ಪೊಲೀಸ್ ಕಲ್ಯಾಣ ನಿಧಿಗೆ 5 ಕೋಟಿ ರು – ಸಿಎಂ ಬೊಮ್ಮಾಯಿ ಪ್ರಕಟ

Team Newsnap
1 Min Read
BJP Parva begins in Old Mysore Province - CM Bommai ಹಳೇ ಮೈಸೂರು ಪ್ರಾಂತದಲ್ಲಿ ಬಿಜೆಪಿ ಪರ್ವ ಆರಂಭ - ಸಿಎಂ ಬೊಮ್ಮಾಯಿ

ಪೊಲೀಸ್ ಕಲ್ಯಾಣ ನಿಧಿಗೆ 5 ಕೋಟಿ ರುಗಳನ್ನು ಮಂಜೂರು ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶನಿವಾರ ಪ್ರಕಟಿಸಿದರು.

ಬೆಂಗಳೂರಿನ ಕೋರಮಂಗಲದ ಪೊಲೀಸ್ ಮೈದಾನದಲ್ಲಿ ಶನಿವಾರ ಆಯೋಜಿಸಿದ್ದ ಪೊಲೀಸ್ ಧ್ವಜ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.

ಪ್ರಗತಿಪರ ಸಮಾಜ, ಮಹಿಳೆಯರಿಗೆ ಸುರಕ್ಷಿತ ವಾತಾವರಣ ಕಲ್ಪಿಸಲು ಪೊಲೀಸರ ನಿಷ್ಠೆ, ದಕ್ಷತೆಯಿಂದ ಸಾಧ್ಯವಿದೆ. ಅಪರಾಧ, ಅಪರಾಧಿಗಳೊಂದಿಗೆ ರಾಜಿಯಿಲ್ಲದೆ ಕೆಲಸ ಮಾಡಿದರೆ ಅಪರಾಧ ತನ್ನಿಂದ ತಾನೇ ಕಡಿಮೆಯಾಗುತ್ತದೆ ಎಂದರು.

ರಾಜ್ಯ ಸರ್ಕಾರಕ್ಕೆ ನಿಮ್ಮ ಸೇವೆಗಳ ಬಗ್ಗೆ ಹೆಮ್ಮೆ ಇದೆ. ರಾಷ್ಟ್ರದಲ್ಲಿ ಕರ್ನಾಟಕ ಪೊಲೀಸ್ ನಂಬರ್‌ 1 ಸ್ಥಾನಕ್ಕೆ ಏರಲಿ ಎಂದರು.

ಸಮಾಜದ ಸ್ವಾಸ್ಥ್ಯ, ಶಾಂತಿ ಕಾಪಾಡಲು ತಮ್ಮ ಅಂತಃಕರುಣ, ಮಾನವೀಯತೆ ಬಹಳ ಮುಖ್ಯ. ನ್ಯಾಯ ನಿಷ್ಠುರವಾಗಿ ಕೆಲಸ ಮಾಡಬೇಕು. ಫೋರೆನ್ಸಿಕ್ ಪ್ರಯೋಗಾಲಯ ಅಪರಾಧಿಗಳ ಶೋಧನೆಯಲ್ಲಿ ಮಹತ್ವದ ಪಾತ್ರವನ್ನು ವಹಿಸುತ್ತದೆ. ಕೋರ್ಟ್‌ಗಳು ಅದರ ವರದಿಗೆ ಮಹತ್ವ ನೀಡುತ್ತದೆ. ಬೆಂಗಳೂರಿನಲ್ಲಿ ನಾರ್ಕೋಟಿಕ್ಸ್, ಸೈಬರ್ ಹಾಗೂ ಫೋರೆನ್ಸಿಕ್ ಲ್ಯಾಬ್ ವುಳ್ಳ ಠಾಣೆಗಳನ್ನು ತೆರೆಯಲಾಗಿದೆ ಎಂದು ಭರವಸೆ ನೀಡಿದರು.

ಹುಬ್ಬಳ್ಳಿ ಬಳ್ಳಾರಿಯಲ್ಲಿಯೂ ಠಾಣೆಗಳನ್ನು ಮೇಲ್ದರ್ಜೆಗೇರಿಸಲಾಗುತ್ತಿದೆ. ಶಿವಮೊಗ್ಗ ಮುಂತಾದ ಕಡೆಗಳಲ್ಲಿಯೂ ಫೋರೆನ್ಸಿಕ್ ಪ್ರಯೋಗಾಲಯಗಳನ್ನು ಮೇಲ್ದರ್ಜೆಗೇರಿಸಲು ಕ್ರಮ ವಹಿಸಬೇಕೆಂದು ಸೂಚಿಸಿದರು.

ಪೊಲೀಸರ ಬುದ್ಧಿವಂತಿಕೆಯೂ ಮುಖ್ಯ. ಹೊಸ ತರಬೇತಿ ವ್ಯವಸ್ಥೆ ಮತ್ತು ಸಿಬ್ಬಂದಿ ಹೆಚ್ಚಿಸುವ ಮೂಲಕ ಇಂಟೆಲಿಜೆನ್ಸ್ ನ್ನು ಇನ್ನಷ್ಟು ಸಧೃಢ ಮಾಡಲು ಕ್ರಮ ವಹಿಸಲಾಗಿದೆ ಎಂದರು.

Share This Article
Leave a comment