಹಣವನ್ನು ಕಾರಿಗೆ ಶಿಫ್ಟ್ ಮಾಡಿದ್ದಾರೆ ಎಂಬ ಮಾಹಿತಿ ಸಿಕ್ಕಿದ್ದು ಕೂಡಲೇ ಎರಡು ಕಾರುಗಳನ್ನು ನಿಲ್ಲಿಸಿ ಪರಿಶೀಲನೆ ಮಾಡುವಾಗ ಕೋಟಿ ಕೋಟಿ ಹಣ ಪತ್ತೆಯಾಗಿದೆ.
ಯಾರಿಗೂ ಅನುಮಾನ ಬಾರದಿರಲಿ ಎಂದು ಕಿಡಿಗೇಡಿಗಳು ಸುಮಾರು 4 ಕೋಟಿ ರೂ. ಹಣವನ್ನು ಗೋಣಿಚೀಲದಲ್ಲಿ ತುಂಬಿದ್ದರು.
ಅಧಿಕಾರಿಗಳು ತಪಾಸಣೆಗೆ ಮುಂದಾದ ಮಾವಿನ ಹಣ್ಣಿನ ಬ್ಯಾಗ್ ಎಂದು ಸಬುಬೂ ಹೇಳಿ ಕಾರನ್ನು ಲಾಕ್ ಮಾಡಿದ್ದಾರೆ. ಅನುಮಾನಗೊಂಡ ಚುನಾಣಾಧಿಕಾರಿಗಳು ಕಾರಿನ ಗ್ಲಾಸ್ ಒಡೆದು ಪರಿಶೀಲನೆ ನಡೆಸಿದಾಗ ನಗದು ಪತ್ತೆಯಾಗಿದೆ.
ಕಂತೆ ಕಂತೆ ಹಣ ಸಿಗುತ್ತಿದ್ದಂತೆ ಕಾರಿನಲ್ಲಿದ್ದ ಐವರು ನಾಪತ್ತೆಯಾಗಿದ್ದಾರೆ . ವಶಕ್ಕೆಪಡೆದಕೊಂಡ ಹಣವನ್ನು ಜಯನಗರ ಪೊಲೀಸ್ ಠಾಣೆಯಲ್ಲಿ ಇಡಲಾಗಿದೆ. ಐಟಿ ಅಧಿಕಾರಿಗಳು ಪರಿಶೀಲನೆ ಆರಂಭಿಸಿದ್ದಾರೆ.
More Stories
ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
IDBI ಬ್ಯಾಂಕಿನಲ್ಲಿ 600 ಹುದ್ದೆಗಳ ನೇಮಕಾತಿ – 2024
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ