ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ (KUWJ)ಮನವಿ ಮೇರೆಗೆ ಇತ್ತೀಚೆಗೆ ಮೃತಪಟ್ಟ ಪತ್ರಕರ್ತರಾದ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ವೆಂಕಟೇಶ ದೊರೆ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲ್ಲೂಕಿನ ಕೆ.ಖಾದರ್ ಅವರ ಕುಟುಂಬಕ್ಕೆ
ತಲಾ 5 ಲಕ್ಷ ರೂ ಪರಿಹಾರವನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಮಂಜೂರು ಮಾಡಿದ್ದಾರೆ.
ವೆಂಕಟೇಶ ದೊರೆ ಕುಟುಂಬಕ್ಕೆ ನೆರವು ನೀಡುವಂತೆ ಯಾದಗಿರಿ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘ, ಕೆ.ಖಾದರ್ ಕುಟುಂಬಕ್ಕೆ ನೆರವು ನೀಡುವಂತೆ ದಕ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘವು, ರಾಜ್ಯ ಸಂಘಕ್ಕೆ ಮನವಿ ಮಾಡಿತ್ತು. ಈ ಬಗ್ಗೆ ಮುಖ್ಯಮಂತ್ರಿ ಭೇಟಿ ಮಾಡಿದ್ದ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಮನವಿ ಸಲ್ಲಿಸಿದ್ದರು.
ಸಂಕಷ್ಟದಲ್ಲಿದ್ದ ಪತ್ರಕರ್ತರ ಕುಟುಂಬಕ್ಕೆ ತಲಾ 5 ಲಕ್ಷ ಮಂಜೂರು ಮಾಡಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಕೆಯುಡಬ್ಲ್ಯೂಜೆ ಅಧ್ಯಕ್ಷ ಶಿವಾನಂದ ತಗಡೂರು ಕೃತಜ್ಞತೆ ಸಲ್ಲಿಸಿದ್ದಾರೆ.
- ನಿಮ್ಮ ಮನದ ಭಾವನೆಗಳನ್ನು ಅರ್ಥಮಾಡಿಕೊಳ್ಳುವವರೇ ಇಲ್ಲದಾಗ …?
- ಎಳ್ಳು ಬೆಲ್ಲ ತಿಂದು ಅರೋಗ್ಯ ಹೆಚ್ಚಿಸಿಕೊಳ್ಳಿ
- ನಾನು ದೇವರಲ್ಲ, ನಾನೂ ಸಹ ತಪ್ಪು ಮಾಡಿದ್ದೇನೆ: ನಮೋ
- ಬಿಜೆಪಿಯಿಂದ ಪ್ರತಾಪ್ ಸಿಂಹ ಉಚ್ಛಾಟನೆಗೆ ಆಗ್ರಹ: ಪಕ್ಷ ತೊರೆಯಲಿದ್ದಾರಾ ಮಾಜಿ ಸಂಸದ?
- ಶಾಸಕ ಡಾ. ಚಂದ್ರು ಲಮಾಣಿ ಅವರ ಕಾರು ಚಾಲಕ ಆತ್ಮಹತ್ಯೆ
More Stories
ನಾನು ದೇವರಲ್ಲ, ನಾನೂ ಸಹ ತಪ್ಪು ಮಾಡಿದ್ದೇನೆ: ನಮೋ
ತಿರುಪತಿಯಲ್ಲಿ ಕಾಲ್ತುಳಿತ: 6 ಮಂದಿ ಸಾವು, ಸಾವಿನ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ
ಅಮಿತ್ ಶಾ ಹೇಳಿಕೆ ವಿರೋಧಿಸಿ ಮೈಸೂರು-ಮಂಡ್ಯ ಬಂದ್: ವಾಹನ ಸಂಚಾರಕ್ಕೆ ಅಡಚಣೆ