ನಾಲ್ಕು ದಿನದ ಹಿಂದೆ ಐದು ವರ್ಷದ ಹೆಣ್ಣು ಮಗು ಅಪಹರಣ ಆಗಿದೆ ಅಂತ ದೂರು ನೀಡಲಾಗಿತ್ತು. ಈ ಪ್ರಕರಣಕ್ಕೆ ಈಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಅಪಹರಣ ಕ್ಕೆ ಒಳಗಾಗಿದೆ ಎಂಬ ಶಂಕೆಯ ನಡುವೆಯೂ
ಇಂದು ಪಕ್ಕದ ಮನೆಯಲ್ಲಿಯೇ ಮಗುವಿನ ಶವ ಪತ್ತೆಯಾದ ಘಟನೆ ಹುಬ್ಬಳ್ಳಿಯ ಭಾರತ ನಗರದಲ್ಲಿ ಜರುಗಿದೆ.
ಹನುಮಂತಪ್ಪ ಗಾಳಪ್ಪನವರ್ ಪುತ್ರಿ 5 ವರ್ಷದ ಶ್ರೇಯಾ ಶವವಾಗಿ ಪತ್ತೆಯಾದ ಬಾಲಕಿ.
ಪಕ್ಕದ ಮನೆಯ ನೀರಿನ ಟ್ಯಾಂಕ್ ನಲ್ಲಿ ಶವವಾಗಿ ಪತ್ತೆಯಾಗಿದೆ. ನಾಲ್ಕು ದಿನದ ಹಿಂದೆಯಷ್ಟೇ ಮಗು ನಾಪತ್ತೆಯಾಗಿತ್ತು. ಆದರೆ ಇಂದು ಶವವಾಗಿ ಪತ್ತೆಯಾಗಿದೆ.
ಹನುಮಂತಪ್ಪ ಗಾಳಪ್ಪನವರ್ ತಮ್ಮದೇ ಇನ್ನೊಂದು ಮನೆಯಲ್ಲಿ ಬಾಡಿಗೆಗೆ ನೀಡಿದ್ದರು. ಇದೀಗ ಅವರ ಮನೆಯಲ್ಲಿ ಶವ ಪತ್ತೆಯಾಗಿದ್ದರಿಂದ ಪೊಲೀಸರು ಬಾಡಿಗೆದಾರರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- ರಾಜ್ಯದಲ್ಲಿ ಮುಂದಿನ 5 ದಿನ ಮಳೆಯ ಮುನ್ಸೂಚನೆ
- 10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
- ನಾನೊಬ್ಬ ರೈತ (ರೈತ ದಿನಾಚರಣೆಯ ಪ್ರಯುಕ್ತ )
- ಹೊರರಾಜ್ಯದ ಯುವತಿಯರನ್ನ ಕರೆಸಿ ಹೈಟೆಕ್ ವೇಶ್ಯಾವಾಟಿಕೆ ದಂಧೆ: ಆರೋಪಿ ಬಂಧನ
- ಬೆಂಗಳೂರಿನಲ್ಲಿ ಮಹಿಳೆಗೆ 30 ಲಕ್ಷ ರೂ. ವಂಚನೆ!
More Stories
ರಾಜ್ಯದಲ್ಲಿ ಮುಂದಿನ 5 ದಿನ ಮಳೆಯ ಮುನ್ಸೂಚನೆ
10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
ಹೊರರಾಜ್ಯದ ಯುವತಿಯರನ್ನ ಕರೆಸಿ ಹೈಟೆಕ್ ವೇಶ್ಯಾವಾಟಿಕೆ ದಂಧೆ: ಆರೋಪಿ ಬಂಧನ