Mysuru

ದಸರಾ ಮಹೋತ್ಸವಕ್ಕೆ 5.42 ಕೋಟಿ ರೂ. ವೆಚ್ಚ: ಸಚಿವ ಎಸ್.ಟಿ.ಸೋಮಶೇಖರ್

2021ರ ದಸರಾ ಮಹೋತ್ಸವಕ್ಕೆ ಸರ್ಕಾರ 6 ಕೋಟಿ ಅನುದಾನ ಬಿಡುಗಡೆ ಮಾಡಿತ್ತು. ಇದರಲ್ಲಿ 5,42,07,679 ರೂ. ಖರ್ಚಾಗಿದ್ದು 57 ಲಕ್ಷ ರೂ.ಗೂ ಹೆಚ್ಚು ಹಣ ಉಳಿತಾಯವಾಗಿದೆ ಎಂದು ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಖರ್ಚುವೆಚ್ಚಗಳ ಮಾಹಿತಿ ಬಿಡುಗಡೆ ಮಾಡಿದರು.

ನಾಡಹಬ್ಭ ಮೈಸೂರು ದಸರಾ ಮಹೋತ್ಸವದ ಇತಿಹಾಸದಲ್ಲಿ ಎರಡನೇ ಬಾರಿಗೆ ರಾಜ್ಯ ಸರ್ಕಾರದಿಂದ ಬಿಡುಗಡೆಯಾದ ಅನುದಾನದ ಖರ್ಚುವೆಚ್ಚಗಳ ಸಂಪೂರ್ಣ ಮಾಹಿತಿಯನ್ನು ಅರಮನೆ ಮಂಡಳಿ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿ ಮೂಲಕ ಬಿಡುಗಡೆ ಮಾಡಿದರು.‍‌‌

ಯಾವುದಕ್ಕೆಎಷ್ಟು ಖಚು೯ ?

ಮೈಸೂರು ದಸರಾಗೆ 4,22,07,679 ರೂ., ಖರ್ಚಾಗಿದೆ.

ಶ್ರೀರಂಗಪಟ್ಟಣ, ಚಾಮರಾಜನಗರ ದಸರಾ ಆಚರಣೆಗೆ ತಲಾ 50 ಲಕ್ಷ ರೂ., ಅರಕಲಗೂಡು ದಸರಾಗೆ 20 ಲಕ್ಷ ರೂ. ಬಿಡುಗಡೆ ಮಾಡಿದೆ .

ಒಟ್ಡು 5,42,07,679 ರೂ. ಹಣ ಖರ್ಚಾಗಿದೆ ಎಂದು ವಿವರಿಸಿದರು.

ಮೈಸೂರು ದಸರಾ ಆಮಂತ್ರಣ ಪತ್ರಿಕೆ, ಮುದ್ರಣ ಇತ್ಯಾದಿಗಳಿಗೆ 5,91,960 ರೂ. ಖರ್ಚಾಗಿದೆ

ಗಣ್ಯರು ಮತ್ತು ಕಲಾವಿದರ ಸಾರಿಗೆ ವ್ಯವಸ್ಥೆಗೆ 29,16,416 ರೂ. ಖರ್ಚಾಗಿದೆ.

ಜಂಬೂಸವಾರಿ ಮೆರವಣಿಗೆಗೆ 37,50,772 ರೂ., ಸಾಂಸ್ಕೃತಿಕ ಕಾರ್ಯಕ್ರಮಗಳ ಕಲಾವಿದರ ಸಂಭಾವನೆಗೆ 1,03,64,272 ರೂ. ಖರ್ಚಾಗಿದೆ.

ಸ್ತಬ್ಧ ಚಿತ್ರ ನಿರ್ಮಾಣಕ್ಕೆ 18,85,102 ರೂ., ಆನೆಗಳ‌ ನಿರ್ವಹಣೆಗೆ 50 ಲಕ್ಷ ರೂ.,

ದಸರಾ ಕಾರ್ಯಕ್ರಮಗಳ ವೇದಿಕೆ ಮತ್ತು ವಿದ್ಯುತ್ ಕಾಮಗಾರಿಗಳ ವ್ಯವಸ್ಥೆಗಾಗಿ 93,80,000 ರೂ., ವೆಬ್ ಕ್ಯಾಸ್ಟಿಂಗ್ ಗೆ 11,09,200 ರೂ. ವೆಚ್ಚವಾಗಿದೆ.

ಅರಮನೆಗೆ ಗೌರವ ಸಂಭಾವನೆಯಾಗಿ 40 ಲಕ್ಷ ರೂ., ದೂರದರ್ಶನದಲ್ಲಿ ಜಂಬೂಸವಾರಿ ನೇರಪ್ರಸಾರ ಮಾಡಿದ್ದಕ್ಕೆ 6,22,513 ರೂ.,

ದಸರಾ ಆನೆಗಳು ಹಾಗೂ ಕಾವಾಡಿಗರ ವಿಮೆಗೆ 24 ಸಾವಿರ ರೂ. ಭರಿಸಲಾಗಿದೆ.

ದಸರಾ ಸಂಬಂಧ ಉಪ ಸಮಿತಿ ಸಭೆಗೆ ಲೇಖನ ಸಾಮಾಗ್ರಿಗೆ 3245 ರೂ.,

ಉನ್ನತ ಮಟ್ಟದ ಸಮಿತಿ ಸಭೆ ಶಿಷ್ಟಾಚಾರಕ್ಕೆ ಹೋಟೆಲ್ ಮತ್ತು ಇತರೆ ವೆಚ್ಚಗಳಿಗೆ 47250 ರೂ., ದಸರಾ ಸಂಬಂಧ ನಡೆದ ವಿವಿಧ ಸಭೆಗಳಿಗೆ ಕಾಫಿ, ಟೀ, ಸ್ಮ್ಯಾಕ್ಸ್ ಗೆ 40,878 ರೂ., ಬಿಎಸ್ ಎನ್ ಎಲ್ ಗೆ 78,668 ರೂ., ಉನ್ನತ ಮಟ್ಟದ ಸಭೆಗೆ ಮತ್ತು ವಿಶೇಷಾಧಿಕಾರಿಗಳ ಕಚೇರಿಗೆ ಲೇಖನ ಸಾಮಾಗ್ರಿ ಖರೀದಿಗೆ 90,919 ರೂ., ಜಂಬೂ ಸವಾರಿ ನೇರ ವೀಕ್ಷಣೆ ವಿವರಣೆ ಬಿತ್ತರಿಸಲು ಆಕಾಶವಾಣಿಗೆ 67 ಸಾವಿರ ರೂ. ಪಾವತಿಸಲಾಗಿದೆ.

ದಸರಾ ಕಾರ್ಯಕ್ರಮಗಳ ಫೋಟೋ, ವೀಡಿಯೋಗ್ರಾಫಿಗೆ 95 ಸಾವಿರ ರೂ., ಸ್ವಚ್ಛತೆ ನಿರ್ವಹಣೆಗೆ 10, 76,072 ರೂ.,

ವಾರ್ತಾ ಇಲಾಖೆಗೆ 64,412 ರೂ., ದಸರಾ ರಂಗೋತ್ಸವ ಕಾರ್ಯಕ್ರಮಕ್ಕೆ ಅಂದಾಜು 10 ಲಕ್ಷ ರೂ. ವೆಚ್ಚವಾಗಿದೆ

ಮಳೆಹಾನಿ ಕುರಿತು ನೀಲನಕ್ಷೆ

ನಂತರ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಕಲಾವಿದರಿಗೆ ವೇದಿಕೆ ಮೇಲೆಯೇ ಸನ್ಮಾನಿಸಿ ನೇರವಾಗಿ ಚೆಕ್ ವಿತರಣೆ ಮಾಡಲಾಗಿದೆ. ಶಾಶ್ವತ ದೀಪಾಲಂಕಾರ ಪ್ರದರ್ಶನ ಸಂಬಂಧ ಮುಖ್ಯಮಂತ್ರಿ ಅವರೊಂದಿಗೆ ಚರ್ಚಿಸಲಾಗುವುದು. ಪ್ರವಾಸೋದ್ಯಮ ಅಭಿವೃದ್ಧಿಗೆ ಕ್ರಮವಹಿಸಲಾಗುವುದು. ಈ ಕುರಿತು ಮುಖ್ಯಮಂತ್ರಿ ಸಭೆ ನಡೆಸಲಿದ್ದಾರೆ ಎಂದರು.

ಮೈಸೂರು ಜಿಲ್ಲೆಯಲ್ಲಿ ಮಳೆ ಹಾನಿಯಿಂದ ಆಗಿರುವ ಹಾನಿ, ಅನಾಹುತಗಳ ಬಗ್ಗೆ ಮುಖ್ಯಮಂತ್ರಿಗಳ‌ ಗಮನಕ್ಕೆ ತರಲಾಗುವುದು. ಈ ಕುರಿತು ನೀಲನಕ್ಷೆ ತಯಾರಿಸಲಾಗಿದ್ದು ಅದನ್ನು ಸಿಎಂಗೆ ನೀಡಲಾಗುವುದು ಎಂದು ಹೇಳಿದರು.

ಮನ್ ಮುಲ್ ನಲ್ಲಿ ಹಾಲಿಗೆ ನೀರು ಬೆರೆಸಿದ ಪ್ರಕರಣ ತನಿಖೆ ಹೊಣೆಯನ್ನು ಸಿಒಡಿಗೆ ವಹಿಸಲಾಗಿದೆ. ಮೂರ್ನಾಲ್ಕು ದಿನದಲ್ಲಿ ಸಿಒಡಿ ವರದಿ ಸಲ್ಲಿಕೆಯಾಗಲಿದೆ. ಇದರ ಜೊತೆಗೆ ಸಹಕಾರಿ ಇಲಾಖೆ ಕೂಡ ವರದಿ ಸಿದ್ಧಪಡಿಸಿದ್ದು ಎರಡನ್ನು ಪರಾಮರ್ಶಿಸಿ ಕ್ರಮಕೈಗೊಳ್ಳಲಾಗುವುದು ಎಂದು ಸಚಿವರು ತಿಳಿಸಿದರು.

Team Newsnap
Leave a Comment
Share
Published by
Team Newsnap

Recent Posts

ಹೆಚ್‌.ಡಿ ರೇವಣ್ಣಗೆ ಹೊಟ್ಟೆ ಉರಿ, ಎದೆನೋವು: ದಿಢೀರ್‌ ಆಸ್ಪತ್ರೆಗೆ ಶಿಫ್ಟ್‌!

ಹೆಚ್‌.ಡಿ ರೇವಣ್ಣಗೆ ಮಧ್ಯಾಹ್ನದಿಂದ ಹೊಟ್ಟೆ ಉರಿ, ಎದೆನೋವು ಬೌರಿಂಗ್ ಆಸ್ಪತ್ರೆಯಲ್ಲಿ ಮೆಡಿಕಲ್‌ ಟೆಸ್ಟ್ ಮಾಡಿಸಿದ್ದ ಎಸ್‌ಐಟಿ ಅಧಿಕಾರಿಗಳು ಎದೆ ಉರಿ… Read More

May 7, 2024

ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಇಬ್ಬರು ಸರ್ಕಾರಿ ನೌಕರರು ಸಾವು

ಬೆಂಗಳೂರು : ಸೋಮವಾರ ಬಾಗಲಕೋಟೆ ಮತ್ತು ಬೀದರ್ ಜಿಲ್ಲೆಗಳಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜಿತರಾಗಿದ್ದ ಸರ್ಕಾರಿ ಶಾಲಾ ಮುಖ್ಯೋಪಾಧ್ಯಾಯರು ಮತ್ತು ಸಹಾಯಕ… Read More

May 7, 2024

Lok Sabha Election 2024 : ಕರ್ನಾಟಕದಲ್ಲಿ ಶೇ. 9.45% ರಷ್ಟು ಮತದಾನ

ನವದೆಹಲಿ : ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯ ಮೂರನೇ ಹಂತದ ಮತದಾನದಲ್ಲಿ ಶೇ. 9.45% ರಷ್ಟು ಮತದಾನವಾಗಿದೆ ಎಂದು ಎಂದು ಚುನಾವಣಾ… Read More

May 7, 2024

ಪ್ರಜ್ವಲ್‌ ಮಾತ್ರವಲ್ಲ , ತುಂಬ ರಾಜಕಾರಣಿಗಳ ವಿಡಿಯೋಗಳು ಸದ್ಯದಲ್ಲೇ ಹೊರಬರಲಿದೆ : ಕೆ ಎಸ್‌ ಈಶ್ವರಪ್ಪ

ಶಿವಮೊಗ್ಗ : ರಾಷ್ಟ್ರ ಮಟ್ಟದಲ್ಲಿ ಹಾಸನದ ಹಾಲಿ ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ ಡ್ರೈ ಪ್ರಕರಣ ಸದ್ದು ಮಾಡುತ್ತಿದ್ದು, ಪ್ರಜ್ವಲ್‌… Read More

May 7, 2024

ರಾಜ್ಯ ಸರ್ಕಾರವೇ ಪ್ರಜ್ವಲ್‌ ರೇವಣ್ಣ ವಿದೇಶಕ್ಕೆ ಹಾರಲು ಹೊಣೆ : ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (PM Narendra Modi) ಮೊದಲ ಬಾರಿಗೆ ಪ್ರಜ್ವಲ್ ರೇವಣ್ಣ (Prajwal Revanna) ವಿಡಿಯೋ ಪ್ರಕರಣಕ್ಕೆ… Read More

May 7, 2024

ಮಂಡ್ಯ : ಭಾರಿ ಮಳೆಗೆ ಕಾರಿನ ಮೇಲೆ ಮರ ಬಿದ್ದು ವ್ಯಕ್ತಿ ದುರ್ಮರಣ

ಮಂಡ್ಯ :ನೆನ್ನೆ ಮಳೆಯಿಂದಾಗಿ ಮರವೊಂದು ಕಾರಿನ ಮೇಲೆ ಬಿದ್ದ ಪರಿಣಾಮ ವ್ಯಕ್ತಿಯೊಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಡ್ಯ ನಗರದ ಜನರಲ್… Read More

May 7, 2024