January 15, 2025

Newsnap Kannada

The World at your finger tips!

selebriti

ನಟಿ ಸೋನಿಯಾ ನಿವಾಸದಲ್ಲಿ 40 ಗ್ರಾಂ ಗಾಂಜಾ ವಶ – ನಟಿಗೆ ಸಂಸದನ ಲಿಂಕ್ ?

Spread the love

ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ, ಸೆಲೆಬ್ರಿಟಿ ಮಾಡೆಲ್ ಸೋನಿಯಾ ಅಗರ್ವಾಲ್ ಮನೆಯ ಮೇಲೆ ದಾಳಿ ನಡೆಸಿದ ಪೂರ್ವ ವಲಯದ ಪೊಲೀಸರು 40 ಗ್ರಾಂ ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ.

ಈ ನಟಿ ಬೆಂಗಳೂರಿನ ಹಾಲಿ ಸಂಸದರೊಬ್ಬರ ಸಂಪರ್ಕ ಇಟ್ಟುಕೊಂಡಿದ್ದಾರೆಂದು ಹೇಳಲಾಗಿದೆ. ಮಹಿಳೆಯರಿಗೆ ಕಾಸ್ಮೆಟಿಕ್ ನೀಡುವ ಡಬ್ಬಿಗಳಲ್ಲಿ ನೂರು ಗಾಂಜಾ ಪ್ಯಾಕ್ ಗಳನ್ನು ಕಳುಹಿಸುತ್ತಿದ್ದರು ಎನ್ನಲಾಗಿದೆ

ಪೋಲಿಸ್ ದಾಳಿ ಸಿಕ್ಕಿದ್ದೇನು?

ಡಿಜೆ ಹಳ್ಳಿ ಇನ್ಸ್‍ಪೆಕ್ಟರ್ ನೇತೃತ್ವದಲ್ಲಿ ಈ ದಾಳಿ ನಡೆದಿದೆ. ದಾಳಿಯ ಸಮಯದಲ್ಲಿ ಸೋನಿಯಾ ಅಗರ್ವಾಲ್ ಮನೆಯಲ್ಲಿ ಇರಲಿಲ್ಲ. ಭಾನವಾರ ರಾತ್ರಿ ಪಾರ್ಟಿಗೆ ಹೋಗಿದ್ದ ಆಕೆ ಮನೆಗೆ ಬಂದಿರಲಿಲ್ಲ.

ದಾಳಿ ನಡೆದ ಹಿನ್ನೆಲೆಯಲ್ಲಿ ಪೊಲೀಸರು ಆಕೆಗೆ ಕರೆ ಮಾಡಿದ್ದಾರೆ. ಈ ವೇಳೆ ಆಕೆ ಕರೆಯನ್ನು ಸ್ವೀಕರಿಸಲಿಲ್ಲ. ಆ ಬಳಿಕ ಆಕೆಯ ತಂದೆಯಿಂದ ಫೋನ್ ಕರೆ ಮಾಡಿಸಿದ್ದಾರೆ. ಈ ವೇಳೆ ಆಕೆ ಮಧ್ಯಾಹ್ನ 12 ಗಂಟೆಗೆ ಬರುವುದಾಗಿ ಹೇಳಿದ್ದಾಳೆ.

ಅಗರ್ವಾಲ್ ಮನೆಗೆ ಬಾರದ ಹಿನ್ನೆಲೆಯಲ್ಲಿ ಆಕೆಯ ತಂದೆಯಿಂದ ಕೀ ತೆಗೆಸಿ ಮನೆಯನ್ನು ಜಾಲಾಡಿದ್ದಾರೆ. ಈ ವೇಳೆ 40 ಗ್ರಾಂ ಗಾಂಜಾ ಪತ್ತೆಯಾಗಿದೆ.

ಆರ್ಗ್ಯಾನಿಕ್ ಕಾಸ್ಮೆಟಿಕ್ ಕಂಪನಿ ನಡೆಸುತ್ತಿದ್ದ ಸೋನಿಯಾ ಜೊತೆ ಡಜನ್‍ಗಟ್ಟಲೇ ಸೆಲೆಬ್ರಿಟಿಗಳ ಲಿಂಕ್ ಇರುವುದು ಗೊತ್ತಾಗಿದೆ. ಎಲ್ಲಾ ಪಾರ್ಟಿಗಳಲ್ಲಿ ಸೋನಿಯಾ ಅಗರ್ವಾಲ್ ಭಾರತಕ್ಕೆ ಸೆಲೆಬ್ರಿಟಿಗಳು ಎಂಟ್ರಿ ಕೊಡುತ್ತಿದ್ದರು.

Copyright © All rights reserved Newsnap | Newsever by AF themes.
error: Content is protected !!