ಬೆಂಗಳೂರು: ಬಿಜೆಪಿ ಮತ್ತು ಜೆಡಿಎಸ್‍ನ ಶಾಸಕರು ಮತ್ತು ಮಾಜಿ ಶಾಸಕರು ಸೇರಿದಂತೆ 42ಕ್ಕೂ ಹೆಚ್ಚು ನಾಯಕರು ಕಾಂಗ್ರೆಸ್ ಸೇರ್ಪಡೆಗೆ ಮುಂದಾಗಿದ್ದಾರೆ. ಆದರೆ ಈಗ ಅವರ ಹೆಸರುಗಳನ್ನು ಬಹಿರಂಗ ಮಾಡುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಬಾಂಬ್ ಸಿಡಿಸಿದ್ದಾರೆ.
ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಗುರುವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಬಿಜೆಪಿ ಮಾಜಿ ಶಾಸಕ ರಾಮಣ್ಣ ಲಮಾಣಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಅವರನ್ನು ಪಕ್ಷಕ್ಕೆ ಸ್ವಾಗತಿಸಿದ ನಂತರ ಡಿಸಿಎಂ ಡಿ.ಕೆ. ಶಿವಕುಮಾರ್ ಮಾತನಾಡಿ, ಜಗದೀಶ್ ಶೆಟ್ಟರ್ ಮತ್ತು ಲಕ್ಷ್ಮಣ ಸವದಿ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಆಗಲು ಬಯಸಿರುವ ಉತ್ತರ ಕರ್ನಾಟಕದ ನಾಯಕರ ದೊಡ್ಡ ಪಟ್ಟಿಯನ್ನೇ ನನಗೆ ನೀಡಿ, ಈ ಬಗ್ಗೆ ಚರ್ಚೆ ಮಾಡಿದ್ದಾರೆ. ವಿವಿಧ ಪಕ್ಷಗಳ 42ಕ್ಕೂ ಹೆಚ್ಚು ಮುಖಂಡರ ಮನವಿ ನನ್ನ ಮುಂದಿದೆ.
ಪಕ್ಷ ಸೇರ್ಪಡೆ ಬಗ್ಗೆ ಕಾಂಗ್ರೆಸ್‍ನ ಸ್ಥಳೀಯ ನಾಯಕರುಗಳ ಜತೆ ಚರ್ಚೆ ಮಾಡಿ ಒಮ್ಮತ ಮೂಡಿಸಿ ಅನ್ಯ ಪಕ್ಷಗಳ ನಾಯಕರುಗಳನ್ನು ಸೇರ್ಪಡೆ ಮಾಡಿಕೊಳ್ಳುವ ಪ್ರಕ್ರಿಯೆ ನಡೆಯುತ್ತಿದೆ. ವಿರೋಧ ಪಕ್ಷಗಳ ಮೈತ್ರಿಯನ್ನು ವಿರೋಧಿಸಿ ಕಾಂಗ್ರೆಸ್ ಪಕ್ಷವನ್ನು ಸೇರುತ್ತಿರುವುದರಿಂದ ರಾಜ್ಯ, ರಾಷ್ಟ್ರಮಟ್ಟದಲ್ಲಿ ನಮ್ಮ ಪಕ್ಷ ಹಾಗೂ ಕಾರ್ಯಕರ್ತರಿಗೆ ಶಕ್ತಿ ತುಂಬಿದಂತಾಗಿದೆ ಎಂದು ಅಭಿಪ್ರಾಯಪಟ್ಟರು.
ಕೆಲವರು 2024ರಲ್ಲಿ ವಿಧಾನಸಭಾ ಚುನಾವಣೆ ನಡೆಯುತ್ತದೆ ಎಂದು ಹೇಳುತ್ತಿದ್ದಾರೆ. ಅದರ ವಿವರಣೆಗೆ ನಾನು ಹೋಗುವುದಿಲ್ಲ. ಆಮ್ ಆದ್ಮಿ ಪಕ್ಷದಿಂದ ಸ್ಪರ್ಧೆ ಮಾಡಿದ 100ಕ್ಕೂ ಹೆಚ್ಚು ಜನ ಅಭ್ಯರ್ಥಿಗಳು ನನ್ನನ್ನು ಭೇಟಿ ಮಾಡಿದ್ದಾರೆ. ನಾವು ‘ಇಂಡಿಯಾ’ದಲ್ಲಿ ಗುರುತಿಸಿಕೊಂಡಿದ್ದು, ನಿಮ್ಮ ಜೊತೆ ಕೈ ಜೋಡಿಸುತ್ತೇವೆ ಎಂದು ಹೇಳಿದ್ದಾರೆ ಎಂದು ಹೇಳಿದರು.ಮೈಸೂರಿನಲ್ಲಿ ಮಹಿಷ ದಸರಾಕ್ಕೆ ಷರತ್ತಿನ ಅನುಮತಿ
ಅಲ್ಲದೆ ಬೀದರ್ ನಿಂದ ಚಾಮರಾಜನಗರದ ತನಕ ಕಾಂಗ್ರೆಸ್ ಪಕ್ಷ ಸೇರಲು ಹಲವು ನಾಯಕರು ಉತ್ಸುಕರಾಗಿದ್ದಾರೆ. ಬಿಜೆಪಿ ತಂಡವೊಂದು ಕಾಂಗ್ರೆಸ್ ಪಕ್ಷದ ನಾಯಕರು, ಶಾಸಕರನ್ನು ಭೇಟಿ ಮಾಡುತ್ತಿದೆ. ಈ ಭೇಟಿಯ ಬಗ್ಗೆ ನಮ್ಮ ಪಕ್ಷದ ಮುಖಂಡರು, ಶಾಸಕರು ಇಂಚಿಂಚೂ ಮಾಹಿತಿ ನೀಡುತ್ತಿದ್ದಾರೆ. ಈ ಬಗ್ಗೆ ಮಾಧ್ಯಮದವರು ಎಷ್ಟೇ ಚರ್ಚೆಗೆ ಎಳೆದರೂ ನಾನು ಏನನ್ನೂ ಬಿಟ್ಟುಕೊಡುವುದಿಲ್ಲ ಎಂದು ತಿಳಿಸಿದರು.
More Stories
ಬೊಲೆರೋ ಡಿಕ್ಕಿಯಿಂದ ಐವರು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ
ಗೃಹಲಕ್ಷ್ಮಿ ಯೋಜನೆ ಸ್ಥಗಿತ ಮಾಡುವ ಪ್ರಶ್ನೆಯೇ ಇಲ್ಲ: ಸಿಎಂ ಸಿದ್ದರಾಮಯ್ಯ
87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಇತಿಹಾಸ ಸೃಷ್ಟಿಸಲಿದೆ: ಸಚಿವ ಚಲುವರಾಯಸ್ವಾಮಿ