ಸಾಲ ಮನ್ನಾ, ಬಡ್ಡಿ ಇಲ್ಲದೇ 5 ಲಕ್ಷ- ಶೇ.3 ಬಡ್ಡಿ ದರದಲ್ಲಿ 20 ಲಕ್ಷ ರೂ.ಗೆ ಹೆಚ್ಚಳ-ಸಚಿವ ರಾಜಣ್ಣ

Team Newsnap
1 Min Read
Loan Waiver, 5 Lakhs without Interest- Increase to Rs 20 Lakhs at 3% Interest Rate- Minister Rajanna ಸಾಲ ಮನ್ನಾ, ಬಡ್ಡಿ ಇಲ್ಲದೇ 5 ಲಕ್ಷ- ಶೇ.3 ಬಡ್ಡಿ ದರದಲ್ಲಿ 20 ಲಕ್ಷ ರೂ.ಗೆ ಹೆಚ್ಚಳ-ಸಚಿವ ರಾಜಣ್ಣ

ಬೆಂಗಳೂರು : ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ನೀಡುವ ಸಾಲದ ಮೊತ್ತವನ್ನು 5 ಲಕ್ಷ ರು ಹೆಚ್ಚಳ ಮಾಡಲಾಗುವುದು ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಶೂನ್ಯ ಬಡ್ಡಿ ದರ ಸಾಲವನ್ನು 3 ಲಕ್ಷ ರೂ.ನಿಂದ 5 ಲಕ್ಷ ರೂ.ಗೆ ಹೆಚ್ಚಳ ಮಾಡುವುದಾಗಿ ಭರವಸೆ ನೀಡಲಾಗಿತ್ತು.

ಶೇ3 ರಷ್ಟು ಬಡ್ಡಿ ದರದಲ್ಲಿ ನೀಡುವ ಮಧ್ಯಮಾವಧಿ ಸಾಲದ ಮೊತ್ತವನ್ನು 10 ಲಕ್ಷ ರೂ.ನಿಂದ 20 ಲಕ್ಷ ರೂಪಾಯಿಗೆ ಹೆಚ್ಚಳ ಮಾಡಲು ಭರವಸೆ ನೀಡಲಾಗಿತ್ತು ಪ್ರಸಕ್ತ ಮುಂಗಾರು ಹಂಗಾಮಿನಲ್ಲಿಯೇ ಇದನ್ನು ಜಾರಿಗೊಳಿಸಿ ರೈತರಿಗೆ ಸಾಲ ಸೌಲಭ್ಯ ಕಲ್ಪಿಸಲಾಗುವುದು ಎಂದು ಹೇಳಿದ್ದಾರೆ.

ರೈತರಿಗೆ ಗುರಿ ಮೀರಿ ಸಾಲ ನೀಡಲಾಗುತ್ತಿದೆ. ಕಳೆದ ವರ್ಷ 12,000 ಕೋಟಿ ರೂ. ಸಾಲ ನೀಡುವ ಗುರಿ ಹೊಂದಿದ್ದು, ಸುಮಾರು 20 ಸಾವಿರ ಕೋಟಿ ರೂಪಾಯಿ ಸಾಲ ವಿತರಣೆ ಮಾಡಲಾಗಿದೆ. ಅದೇ ರೀತಿ ಈ ವರ್ಷವೂ ರೈತರಿಗೆ ಯಾವುದೇ ತೊಂದರೆಯಾಗದಂತೆ ಸಾಲ ವಿತರಿಸಲಾಗುವುದು ಎಂದು ಸಚಿವರು ಭರವಸೆ ನೀಡಿದ್ದಾರೆ.ಮಂಡ್ಯ ಕಬ್ಬಿನ ಬೆಳೆಗಾಗಿ ವಿಸಿ ನಾಲೆಗೆ ಕಾವೇರಿ ನೀರು ಬಿಡುಗಡೆ

ರೈತರಿಗೆ 50,000 ರೂ. 1 ಲಕ್ಷ ರೂ.ವರೆಗಿನ ಸಾಲ ಮನ್ನಾ ಮಾಡುವ ಪ್ರಕ್ರಿಯೆ ಇನ್ನೂ ಪೂರ್ಣಗೊಂಡಿಲ್ಲ. ಈ ಬಗ್ಗೆ ಶೀಘ್ರವೇ ಸಭೆ ನಡೆಸಿ ಸಾಲ ಮನ್ನಾ ಸಮರ್ಪಕ ಜಾರಿಗೆ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ.

Share This Article
Leave a comment