ನವ್ಯಶ್ರೀ (23) ನೇಣಿಗೆ ಶರಣಾದ ದುರ್ದೈವಿ. ಇವರು ತಮ್ಮ ಮನೆಯ ಕಾರ್ ಶೆಡ್‌ನಲ್ಲಿ ಶನಿವಾರ ರಾತ್ರಿಯೇ ನೇಣಿಗೆ ಶರಣಾಗಿದ್ದಾರೆ. 5 ತಿಂಗಳ ಹಿಂದಷ್ಟೇ ಆಕಾಶ್ ಎಂಬುವರನ್ನು ವಿವಾಹವಾಗಿದ್ದರು. ಶಿವಮೊಗ್ಗದ ಖ್ಯಾತ ವೈದ್ಯೆ ಡಾ. ಜಯಶ್ರೀ ಹೊಮ್ಮರಡಿ ಅವರ ಸೊಸೆಯೂ ಹೌದು.
ನವ್ಯಶ್ರೀ ಶನಿವಾರ ರಾತ್ರಿ ತುಳಸಿ ಪೂಜೆಯನ್ನು ನೆರವೇರಿಸಿ ಅರಿಶಿನ, ಕುಂಕುಮವನ್ನೂ ಸ್ವೀಕರಿಸಿದ್ದರು ಎನ್ನಲಾಗಿದೆ. ಬಳಿಕ ಕಾರು ಶೆಡ್‌ನಲ್ಲಿ ನೇಣು ಬಿಗಿದು, ಆತ್ಮಹತ್ಯೆಗೆ ಶರಣಾಗಿದ್ದಾರೆ. ಕೌಟುಂಬಿಕ ಸಮಸ್ಯೆ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ನವ್ಯಶ್ರೀ ಕುಟುಂಬಸ್ಥರ ಶಂಕೆ ವ್ಯಕ್ತಪಡಿಸಿದ್ದಾರೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮರಣೋತ್ತರ ಪರೀಕ್ಷೆಗೆ ಮೃತದೇಹ ರವಾನೆ ಮಾಡಲಾಗಿದೆ. ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
More Stories
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
ಕ್ಷಣಾರ್ಧದಲ್ಲಿ 33 ಲಕ್ಷ ಕಳ್ಳತನ: ಓರ್ವ ಆರೋಪಿ ಬಂಧನ
ಚಾಮರಾಜನಗರದಲ್ಲಿ ಖಾಸಗಿ ಬಸ್ ಪಲ್ಟಿ: ಓರ್ವ ಸಾವು, 30ಕ್ಕೂ ಹೆಚ್ಚು ಜನರಿಗೆ ಗಾಯ