November 16, 2024

Newsnap Kannada

The World at your finger tips!

old mysuru , BJP Parva , CM

BJP Parva begins in Old Mysore Province - CM Bommai ಹಳೇ ಮೈಸೂರು ಪ್ರಾಂತದಲ್ಲಿ ಬಿಜೆಪಿ ಪರ್ವ ಆರಂಭ - ಸಿಎಂ ಬೊಮ್ಮಾಯಿ

ಆ್ಯಸಿಡ್ ದಾಳಿ ಸಂತ್ರಸ್ತೆಯರಿಗೆ ನಿವೇಶನ, ಮನೆ ಜೊತೆಗೆ ಸ್ವ ಉದ್ಯೋಗಕ್ಕೆ 5 ಲಕ್ಷ ನೆರವು : ಸಿಎಂ

Spread the love

ರಾಜ್ಯದಲ್ಲಿ ಆ್ಯಸಿಡ್ ದಾಳಿಗೆ ಒಳಗಾದ ಎಲ್ಲಾ ಹೆಣ್ಣುಮಕ್ಕಳಿಗೆ ಮನೆ, ನಿವೇಶನ ಹಾಗೂ ಸ್ವಯಂ ಉದ್ಯೋಗ ಯೋಜನೆಯಡಿಯಲ್ಲಿ 5 ಲಕ್ಷ ರೂ. ವರೆಗೆ ನೆರವು ನೀಡಲಾಗುವುದು.ಈ ವಿಷಯವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು.

ಕಂದಾಯ ಇಲಾಖೆಯ ಸಾಮಾಜಿಕ ಭದತ್ರೆ ಮತ್ತು ಪಿಂಚಣಿಗಳ ನಿರ್ದೇಶನಾಲಯದ ವತಿಯಿಂದ ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ `ಹಲೋ ಕಂದಾಯ ಸಚಿವರೇ – 72 ಗಂಟೆಯಲ್ಲಿ ಮನೆ ಬಾಗಿಲಿಗೆ ಪಿಂಚಣಿ ಸಹಾಯವಾಣಿ’ ಲೋಕಾರ್ಪಣೆಗೊಳಿಸಿದರು.

ಆ್ಯಸಿಡ್ ದಾಳಿಗೆ ಒಳಗಾದವರು ಬಹಳಷ್ಟು ನೋವು ಕಂಡಿದ್ದಾರೆ. ಸಮಾಜದಲ್ಲಿ ತಿರಸ್ಕಾರಕ್ಕೆ ಒಳಗಾಗಿರುತ್ತಾರೆ. ಅವರ ನೆರವಿಗೆ ನಿಲ್ಲುವುದು ಸರ್ಕಾರದ ಜವಾಬ್ದಾರಿ. ಈ ಹಿನ್ನೆಲೆಯಲ್ಲಿ ಅವರ ಮಾಸಾಶನವನ್ನು 3,000 ದಿಂದ 10 ಸಾವಿರ ರೂ.ಗೆ ಹೆಚ್ಚಿಸಲಾಗಿದೆ. ಜೊತೆಗೆ ಈಗ ಅವರಿಗೆ ಬದುಕು ಸಾಗಿಸಲು ಮನೆ ಹಾಗೂ ಸ್ವಯಂ ಉದ್ಯೋಗಕ್ಕಾಗಿ 5 ಲಕ್ಷ ರೂಪಾಯಿವರೆಗೆ ಸಹಾಯಧನ ನೀಡಲಾಗುವುದು ಎಂದರು.

ಇದನ್ನು ಓದಿ :ದೆಹಲಿ ಅಗ್ನಿ ದುರಂತ :ಸಜೀವ ದಹನದ ಸಂಖ್ಯೆ 26 ಕ್ಕೆ ಏರಿಕೆ – 2 ಲಕ್ಷರು ಪರಿಹಾರ : ರಾಷ್ಟ್ರಪತಿ, ಪ್ರಧಾನಿಗಳಿಂದ ಸಂತಾಪ

ಸಾಮಾಜಿಕ ಭದ್ರತಾ ಯೋಜನೆಗಳಡಿಯ ಪಿಂಚಣಿಗಳು ನೇರವಾಗಿ ಮನೆ ಬಾಗಿಲಿಗೆ ಮುಟ್ಟಬೇಕು. ಸಮಾಜದಲ್ಲಿ ಆಶ್ರಯ, ಸಹಾಯವಿಲ್ಲದವರಿಗೆ ಪಿಂಚಣಿ ನೀಡಬೇಕು. ಅದಕ್ಕಾಗಿ ವ್ಯವಸ್ಥೆ ಸರಿಪಡಿಸಲು ಕಂದಾಯ ಇಲಾಖೆಯನ್ನು ಚುರುಕುಗೊಳಿಸಲಾಗಿದೆ. ವ್ಯವಸ್ಥೆಯನ್ನು ಸರಿಪಡಿಸಿ ಈ ಕೆಲಸವನ್ನು ಮಾಡಲಾಗುತ್ತಿದೆ.

ಇದು ಜನಪರವಾದ ಆಡಳಿತ. ಮನೆ ಬಾಗಿಲಿಗೇ ಸರ್ಕಾರ ಬರುವುದು ಅಧಿಕಾರದ ವಿಕೇಂದ್ರೀಕರಣ. ವಿಧಾನಸಭೆಯಲ್ಲಿ ಅಧಿಕಾರ ಹೆಪ್ಪುಗಟ್ಟಬಾರದು. ಅಧಿಕಾರ ನೇರವಾಗಿ ಜೇನುತುಪ್ಪದಂತೆ ಹರಿಯುವಂತಿರಬೇಕು. ಈ ನಿಟ್ಟಿನಲ್ಲಿ ಕಾರ್ಯಕ್ರಮ ನೇರವಾಗಿ ಜನರಿಗೆ ತಲುಪುವಂಥದ್ದು ಎಂದು ಶ್ಲಾಘಿಸಿದ್ದಾರೆ.

Copyright © All rights reserved Newsnap | Newsever by AF themes.
error: Content is protected !!