ಮೈಸೂರು: ಒಂದೇ ಕುಟುಂಬದ ನಾಲ್ವರ ಸಾವು- ಅನಿಲ ಸೋರಿಕೆ ದುರಂತಕ್ಕೆ ಕಾರಣ

Team Newsnap
1 Min Read
  • ಮನೆಯಲ್ಲಿ ಮಲಗಿದ್ದ ವೇಳೆ ಒಂದೇ ಕುಟುಂಬದ ನಾಲ್ವರು ದಾರುಣ ಸಾವು
  • ಐರನ್ ಅಂಗಡಿ ಇಟ್ಟುಕೊಂಡು ಜೀವನ ನಡೆಸುತ್ತಿದ್ದ ಕುಮಾರಸ್ವಾಮಿ ಕುಟುಂಬ
  • ಪತಿ, ಪತ್ನಿ ಇಬ್ಬರು ಮಕ್ಕಳು ಮಲಗಿದ್ದಲ್ಲಿಯೇ ಪ್ರಾಣ ಬಿಡಲು ಕಾರಣವೇನು?

ಮೈಸೂರು : ಮೈಸೂರಿನ ಮನೆಯೊಂದರಲ್ಲಿ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದೆ.ಪತಿ, ಪತ್ನಿ ಇಬ್ಬರು ಮಕ್ಕಳು ಮಲಗಿದ್ದಲ್ಲಿಯೇ ಪ್ರಾಣ ಬಿಟ್ಟಿದ್ದಾರೆ.

ಮೈಸೂರಿನ ಯರಗನಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಕುಮಾರಸ್ವಾಮಿ (45), ಪತ್ನಿ ಮಂಜುಳ (39) ಮಕ್ಕಳಾದ ಅರ್ಚನಾ (19), ಸ್ವಾತಿ (17) ಮೃತ ದುರ್ದೈವಿಗಳು.

ಕುಮಾರಸ್ವಾಮಿ ಅವರ ಕುಟುಂಬ ಐರನ್ ಅಂಗಡಿ ಇಟ್ಟುಕೊಂಡು ಜೀವನ ಸಾಗಿಸುತ್ತಿತ್ತು. ಇವರ ಇಬ್ಬರು ಮಕ್ಕಳು ಪದವಿ ವ್ಯಾಸಂಗ ಮಾಡುತ್ತಿದ್ದರು. ಮೃತರೆಲ್ಲರೂ ಅನಿಲ ಸೋರಿಕೆಯಿಂದ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.ಜ್ಞಾನಬುತ್ತಿ ಸಂಸ್ಥೆಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ನಡೆಯುವ ಉಚಿತ ತರಬೇತಿ ಶಿಬಿರದ ಉದ್ಘಾಟನೆ

ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ ಸುದ್ದಿ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಪೊಲೀಸ್ ಕಮೀಷನರ್ ರಮೇಶ್ ಬಾನೋತ್ ಭೇಟಿ ನೀಡಿದ್ದರು. ಆಲನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, FSL ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share This Article
Leave a comment