Karnataka

45 ನಾಯಕರು ಕಾಂಗ್ರೆಸ್ ಸೇರ್ಪಡೆ

ಬೆಂಗಳೂರು: ಬಿಜೆಪಿ ಮತ್ತು ಜೆಡಿಎಸ್‍ನ ಶಾಸಕರು ಮತ್ತು ಮಾಜಿ ಶಾಸಕರು ಸೇರಿದಂತೆ 42ಕ್ಕೂ ಹೆಚ್ಚು ನಾಯಕರು ಕಾಂಗ್ರೆಸ್ ಸೇರ್ಪಡೆಗೆ ಮುಂದಾಗಿದ್ದಾರೆ. ಆದರೆ ಈಗ ಅವರ ಹೆಸರುಗಳನ್ನು ಬಹಿರಂಗ ಮಾಡುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಬಾಂಬ್ ಸಿಡಿಸಿದ್ದಾರೆ.

ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಗುರುವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಬಿಜೆಪಿ ಮಾಜಿ ಶಾಸಕ ರಾಮಣ್ಣ ಲಮಾಣಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಅವರನ್ನು ಪಕ್ಷಕ್ಕೆ ಸ್ವಾಗತಿಸಿದ ನಂತರ ಡಿಸಿಎಂ ಡಿ.ಕೆ. ಶಿವಕುಮಾರ್ ಮಾತನಾಡಿ, ಜಗದೀಶ್ ಶೆಟ್ಟರ್ ಮತ್ತು ಲಕ್ಷ್ಮಣ ಸವದಿ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಆಗಲು ಬಯಸಿರುವ ಉತ್ತರ ಕರ್ನಾಟಕದ ನಾಯಕರ ದೊಡ್ಡ ಪಟ್ಟಿಯನ್ನೇ ನನಗೆ ನೀಡಿ, ಈ ಬಗ್ಗೆ ಚರ್ಚೆ ಮಾಡಿದ್ದಾರೆ. ವಿವಿಧ ಪಕ್ಷಗಳ 42ಕ್ಕೂ ಹೆಚ್ಚು ಮುಖಂಡರ ಮನವಿ ನನ್ನ ಮುಂದಿದೆ.

ಪಕ್ಷ ಸೇರ್ಪಡೆ ಬಗ್ಗೆ ಕಾಂಗ್ರೆಸ್‍ನ ಸ್ಥಳೀಯ ನಾಯಕರುಗಳ ಜತೆ ಚರ್ಚೆ ಮಾಡಿ ಒಮ್ಮತ ಮೂಡಿಸಿ ಅನ್ಯ ಪಕ್ಷಗಳ ನಾಯಕರುಗಳನ್ನು ಸೇರ್ಪಡೆ ಮಾಡಿಕೊಳ್ಳುವ ಪ್ರಕ್ರಿಯೆ ನಡೆಯುತ್ತಿದೆ. ವಿರೋಧ ಪಕ್ಷಗಳ ಮೈತ್ರಿಯನ್ನು ವಿರೋಧಿಸಿ ಕಾಂಗ್ರೆಸ್ ಪಕ್ಷವನ್ನು ಸೇರುತ್ತಿರುವುದರಿಂದ ರಾಜ್ಯ, ರಾಷ್ಟ್ರಮಟ್ಟದಲ್ಲಿ ನಮ್ಮ ಪಕ್ಷ ಹಾಗೂ ಕಾರ್ಯಕರ್ತರಿಗೆ ಶಕ್ತಿ ತುಂಬಿದಂತಾಗಿದೆ ಎಂದು ಅಭಿಪ್ರಾಯಪಟ್ಟರು.

ಕೆಲವರು 2024ರಲ್ಲಿ ವಿಧಾನಸಭಾ ಚುನಾವಣೆ ನಡೆಯುತ್ತದೆ ಎಂದು ಹೇಳುತ್ತಿದ್ದಾರೆ. ಅದರ ವಿವರಣೆಗೆ ನಾನು ಹೋಗುವುದಿಲ್ಲ. ಆಮ್ ಆದ್ಮಿ ಪಕ್ಷದಿಂದ ಸ್ಪರ್ಧೆ ಮಾಡಿದ 100ಕ್ಕೂ ಹೆಚ್ಚು ಜನ ಅಭ್ಯರ್ಥಿಗಳು ನನ್ನನ್ನು ಭೇಟಿ ಮಾಡಿದ್ದಾರೆ. ನಾವು ‘ಇಂಡಿಯಾ’ದಲ್ಲಿ ಗುರುತಿಸಿಕೊಂಡಿದ್ದು, ನಿಮ್ಮ ಜೊತೆ ಕೈ ಜೋಡಿಸುತ್ತೇವೆ ಎಂದು ಹೇಳಿದ್ದಾರೆ ಎಂದು ಹೇಳಿದರು.ಮೈಸೂರಿನಲ್ಲಿ ಮಹಿಷ ದಸರಾಕ್ಕೆ ಷರತ್ತಿನ ಅನುಮತಿ

ಅಲ್ಲದೆ ಬೀದರ್ ನಿಂದ ಚಾಮರಾಜನಗರದ ತನಕ ಕಾಂಗ್ರೆಸ್ ಪಕ್ಷ ಸೇರಲು ಹಲವು ನಾಯಕರು ಉತ್ಸುಕರಾಗಿದ್ದಾರೆ. ಬಿಜೆಪಿ ತಂಡವೊಂದು ಕಾಂಗ್ರೆಸ್ ಪಕ್ಷದ ನಾಯಕರು, ಶಾಸಕರನ್ನು ಭೇಟಿ ಮಾಡುತ್ತಿದೆ. ಈ ಭೇಟಿಯ ಬಗ್ಗೆ ನಮ್ಮ ಪಕ್ಷದ ಮುಖಂಡರು, ಶಾಸಕರು ಇಂಚಿಂಚೂ ಮಾಹಿತಿ ನೀಡುತ್ತಿದ್ದಾರೆ. ಈ ಬಗ್ಗೆ ಮಾಧ್ಯಮದವರು ಎಷ್ಟೇ ಚರ್ಚೆಗೆ ಎಳೆದರೂ ನಾನು ಏನನ್ನೂ ಬಿಟ್ಟುಕೊಡುವುದಿಲ್ಲ ಎಂದು ತಿಳಿಸಿದರು.

Team Newsnap
Leave a Comment

Recent Posts

SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ

ಬೆಂಗಳೂರು : ಶಿಕ್ಷಣ ಸಚಿವ ಮಧು ಬಂಗಾರಪ್ಪ , ಮುಂದಿನ ವರ್ಷದಿಂದ SSLC ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡಲಾಗುವುದಿಲ್ಲ ಎಂದು… Read More

May 17, 2024

ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ

ಬೆಂಗಳೂರು : ಆನೇಕಲ್ ತಾಲೂಕಿನ ಚಂದಾಪುರ ಸಮೀಪದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಅರಸೀಕೆರೆ ಮೂಲದ ಕರಡಿಹಳ್ಳಿ… Read More

May 17, 2024

ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್‌ನಲ್ಲಿ ಘೋಷಣೆ… Read More

May 16, 2024

ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ

ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More

May 16, 2024

ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ

ಹಾಸನ : ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ಕು ಮಕ್ಕಳು ಜಲ ಸಮಾಧಿ ಆದ ಘಟನೆ ಆಲೂರು ತಾಲೂಕಿನ, ತಿಮ್ಮನಹಳ್ಳಿ… Read More

May 16, 2024

ಪ್ರಜ್ವಲ್ ಪೆಂಡ್ರೈವ್ ಪ್ರಕರಣ : 10 ಪೆನ್ ಡ್ರೈವ್ ಪ್ರೀತಂ ಗೌಡ ಆಪ್ತರ ಮನೆಯಲ್ಲಿ ಪತ್ತೆ

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಅಧಿಕಾರಿಗಳು ಬಿಜೆಪಿ ಮಾಜಿ ಶಾಸಕ ಪ್ರೀತಂ ಗೌಡ ಆಪ್ತರ… Read More

May 16, 2024