ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಕುಂಟೋಜಿ ಗ್ರಾಮದ ಹೊರವಲಯದಲ್ಲಿ ಘಟನೆ ನಡೆದಿದ್ದು ,ಅಪಘಾತದಲ್ಲಿ ಇಬ್ಬರು ಪಾದಚಾರಿಗಳು ಹಾಗೂ ಬೈಕ್ ಸವಾರರಿಬ್ಬರು ಸೇರಿ ಒಟ್ಟು ನಾಲ್ವರು ಯುವಕರ ಮೃತಪಟ್ಟಿದ್ದಾರೆ.
ನಿನ್ನೆ ರಾತ್ರಿ 11 ಗಂಟೆಗೆ ಘಟನೆ ನಡೆದಿದ್ದು ಮೂವರು ಸಾವನ್ನಪ್ಪಿದ್ದು, ಇನ್ನೋರ್ವ ಆಸ್ಪತ್ರೆಯಲ್ಲಿ ಕೊನೆಯುಸಿರೆಳದಿದ್ದಾನೆ.
ಅನಿಲ ಖೈನೂರ (23), ಚೌಡಕಿ (22), ಕುಮಾರ ಪ್ಯಾಟಿ (18), ರಾಯಪ್ಪ ಬಾಗೇವಾಡಿ (24) ಮೃತ ದುರ್ದೈವಿಗಳಾಗಿದ್ದಾರೆ.
ಶಾಹಿದ ಹುನಗುಂದ, ಪ್ರಶಾಂತ ಕುರುಬಗೌಡರ, ಹನಮಂತ ಕರುಬಗೌಡರಗೆ ಗಂಭಿರ ಗಾಯಗಳಾಗಿದ್ದು, ಬಾಗಲಕೋಟೆ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು