ಕೋಲಾರ: ಕೋಲಾರ ಜಿಲ್ಲೆಯ ಮುಳಬಾಗಿಲು ತಾಲ್ಲೂಕಿನಲ್ಲಿ ಭೀಕರ ಅಪಘಾತ ಸಂಭವಿಸಿ ಐವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ.
ಬೊಲೆರೋ ವಾಹನವು ಮೂರು ದ್ವಿಚಕ್ರವಾಹನಗಳಿಗೆ ಸರಣಿ ಡಿಕ್ಕಿ ಹೊಡೆದ ಪರಿಣಾಮ, ಬೈಕ್ ನಲ್ಲಿ ತೆರಳುತ್ತಿದ್ದ ಐವರು ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ.
ಅಪಘಾತದ ಸ್ಥಳ:
ಮುಳಬಾಗಿಲು ತಾಲ್ಲೂಕಿನ ಎನ್.ವಡ್ಡಹಳ್ಳಿ-ಗುಡಿಪಳ್ಳಿ ಮುಖ್ಯರಸ್ತೆಯಲ್ಲಿ ಈ ದುರ್ಘಟನೆ ನಡೆದಿದೆ. ಕೂಲಿ ಕೆಲಸ ಮುಗಿಸಿ ತಮ್ಮ ಗ್ರಾಮಕ್ಕೆ ತೆರಳುತ್ತಿದ್ದಂತ ಕೋನಗುಂಟೆ ಗ್ರಾಮದ ರಾಧಪ್ಪ (45), ವೆಂಕಟರಾಮಪ್ಪ (45), ಪತ್ನಿ ಅಲುವೇಲಮ್ಮ (30) ಮತ್ತು ಮತ್ತಿಬ್ಬರು ಅಪರಿಚಿತರು ಈ ಅಪಘಾತದಲ್ಲಿ ಸಾವಿಗೀಡಾಗಿದ್ದಾರೆ.
ಪರಿಸ್ಥಿತಿ:
ಬೊಲೆರೋ ವಾಹನವು ನಿಯಂತ್ರಣ ತಪ್ಪಿ ಮೂರು ದ್ವಿಚಕ್ರವಾಹನಗಳಿಗೆ ಸರಣಿ ಡಿಕ್ಕಿ ಹೊಡೆದು ಈ ಭೀಕರ ಅಪಘಾತಕ್ಕೆ ಕಾರಣವಾಗಿದೆ. ಮೃತರ ದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸ್ಥಳೀಯ ಆಸ್ಪತ್ರೆಗೆ ಕಳುಹಿಸಲಾಗಿದೆ.ಇದನ್ನು ಓದಿ –ಗೃಹಲಕ್ಷ್ಮಿ ಯೋಜನೆ ಸ್ಥಗಿತ ಮಾಡುವ ಪ್ರಶ್ನೆಯೇ ಇಲ್ಲ: ಸಿಎಂ ಸಿದ್ದರಾಮಯ್ಯ
ಪೊಲೀಸರಿಂದ ತನಿಖೆ:
ಈ ಘಟನೆ ಕುರಿತು ನಂಗಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪ್ರಕರಣದ ಕುರಿತು ತನಿಖೆ ಆರಂಭವಾಗಿದೆ.
More Stories
ಗೃಹಲಕ್ಷ್ಮಿ ಯೋಜನೆ ಸ್ಥಗಿತ ಮಾಡುವ ಪ್ರಶ್ನೆಯೇ ಇಲ್ಲ: ಸಿಎಂ ಸಿದ್ದರಾಮಯ್ಯ
87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಇತಿಹಾಸ ಸೃಷ್ಟಿಸಲಿದೆ: ಸಚಿವ ಚಲುವರಾಯಸ್ವಾಮಿ
ಸಿಎಂ ಪತ್ನಿಯ ನಿವೇಶನ ಹಗರಣ: ದೂರು ಹಿಂಪಡೆಯಲು ಆಮಿಷ ನೀಡಿದ ಆರೋಪ