ಮತದಾರರ ದತ್ತಾಂಶ ಕಳ್ಳತನ ಪ್ರಕರಣ ಸಂಬಂಧಿಸಿದಂತೆ ನಾಲ್ಕು ಕಂದಾಯ ಇಲಾಖೆ ಅಧಿಕಾರಿಗಳನ್ನು ರಾಜ್ಯ ಸರ್ಕಾರ ಅಮಾನತ್ತು ಮಾಡಿದೆ.
ಎರಡು ವಿಧಾನಸಭಾ ಕ್ಷೇತ್ರಗಳಲ್ಲಿ ಚುನಾವಣಾ ಸಂಬಂಧಿತ ಕರ್ತವ್ಯಗಳ ಉಸ್ತುವಾರಿ ವಹಿಸಿದ್ದ ನಾಲ್ವರು ಕಂದಾಯ ಅಧಿಕಾರಿಗಳು ಅಮಾನತುಗೊಂಡಿದ್ದಾರೆ.ಶಿರಾಡಿ ಘಾಟ್ ಗೆ 23 ಕಿ.ಮೀ ಸುರಂಗ : ಕೇಂದ್ರ ಸರ್ಕಾರ ಒಪ್ಪಿಗೆ
ಬಿಬಿಎಂಪಿ ಬರೆದ ಪತ್ರವನ್ನು ಆಧರಿಸಿ ನಗರಾಭಿವೃದ್ಧಿ ಇಲಾಖೆಯ ನಾಲ್ವರು ಚುನಾವಣಾ ನೋಂದಣಿ ಅಧಿಕಾರಿಗಳಾದ (ಇಆರ್‌ಒ) ಚಂದ್ರಶೇಖರ್ (ಮಹದೇವಪುರ), ವಿ.ಬಿ.ಭೀಮಾಶಂಕರ್ (ಚಿಕ್ಕಪೇಟೆ), ಸುಹೇಲ್ ಅಹಮದ್ ಮತ್ತು ಗುಲ್ತಾಜ್ ಫಾತಿಮಾ (ಶಿವಾಜಿನಗರ) ಅಮಾನತುಗೊಳಿಸಲಾಗಿದೆ.
ಈ ಅಧಿಕಾರಿಗಳು ಖಾಸಗಿ ವ್ಯಕ್ತಿ ಅಥವಾ ಸಂಸ್ಥೆಗೆ ಚುನಾವಣಾ ಸಂಬಂಧಿತ ಚಟುವಟಿಕೆಗಳಿಗೆ ಗುರುತಿನ ಚೀಟಿ ನೀಡುವುದನ್ನು ನಿರ್ಬಂಧಿಸುವ ಜನಪ್ರತಿನಿಧಿ ಕಾಯ್ದೆಯನ್ನು ಉಲ್ಲಂಘಿಸಿದ್ದಾರೆ. ಗುರುತಿನ ಚೀಟಿ ನೀಡಿ ಅಕ್ರಮಕ್ಕೆ ಕಾರಣರಾಗಿದ್ದಾರೆ ಎಂದು ತಿಳಿದು ಬಂದಿದೆ.
ವಿವಿಧ ಕ್ಷೇತ್ರಗಳಲ್ಲಿ ಮತದಾರರ ದತ್ತಾಂಶ ಸಂಗ್ರಹಿಸುವಲ್ಲಿ ಸರ್ಕಾರೇತರ ಸಂಸ್ಥೆ ಚಿಲುಮೆ ತೊಡಗಿಸಿಕೊಂಡಿತ್ತು. ಬಳಿಕ ಈ ಸಂಸ್ಥೆ ಸದಸ್ಯರು, ಮುಖ್ಯಸ್ಥರು ಬಿಬಿಎಂಪಿ ಹಾಕಿದ್ದ ಷರತ್ತು ಉಲ್ಲಂಘಿಸಿದ ಅಕ್ರಮ ಮಾಹಿತಿ ಸಂಗ್ರಹಿಸಿ ದುರ್ಬಳಕೆ ಮಾಡಿಕೊಂಡಿದ್ದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು