ರಾಮನಗರ : ಮೇಕೆದಾಟು (Mekedatu) ಬಳಿಯ ಸಂಗಮದ ಕಾವೇರಿ ನದಿಯಲ್ಲಿ ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರು ಪಾಲಾದ ಘಟನೆ ನಡೆದಿದೆ.
ಹರ್ಷಿತಾ (20), ಅಭಿಷೇಕ್ (20), ತೇಜಸ್ (21), ವರ್ಷ (20) ಹಾಗೂ ನೇಹಾ (19) ಮೃತರು ಎಂದು ಗುರುತಿಸಲಾಗಿದ್ದು , ಇನ್ನು 7 ಮಂದಿ ವಿದ್ಯಾರ್ಥಿಗಳು ಪಾರಾಗಿದ್ದಾರೆ.
ಮೃತರು ಬೆಂಗಳೂರು (Bengaluru) ಮೂಲದ ಇಂಜಿನಿಯರಿಂಗ್ ವಿದ್ಯಾರ್ಥಿಗಳು ಎಂದು ತಿಳಿದು ಬಂದಿದ್ದು ,ಪ್ರವಾಸಕ್ಕೆ ಬಂದಿದ್ದ ಇವರು ಮಧ್ಯಾಹ್ನ ನೀರಿನಲ್ಲಿ ಆಟವಾಡುತ್ತಿದ್ದ ವೇಳೆ ನದಿಯ ಸುಳಿಯಲ್ಲಿ ಸಿಲುಕಿ ಸಾವಿಗೀಡಾಗಿದ್ದಾರೆ .
ಸಾತನೂರು ಪೊಲೀಸರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ , ಮೃತದೇಹವನ್ನು ಪೊಲೀಸರು ನೀರಿನಿಂದ ಹೊರಗೆ ತೆಗೆದಿದ್ದಾರೆ.ಎಸ್.ಎಂ ಕೃಷ್ಣ ಆರೋಗ್ಯದಲ್ಲಿ ಏರುಪೇರು; ಮಣಿಪಾಲ್ ಆಸ್ಪತ್ರೆಗೆ ದಾಖಲು
ಸಾತನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
More Stories
ಮೈಸೂರಿನಲ್ಲಿ ಚಲಿಸುತ್ತಿದ್ದ KSRTC ಬಸ್ಗೆ ಬೆಂಕಿ: 50 ಕ್ಕೂ ಹೆಚ್ಚು ಪ್ರಯಾಣಿಕರು ರಕ್ಷಣೆ
ಪಿ.ವಿ ಸಿಂಧು ಡಿ.22 ರಂದು ಹಸೆಮಣೆ ಏರಲಿದ್ದಾರೆ
ವಿಧಾನ ಪರಿಷತ್ ಸಚಿವಾಲಯದಲ್ಲಿ ನೇಮಕಾತಿ: ಹುದ್ದೆಗಳ ವಿವರ, ವೇತನ ಮತ್ತು ಅರ್ಜಿ ದಿನಾಂಕ